ಮೈಸೂರು: ಇಂದು ಕೊನೆಯ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಭಕ್ತರೆಲ್ಲರೂ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಹೋಗಿ ತಾಯಿಗೆ ಪೂಜೆ ಸಲ್ಲಿಸುತ್ತಿದ್ದಾರೆ. ಆದರೆ ನಟ ದರ್ಶನ್ ಅವರು ತಮ್ಮ ಫಾರ್ಮ್ ಹೌಸ್ನಲ್ಲಿಯೇ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ನಟ ದರ್ಶನ್ ಅವರು ಪ್ರತಿವರ್ಷ ಆಷಾಢದ ಮೊದಲ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಹೋಗಿ ತಾಯಿ ದರ್ಶನ ಮಾಡಿಕೊಂಡು ವಿಶೇಷ ಪೂಜೆ ಸಲ್ಲಿಸುತ್ತಾರೆ. ಇಂದು ಆಷಾಢದ ಕೊನೆಗೆ ಶುಕ್ರವಾರವಾಗಿದ್ದು, ಮೈಸೂರಿನಲ್ಲಿರುವ ಫಾರ್ಮ್ ಹೌಸ್ನಲ್ಲಿದ್ದ ಚಾಮುಂಡಿ ವಿಗ್ರಹಕ್ಕೆ ಪೂಜೆ ಸಲ್ಲಿಸಿದ್ದಾರೆ.
ತಾಯಿ ಚಾಮುಂಡಿ ತಾಯಿಯ ವಿಗ್ರಹಕ್ಕೆ ಹೊಸ ಸೀರೆ ತೊಡಿಸಿ, ವಿವಿಧ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು. ದರ್ಶನ್ ಅವರು ತಾಯಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದ್ದಾರೆ. ನಟ ದರ್ಶನ್ ಜೊತೆ ಅವರ ಸ್ನೇಹಿತರು ಮತ್ತು ಫಾರ್ಮ್ ಹೌಸ್ನ ಸಿಬ್ಬಂದಿ ಪೂಜೆಯಲ್ಲಿ ಭಾಗಿಯಾಗಿದ್ದರು. ದರ್ಶನ್ ತಾಯಿಗೆ ಪೂಜೆ ಸಲ್ಲಿಸುತ್ತಿರುವ ಫೋಟೋಗಳನ್ನು ಕ್ಲಿಕ್ಕಿಸಿಕೊಂಡು ಅವರ ಅಭಿಮಾನಿಗಳ ಬಳಗ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳುತ್ತಿದ್ದಾರೆ.
ಮೈಸೂರಿನಲ್ಲಿ ಇಂದು ಮುಂಜಾನೆ 5.15 ರಿಂದಲೇ ಭಕ್ತರಿಗೆ ಚಾಮುಂಡಿ ತಾಯಿ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಹೀಗಾಗಿ ಸಾವಿರಾರು ಸಂಖ್ಯೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಬಂದು ತಾಯಿಯ ದರ್ಶನ ಮಾಡುತ್ತಿದ್ದಾರೆ. ರಾತ್ರಿ 10.30ರ ವರೆಗೂ ದೇವಿಯ ದರ್ಶನಕ್ಕೆ ಆಗಮಿಸಬಹುದು ಎಂದು ದೇವಾಲಯದ ಅರ್ಚಕರು ಮಾಹಿತಿ ನೀಡಿದ್ದಾರೆ.
ಕಡೆ ಆಷಾಢ ಶುಕ್ರವಾರ ಹಿನ್ನೆಲೆ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಫಾರ್ಮ್ ಹೌಸ್ ನಲ್ಲಿ ಇಂದು ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು .????@dasadarshan @vijayaananth2 @dinakar219 pic.twitter.com/5cgaOivhBg
— All India Challenging Star Darshan Fans (@AICSDF) July 26, 2019