ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಸಿನಿಮಾದ ಎರಡನೇ ಮೋಷನ್ ಪೋಸ್ಟರ್ ಸಂಕ್ರಾಂತಿ ಹಬ್ಬದ ಪ್ರಯುಕ್ತ ಬಿಡುಗಡೆಯಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ದರ್ಶನ್, “ಎಲ್ಲರಿಗೂ ವರ್ಷದ ಮೊದಲನೆಯ ಹಬ್ಬ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ಎಳ್ಳು, ಬೆಲ್ಲ ಸವಿಯುತ್ತಾ ನಮ್ಮ ರಾಬರ್ಟ್ ಚಿತ್ರದ ಎರಡನೇ ಲುಕ್ ಪೋಸ್ಟರ್ ನಿಮಗಾಗಿ ಬಿಡುಗಡೆ ಮಾಡುತ್ತಿದ್ದೇವೆ. ನೋಡಿ ಆಶೀರ್ವದಿಸಿ” ಎಂದು ಬರೆದುಕೊಂಡಿದ್ದಾರೆ.
ರಿಲೀಸ್ ಆಗಿರುವ ಲುಕ್ ಮೋಷನ್ ಪೋಸ್ಟರ್ 53 ಸೆಕೆಂಡ್‍ಗಳಿದ್ದು, ಅದ್ಭುತವಾಗಿ ಮೂಡಿ ಬಂದಿದೆ. ದರ್ಶನ್ ಆಂಜನೇಯ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಹೆಗಲ ಮೇಲೆ ರಾಮನ ಪಾತ್ರದ ಮಗುವನ್ನು ಕೂರಿಸಿಕೊಂಡಿದ್ದಾರೆ. ಪುಟ್ಟ ರಾಮ ರಾವಣ ನ ಪ್ರತಿಕೃತಿಯನ್ನು ದಹಿಸಲು ಬಿಲ್ಲು ಹಿಡಿದಿರುವುದನ್ನು ಕಾಣಬಹುದಾಗಿದೆ.
ಕುರುಕ್ಷೇತ್ರದಲ್ಲಿ ದುರ್ಯೋಧನನಾಗಿ ನೋಡಿದ್ದ ಅಭಿಮಾನಿಗಳು ‘ರಾಬರ್ಟ್’ ಸಿನಿಮಾದಲ್ಲಿ ಆಂಜನೇಯನ ಅವತಾರದಲ್ಲಿ ದರ್ಶನ್ ನೋಡಿ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. ರಿಲೀಸ್ ಆಗಿರುವ ಎರಡನೇ ಪೋಸ್ಟರ್ ಸಿನಿಮಾದ ಮೇಲಿನ ಕೂತುಹಲವನ್ನು ಮತ್ತುಷ್ಟು ಹೆಚ್ಚಿಸಿದೆ. ಈಗಾಗಲೇ ಬಿಡುಗಡೆಯಾದ ಕೆಲವೇ ನಿಮಷಗಳಲ್ಲಿ 2.7 ಲಕ್ಷಕ್ಕೂ ಅಧಿಕ ವೀವ್ಸ್ ಕಂಡಿದೆ. ಇನ್ನೂ 49 ಸಾವಿರ ಅಭಿಮಾನಿಗಳು ಲೈಕ್ಸ್ ಮಾಡಿದ್ದಾರೆ.
ಎಲ್ಲರಿಗೂ ವರ್ಷದ ಮೊದಲನೆಯ ಹಬ್ಬ ಮಕರ ಸಂಕ್ರಾಂತಿಯ ಹಾರ್ಧಿಕ ಶುಭಾಶಯಗಳು ????
ಎಳ್ಳು ಬೆಲ್ಲ ಸವಿಯುತ್ತಾ ನಮ್ಮ #Roberrt ಚಿತ್ರದ #RoberrtSecondLook ಮೋಷನ್ ಪೋಸ್ಟರ್ ನಿಮಗಾಗಿ ಬಿಡುಗಡೆ ಮಾಡುತ್ತಿದ್ದೇವೆ. ನೋಡಿ ಆಶೀರ್ವದಿಸಿ ????https://t.co/0TJYRLQXdC#HappySankranti
— Darshan Thoogudeepa (@dasadarshan) January 15, 2020
ಹಬ್ಬಕ್ಕೂ ಮೊದಲೇ ದರ್ಶನ್, “ನಮ್ಮ ರಾಬರ್ಟ್ ಚಿತ್ರದ ಎರಡನೇ ಮೋಷನ್ ಪೋಸ್ಟರ್ ಸಂಕ್ರಾಂತಿ ಹಬ್ಬದ ಪ್ರಯುಕ್ತ ಬೆಳಗ್ಗೆ ಆನಂದ್ ಆಡಿಯೋ ಯೂಟ್ಯಬ್ ಚಾನೆಲ್‍ನಲ್ಲಿ ಬಿಡುಗಡೆಯಾಗಲಿದೆ ಎಂದು” ಟ್ವೀಟ್ ಮಾಡಿ ತಿಳಿಸಿದ್ದರು. ಅದರಂತೆಯೇ ಹಬ್ಬಕ್ಕೆ ಅಭಿಮಾನಿಗಳಿಗೆ ಭರ್ಜರಿ ಉಡುಗೊರೆಯನ್ನೇ ಕೊಟ್ಟಿದ್ದಾರೆ.
‘ರಾಬರ್ಟ್’ ಸಿನಿಮಾ ತರುಣ್ ಸುಧೀರ್ ನಿರ್ದೇಶನದಲ್ಲಿ ಮೂಡಿ ಮಾಡುತ್ತಿದ್ದು, ಇತ್ತೀಚೆಗಷ್ಟೆ ಚಿತ್ರದ ಶೂಟಿಂಗ್ ಕೂಡ ಕಂಪ್ಲೀಟ್ ಆಗಿದೆ. ಚಿತ್ರದಲ್ಲಿ ದರ್ಶನ್ ಅವರಿಗೆ ನಟಿ ಆಶಾ ಭಟ್ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ‘ರಾಬರ್ಟ್’ ಮೂಲಕ ದರ್ಶನ್ ಮೊದಲ ಬಾರಿಗೆ ತ್ರಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.