ಬೆಂಗಳೂರು: ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ (Darshan) ಹಾಗೂ ಪವಿತ್ರ ಗೌಡಗೆ (Pavithra Gowda) ಈಗ ತಮ್ಮದೇ ಸಹಚರ, ಆರೋಪಿ ಪ್ರದೋಷ್ ಮಾಫಿ ಸಾಕ್ಷಿ (Approver) ಆಗುತ್ತಿರುವುದು ದೊಡ್ಡ ಕಂಟಕವಾಗಿ ಪರಿಣಮಿಸಿದೆ. ಪ್ರದೋಷ್ ನೀಡಲಿರುವ ಹೇಳಿಕೆಗೆ ಶತಾಯಗತಾಯ ತಡೆ ನೀಡಲು ದರ್ಶನ್ ಪರ ವಕೀಲರು ಕಾನೂನು ಸಮರಕ್ಕೆ ಸಜ್ಜಾಗಿದ್ದಾರೆ.
ಪ್ರದೋಷ್ (Pradosh) ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಿದರೆ, ಅದು ದರ್ಶನ್ ಹಾಗೂ ಪವಿತ್ರ ಗೌಡಗೆ ಕಾನೂನಾತ್ಮಕವಾಗಿ ಚಕ್ರವ್ಯೂಹವಾಗಲಿದೆ. ಹೀಗಾಗಿ ಪ್ರದೋಷ್ ಹೇಳಿಕೆ ದಾಖಲಿಸುವುದನ್ನು ತಡೆಹಿಡಿಯಲು ಅಥವಾ ಅದನ್ನು ಸಾಧ್ಯವಾದಷ್ಟು ತಡಮಾಡಲು ದರ್ಶನ್ ತಂಡ ಪ್ಲಾನ್ ಮಾಡಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಒಳ ಉಡುಪನ್ನು ತೆಗೆದು ದರ್ಶನ್ ಹೊಡೆದಿದ್ದರು – ಪ್ರದೋಷ್ ಸಲ್ಲಿಸಿದ ಅರ್ಜಿಯಲ್ಲಿ ಏನಿದೆ?
ಸೆಷನ್ಸ್ ಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಶೀಘ್ರದಲ್ಲೇ ಹೈಕೋರ್ಟ್ ಮೊರೆ ಹೋಗಲು ದರ್ಶನ್ ಕಾನೂನು ತಂಡ ಸಿದ್ಧತೆ ನಡೆಸುತ್ತಿದೆ ಎಂಬ ವಿಚಾರ ಈಗ ತಿಳಿದು ಬಂದಿದೆ. ಇದನ್ನೂ ಓದಿ: ಬೇಡ ಸರ್, ಹೊಡೆಯುವುದು ಬಿಡಿ ಎಂದರೂ ಹೊಡೆದರು; ಸಿಗರೇಟ್‌ನಿಂದ ಸುಟ್ಟರು – ದರ್ಶನ್ ಬಗ್ಗೆ ಮಾಫಿ ಸಾಕ್ಷಿ ಪ್ರದೋಷ್ ಹೇಳಿದ್ದೇನು?
ಸ್ಫೋಟಕ ವಿವರಗಳನ್ನು ಪ್ರದೋಷ್ ಕೋರ್ಟ್ ಮುಂದೆ ಬಿಚ್ಚಿಟ್ಟರೆ ದರ್ಶನ್ ಮತ್ತು ಪವಿತ್ರ ಗೌಡಗೆ ಜಾಮೀನು ಸಿಗುವುದು ಮತ್ತಷ್ಟು ಕಷ್ಟವಾಗಲಿದೆ. ಪ್ರದೋಷ್ ಹೇಳಿಕೆ ದಾಖಲಾದರೆ ಪ್ರಕರಣ ತನಿಖಾಧಿಕಾರಿಗಳ ಪರ ವಾಲಲಿದೆ.

