ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಸಿನಿ ತಂಡ ಇತ್ತೀಚೆಗಷ್ಟೆ ಚಿತ್ರದ ಮೊದಲ ಲಿರಿಕಲ್ ಹಾಡನ್ನು ಬಿಡುಗಡೆ ಮಾಡುವ ಮೂಲಕ ಅಭಿಮಾನಿಗಳಿಗೆ ಗುಡ್‍ನ್ಯೂಸ್ ನೀಡಿತ್ತು. ಇದೀಗ ಚಿತ್ರತಂಡ ಹೋಳಿ ಹಬ್ಬಕ್ಕೆ ಮತ್ತೊಂದು ಸರ್ಪ್ರೈಸ್ ಕೊಟ್ಟಿದೆ.
ಚಿತ್ರದ ನಿರ್ದೇಶಕ ತರುಣ್ ಸುಧೀರ್ ಟ್ವೀಟ್ ಮಾಡುವ ಮೂಲಕ ಆ ಸರ್ಪ್ರೈಸ್ ಬಗ್ಗೆ ತಿಳಿಸಿದ್ದಾರೆ. ಅಂದರೆ ಹೋಳಿ ಹಬ್ಬಕ್ಕೆ ‘ರಾಬರ್ಟ್’ ಸಿನಿಮಾದ ಎರಡನೇ ಸಾಂಗ್ ರಿಲೀಸ್ ಆಗಲಿದೆ. ಹೀಗಾಗಿ ದರ್ಶನ್ ಅಭಿಮಾನಿಗಳಿಗೆ ಹೋಳಿ ಹಬ್ಬಕ್ಕೆ ಉಡುಗೊರೆ ಸಿಕ್ಕಿದಂತಾಗಿದೆ.
“ಈ ಹಾಡು ನನ್ನ ಹೃದಯಕ್ಕೆ ತುಂಬಾ ಹತ್ತಿರವಾಗಿದೆ. ಈ ಸಾಂಗನ್ನು ಯಾವಾಗಲಾದರೂ ಕೇಳಿದರೆ ನಮಗೆ ಅಪಾರ ಶಕ್ತಿ ನೀಡುತ್ತದೆ. ಹೋಳಿ ಹಬ್ಬದ ಸಂಭ್ರಮಕ್ಕೆ ನಾವು ಸಿನಿಮಾದ ಎರಡನೇ ‘ಜೈಶ್ರೀರಾಮ್’ ಹಾಡನ್ನು ಬಿಡುಗಡೆ ಮಾಡುತ್ತಿದ್ದೇವೆ. ಮಾರ್ಚ್ 9 ರಂದು ಮಧ್ಯಾಹ್ನ 12.03 ನಿಮಿಷಕ್ಕೆ ಹಾಡು ಬಿಡುಗಡೆಯಾಲಿದೆ” ಎಂದು ಬರೆದುಕೊಂಡಿದ್ದಾರೆ.
‘ಜೈಶ್ರೀರಾಮ್’ ಹಾಡಿಗೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಈ ಹಿಂದೆ ‘ಹಡಗು ಹಿಡಿದು ಪಡೆಯೇ ಬರಲಿ, ಹೊಸಕಿ ಬಿಡುವೆ ಕಾಲಡಿ, ಡಿ.. ಡಿ ಬಾ ನಾ ರೆಡಿ’ ಹಾಡನ್ನು ಬಿಡುಗಡೆ ಮಾಡಿತ್ತು. ಇದೀಗ ‘ಜೈಶ್ರೀರಾಮ್’ ಹಾಡನ್ನು ರಿಲೀಸ್ ಮಾಡಲಿದೆ.
This song has been very close to my heart. It gives an immense energy when ever heard, on the occasion of #Holi we r releasing the 2nd song #JaiShriRam from #Roberrt on 9th March @ 12.03 pm.#JaiShriRam#DBoss #RoberrtSecondSong@UmapathyFilms @aanandaaudio @ArjunjanyaAJ pic.twitter.com/SaIuvSvJDb
— Tharun Sudhir (@TharunSudhir) March 7, 2020
ಸಂಜಯ್, ಅಕ್ಬರ್ ಹಾಗೂ ರಾಬರ್ಟ್ ಎಂದು ಮೂರು ಪಾತ್ರದಲ್ಲಿ ದರ್ಶನ್ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆಶಾ ಭಟ್ ಸಿನಿಮಾದ ನಾಯಕಿಯಾಗಿದ್ದು, ಜಗಪತಿ ಬಾಬು ವಿಲನ್ ಆಗಿ ದರ್ಶನ್‍ಗೆ ಟಕ್ಕರ್ ಕೊಟ್ಟಿದ್ದಾರೆ. ನಿರ್ದೇಶಕ ತರುಣ್ ಸುಧೀರ್ ಸಿನಿಮಾದ ಆ್ಯಕ್ಷನ್ ಕಟ್ ಹೇಳಿದ್ದು, ಉಮಾಪತಿ ಬಂಡವಾಳ ಹಾಕಿದ್ದಾರೆ. ಅರ್ಜುನ್ ಜನ್ಯ ಸಂಗೀತ ಹಾಗೂ ಹಿನ್ನೆಲೆ ಸಂಗೀತ ನೀಡಿದ್ದಾರೆ.