ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ (Darshan) ಸೇರಿದಂತೆ ಐವರು ಆರೋಪಿಗಳ ಜೈಲು ಸ್ಥಳಾಂತರ ಕೋರಿರುವ ಅರ್ಜಿ ಇಂದು (ಶನಿವಾರ) ವಿಚಾರಣೆಗೆ ಬರಲಿದೆ. ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳಿಂದ ಬೇರೆ ಜೈಲುಗಳಿಗೆ ಸ್ಥಳಾಂತರ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಇಂದು ಸಿಸಿಎಚ್ 57ನೇ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.
ಆರೋಪಿಗಳು ಜಾಮೀನು ಪಡೆಯುವಾಗ ಯಾವ ಯಾವ ಜೈಲಿನಲ್ಲಿ ಇದ್ದರೋ ಅದೇ ಜೈಲಿಗೆ ಶಿಫ್ಟ್ ಮಾಡಬೇಕು. ಜೈಲಿನ ಭದ್ರತೆ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ವರ್ಗಾವಣೆ ಮಾಡುವಂತೆ ಅರ್ಜಿ ಸಲ್ಲಿಸಲಾಗಿದೆ. ಇಂದು ಆರೋಪಿಗಳ ಪರ ವಕೀಲರಿಂದ ಆಕ್ಷೇಪಣೆ ಸಲ್ಲಿಕೆಯಾಗಲಿದ್ದು, ಪರಪ್ಪನ ಅಗ್ರಹಾರ ಜೈಲಿನಿಂದ ಸ್ಥಳಾಂತರ ಮಾಡದಂತೆ ಆಕ್ಷೇಪಣೆ ಸಲ್ಲಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ದರ್ಶನ್ ನೋಡಲು ಜೈಲಿಗೆ ಆಗಮಿಸಿದ ಪತ್ನಿ ವಿಜಯಲಕ್ಷ್ಮಿ
ನಟ ದರ್ಶನ್ ಬಳ್ಳಾರಿ ಜೈಲಿಗೆ, ಜಗದೀಶ್ ಮತ್ತು ಲಕ್ಷ್ಮಣ್ ಶಿವಮೊಗ್ಗ ಜೈಲಿಗೆ, ನಾಗರಾಜ್ ಕಲಬುರಗಿ ಜೈಲಿಗೆ, ಪ್ರದೂಷ್ ಬೆಳಗಾವಿ ಜೈಲಿಗೆ ಶಿಫ್ಟ್ ಮಾಡುವಂತೆ ಹಾಗೂ ಪವಿತ್ರಾ ಗೌಡ ಮತ್ತು ಅನುಕುಮಾರ್ ಪರಪ್ಪನ ಅಗ್ರಹಾರ ಜೈಲಿನಲ್ಲೇ ಉಳಿಯುವಂತೆ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಈಗಾಗಲೇ ಪ್ರದೂಷ್ ಪರ ವಕೀಲರಿಂದ ಆಕ್ಷೇಪಣೆ ಸಲ್ಲಿಕೆಯಾಗಿದ್ದು, ಉಳಿದ ನಾಲ್ವರು ಆರೋಪಿಗಳ ಪರ ಇಂದು ಆಕ್ಷೇಪಣೆ ಸಲ್ಲಿಕೆಯಾಗಲಿದೆ.
ಶೀಘ್ರದಲ್ಲೇ ಟ್ರಯಲ್ ಶುರುವಾಗಲಿದ್ದು, ಟ್ರಯಲ್ ಶುರುವಾದಲ್ಲಿ ಆರೋಪಿಗಳನ್ನ ಕೋರ್ಟ್‌ಗೆ ಹಾಜರುಪಡಿಸಬೇಕು. ಬಳ್ಳಾರಿ ಮತ್ತು ಇತರೆ ಜೈಲುಗಳಿಗೆ ಶಿಫ್ಟ್ ಮಾಡಿದರೆ ಕರೆ ತರುವುದು ಕಷ್ಟವಾಗುತ್ತೆ. ಆದ್ದರಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇರಿಸುವಂತೆ ಆಕ್ಷೇಪಣೆ ಸಲ್ಲಿಸಿ ವಾದ ಮಂಡನೆ ಮಾಡುವ ಸಾಧ್ಯತೆಯಿದೆ. ಇದನ್ನೂ ಓದಿ: ದರ್ಶನ್ ಶಿಫ್ಟ್‌ಗೆ ಹೆಚ್ಚಿದ ಒತ್ತಡ – ಪರಪ್ಪನ ಅಗ್ರಹಾರದಲ್ಲೇ ಉಳಿಸಿಕೊಳ್ಳಲು ವಕೀಲರ ಹರಸಾಹಸ