ಸ್ಯಾಂಡಲ್‌ವುಡ್ ನಟ ದರ್ಶನ್‌ಗೆ (Darshan) ಫೆ.16ರಂದು ಹುಟ್ಟುಹಬ್ಬ. ಈ ಹಿನ್ನೆಲೆ ಫ್ಯಾನ್ಸ್‌ಗೆ ದಾಸ ದರ್ಶನ್ ಪ್ರೀತಿಯ ಮನವಿವೊಂದನ್ನು ಮಾಡಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಹುಟ್ಟುಹಬ್ಬ (Birthday) ಆಚರಿಸಿಕೊಳ್ಳಲ್ಲ ಎಂದು ಅಭಿಮಾನಿಗಳಿಗೆ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ಇದನ್ನೂ ಓದಿ:ಅನ್‌ಲಾಕ್ ರಾಘವನ ಬಗ್ಗೆ ರೆಚೆಲ್ ಡೇವಿಡ್ ಹೇಳಿದ್ದಿಷ್ಟು!
Advertisement
ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನಮಸ್ಕಾರ ಹೇಳಲಾ, ಥ್ಯಾಂಕ್ಸ್ ಹೇಳೋದಾ ನೀವೆಲ್ಲರೂ ಕೊಟ್ಟಿರುವ ಪ್ರೀತಿಗೆ ಏನು ಹೇಳಿದ್ರೂ ಕಮ್ಮಿನೇ. ಅದನ್ನು ಹೇಗೆ ಹಿಂದಿರುಗಿಸಿ ಕೊಡೋದು ನನಗೆ ಗೊತ್ತಾಗುತ್ತಿಲ್ಲ. ಆದರೆ ಇದೇ ಫೆ.16ಕ್ಕೆ ನನ್ನ ಹುಟ್ಟುಹಬ್ಬ. ಪ್ರತಿಯೊಬ್ಬರಿಗೂ ಭೇಟಿಯಾಗಿ ಥ್ಯಾಂಕ್ಸ್ ಹೇಳೋಣ ಅಂತ ಆಸೆ ಇತ್ತು. ನನ್ನ ಆರೋಗ್ಯ ಸಮಸ್ಯೆಯಿಂದ ತುಂಬಾ ಹೊತ್ತು ನಿಂತುಕೊಳ್ಳೋಕೆ ಆಗಲ್ಲ. ಹಾಗಾಗಿ ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಅಂತ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ.
Advertisement
View this post on Instagram
Advertisement
ನಿಂತುಕೊಂಡು ಎಲ್ಲರಿಗೂ ವಿಶ್ ಮಾಡೋಕೆ ನನ್ನ ಕೈಯಲ್ಲಿ ಆಗಲ್ಲ. ಒಂದು ಇಂಜೆಕ್ಷನ್ ತೆಗೆದುಕೊಂಡಾಗ ಒಂದು 15ರಿಂದ 20 ದಿನ ಆರಾಮ ಆಗಿರುತ್ತೇನೆ. ಅದರ ಪವರ್ ಕಮ್ಮಿಯಾಗುತ್ತಿದ್ದಂತೆ ನೋವು ಶುರುವಾಗುತ್ತದೆ. ಆಪರೇಷನ್ ಅನ್ನೋದು ಕಟ್ಟಿಟ್ಟ ಬುಟ್ಟಿ. ಅದು ನನಗೂ ಗೊತ್ತು. ಅದನ್ನು ಮುಂದೆ ಮಾಡಿಸಲೇಬೇಕು ನಾನು. ಈಗ ಇರೋ ಕೆಲಸಗಳಲ್ಲಿ ಈಗಾಗಲೇ ಒಪ್ಪಿಕೊಂಡಿರೋದನ್ನು ಮಾಡಬೇಕಿದೆ. ನನ್ನ ನಿರ್ಮಾಪಕರಿಗೆ ಥ್ಯಾಂಕ್ಯೂ ಹೇಳ್ತೀನಿ. ಯಾಕೆಂದರೆ ಇಷ್ಟು ದಿನ ನನಗಾಗಿ ಕಾದಿದ್ದಾರೆ. ಅವರಿಗೆ ನಾನು ಅನ್ಯಾಯ ಮಾಡಬಾರದು ಅಂತ ಎಷ್ಟು ದಿನ ಸಾಧ್ಯವಾಗುತ್ತದೋ ಅಷ್ಟು ದಿನ ಆಪರೇಷನ್ ಮುಂದಕ್ಕೆ ಹಾಕಲು ನೋಡ್ತಾ ಇದ್ದೀನಿ. ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ಪ್ರೀತಿಯ ಮನವಿ ಈ ವರ್ಷ ನನ್ನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಕ್ಷಮೆ ಇರಲಿ ಎಂದು ನಟ ಮನವಿ ಮಾಡಿದ್ದಾರೆ.
Advertisement
ಯಾವುದೇ ಊಹಾಪೋಹಗಳಿಗೆ ಕಿವಿ ಕೊಡಬೇಡಿ. 101% ಹೌದು ನಾನು ನಿರ್ಮಾಪಕ ಸೂರಪ್ಪ ಬಾಬು ಅವರಿಗೆ ದುಡ್ಡು ವಾಪಸ್ ಕೊಟ್ಟಿದ್ದೇನೆ. ನನ್ನ ಹತ್ತಿರ ಸಿನಿಮಾಗೆ ಬರುವಾಗಲೇ ಸಿಕ್ಕಾಪಟ್ಟೆ ಕಮಿಟ್‌ಮೆಂಟ್ ಇತ್ತು. ಹಾಗಾಗಿ ವಾಪಸ್ ಕೊಟ್ಟೆ. ಮುಂದೆ ನಾವಿಬ್ಬರೂ ಸಿನಿಮಾ ಮಾಡೇ ಮಾಡ್ತೀವಿ.
ಅದಷ್ಟೇ ಅಲ್ಲ, ಮುಂದೆ ನಾನು ಪ್ರೇಮ್ ಒಟ್ಟಾಗಿ ಸಿನಿಮಾ ಮಾಡೇ ಮಾಡುತ್ತೇವೆ. ನನ್ನ ಗುರುಗಳು, ನನ್ನ ಪ್ರೀತಿಯ ಸ್ನೇಹಿತೆಯ ಆಸೆ ಅದು. ಕೆವಿಎನ್ ಪ್ರೊಡಕ್ಷನ್‌ನವರು ಅವರು ಬೇರೆ ಸಿನಿಮಾ ಮಾಡ್ತಿದ್ದಾರೆ. ಮತ್ತೊಂದು ಪ್ರೊಡಕ್ಷನ್ ಅಂದಾಗ ಅವರಿಗೂ ಕಷ್ಟ ಆಗುತ್ತೆ. ಅದಕ್ಕೆ ಯಾರು ಯಾವುದೇ ಪ್ರೊಡಕ್ಷನ್ ಇಲ್ಲದೇ ಸುಮ್ಮನೆ ಇರತಾರಲ್ಲ ಅವರಿಗೆ ಅವಕಾಶ ಕೊಡೋಣ ಅಂತ ಎಂದಿದ್ದಾರೆ.
ನಿಮ್ಮ ಪ್ರೀತಿ, ಅಭಿಮಾನ, ಪ್ರೋತ್ಸಾಹ ನನ್ನ ಮೇಲೆ ಇರೋದಕ್ಕೆ ಯಾವಾಗಲೂ ಚಿರಋಣಿಯಾಗಿರುತ್ತೇನೆ. ಇದನ್ನು ನಾನೆಂದೂ ತೀರಿಸೋಕೆ ಆಗಲ್ಲ ಎಂದಿದ್ದಾರೆ. ಈ ವೇಳೆ, ನಾನು 3 ಜನರಿಗೆ ಥ್ಯಾಂಕ್ಸ್ ಹೇಳಬೇಕು. ಧನ್ವೀರ್ ಯಾವಾಗಲೂ ಪಾಪ ನನ್ನ ಜೊತೆಯಲಿಯೇ ಇರುತ್ತಿದ್ದರು. ನನ್ನ ದೊಡ್ಡ ಬೆಂಬಲವಾಗಿ ನಿಂತರು. ‘ಬುಲ್ ಬುಲ್’ ರಚಿತಾ ರಾಮ್‌ಗೂ ಥ್ಯಾಂಕ್ಯೂ. ನನ್ನ ಪ್ರಾಣ ಸ್ನೇಹಿತೆ ಆಗಿರುವ ರಕ್ಷಿತಾಗೂ ಥ್ಯಾಂಕ್ಸ್. ನನ್ನ ಎಲ್ಲಾ ಸೆಲೆಬ್ರಿಟಿಗಳು ಧನ್ಯವಾದಗಳು.
ಇದೇ ವೇಳೆ, ಬೇರೆ ಭಾಷೆಯಲ್ಲಿ ಸಿನಿಮಾ ಮಾಡೋ ಬಗ್ಗೆ ದರ್ಶನ್ ಕ್ಲ್ಯಾರಿಟಿ ಕೊಟ್ಟಿದ್ದಾರೆ. ಇಲ್ಲಿಯೇ ಇಷ್ಟೊಂದು ಪ್ರೀತಿ ಅಭಿಮಾನ ತೋರಿಸಿದ್ದೀರಾ. ಸುಮ್ಮನೆ ಎಲ್ಲಿಗೆ ಅಂತಾ ಹೋಗಲಿ. ಸಾಯೋವರೆಗೂ ಇಲ್ಲಿಯೇ ಇರುತ್ತೇನೆ. ಇಲ್ಲಿ ಬಿಟ್ಟು ನಾನು ಹೋಗೋಕೆ ಆಗೋದಿಲ್ಲ. ಕಾವೇರಿ ಹುಟ್ಟಿರೋದು ಎಲ್ಲಿ ಅಂತ ಎಲ್ಲರಿಗೂ ಚೆನ್ನಾಗಿ ಗೊತ್ತು. ನಾನು ಕೂಡ ಇಲ್ಲೇ ಹುಟ್ಟಿರೋದು. ಕಾವೇರಿ ಎಲ್ಲಾ ಕಡೆ ಹರಿದುಕೊಂಡು ಬರುತ್ತಾಳೆ. ಆದರೆ ನನ್ನದು ಮೇಕೇದಾಟು ಮಾತ್ರ ಸೀಮಿತ. ನನ್ನ ಸಿನಿಮಾಳು ಡಬ್ ಆಗಿ ಬೇರೆಕಡೆ ಹೋದರೆ ಅದು ಬೇರೆ ಥರ ಆಗುತ್ತದೆ. ಯಾವಾಗಲೂ ನಾನು ಕನ್ನಡ ಸಿನಿಮಾನೇ ಮಾಡೋದು ಎಂದಿದ್ದಾರೆ.