ನಟ ದರ್ಶನ್ (Darshan) ಅವರಂತೆಯೇ ಪುತ್ರ ವಿನೀಶ್‌ಗೆ (Vineesh) ಪ್ರಾಣಿಗಳ ಮೇಲೆ ಪ್ರೀತಿಯಿದೆ. ಅಪ್ಪನಂತೆ ಕುದುರಿ ಸವಾರಿ ಮಾಡಿರುವ ವಿನೀಶ್ ಫೋಟೋ ಇದಕ್ಕೆ ಸಾಕ್ಷಿಯಾಗಿದೆ. ಇದನ್ನೂ ಓದಿ:ಕೊನೆಗೂ `ದಾಸ’ನಿಗೆ ವಿದೇಶಕ್ಕೆ ತೆರಳಲು ಅನುಮತಿ ಕೊಟ್ಟ ಕೋರ್ಟ್



ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೇಲ್ ಮೇಲೆ ದರ್ಶನ್ ಹೊರಬಂದ್ಮೇಲೆ ಪತಿಯ ವ್ಯವಹಾರವನ್ನು ವಿಜಯಲಕ್ಷ್ಮಿಯವರೇ ನೋಡಿಕೊಳ್ತಿದ್ದಾರೆ. ದರ್ಶನ್‌ಗೆ ಎಲ್ಲೇ ಶೂಟಿಂಗ್ ಇದ್ರೂ ಅಥವಾ ಯಾವುದೇ ಕಾರ್ಯಕ್ರಮ ಆಗಿದ್ರೂ ಪತ್ನಿ ಜೊತೆಯಲ್ಲಿ ಇರುತ್ತಾರೆ. ಬಿಡುವಿನ ಸಮಯದಲ್ಲಿ ಪತ್ನಿ ಮತ್ತು ಮಗನೊಂದಿಗೆ ಸಮಯ ಕಳೆಯುತ್ತಿದ್ದಾರೆ. ಇದು ಫಾನ್ಸ್‌ಗೆ ಖುಷಿ ಕೊಟ್ಟಿದೆ. ಈ ಜೋಡಿ ಮೇಲೆ ಕೆಟ್ಟ ದೃಷ್ಟಿ ಬೀಳದಿರಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.
ಇದೆಲ್ಲದರ ನಡುವೆ, ‘ಡೆವಿಲ್’ ಸಿನಿಮಾದ ಚಿತ್ರೀಕರಣವು ಭರದಿಂದ ಸಾಗುತ್ತಿದೆ. ದರ್ಶನ್ ಜೊತೆ ರಚನಾ ರೈ, ವಿನಯ್ ಗೌಡ, ಶರ್ಮಿಳಾ ಮಾಂಡ್ರೆ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ತಾರಕ್ ಡೈರೆಕ್ಟರ್ ಮಿಲನಾ ಪ್ರಕಾಶ್ ಡೆವಿಲ್ ಚಿತ್ರದ ನಿರ್ದೇಶನ ಮಾಡುತ್ತಿದ್ದಾರೆ.

