ಬೆಂಗಳೂರು: ಇಂದು ರೈತರ ದಿನಚಾರಣೆಯ ದಿನ. ಹೀಗಾಗಿ ರೈತರು ಚೆನ್ನಾಗಿದ್ದರೆ ಮಾತ್ರ ನಮ್ಮ ಹೊಟ್ಟೆಗೆ ಕೂಳು ಸಿಗುತ್ತದೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳುವ ಮೂಲಕ ಅನ್ನದಾತರಿಗೆ ಶುಭಾಶಯ ಕೋರಿದ್ದಾರೆ.
ನಟ ದರ್ಶನ್ ಟ್ವೀಟ್ ಮಾಡುವ ಮೂಲಕ ರೈತರ ಬಗ್ಗೆ ಮಾತನಾಡಿದ್ದಾರೆ. “ಬಲಿಷ್ಠ ರೈತರಿಂದ ಸದೃಢ ದೇಶ ನಿರ್ಮಾಣವಾಗುತ್ತದೆ. ರೈತರು ಚೆನ್ನಾಗಿದ್ದರೆ ಮಾತ್ರ ನಮ್ಮ ಹೊಟ್ಟೆಗೆ ಕೂಳು ಸಿಗುತ್ತದೆ. ದೇಶದ ಬೆನ್ನೆಲುಬಾಗಿ ನಿಂತಿರುವ ರೈತರಿಗೆ ಸದಾ ನನ್ನ ಸಲಾಂ -ನಿಮ್ಮ ದಾಸ ದರ್ಶನ್” ಎಂದು ಟ್ವೀಟ್ ಮಾಡುವ ಮೂಲಕ ರೈತನಿಗೆ ನಮನ ಸಲ್ಲಿಸಿದ್ದಾರೆ.
ಬಲಿಷ್ಠ ರೈತರಿಂದ ಸದೃಢ ದೇಶ ನಿರ್ಮಾಣವಾಗುತ್ತದೆ. ರೈತರು ಚೆನ್ನಾಗಿದ್ದರೆ ಮಾತ್ರ ನಮ್ಮ ಹೊಟ್ಟೆಗೆ ಕೂಳು ಸಿಗುತ್ತದೆ. ದೇಶದ ಬೆನ್ನೆಲುಬಾಗಿ ನಿಂತಿರುವ ರೈತರಿಗೆ ಸದಾ ನನ್ನ ಸಲಾಂ
– ನಿಮ್ಮ ದಾಸ ದರ್ಶನ್
— Darshan Thoogudeepa (@dasadarshan) December 23, 2019
ದರ್ಶನ್ ಟ್ವೀಟ್ ಮಾಡಿದ ತಕ್ಷಣ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಾತಿಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇತ್ತೀಚೆಗೆ ನಟ ದರ್ಶನ್ ಅಭಿನಯದ ‘ಒಡೆಯ’ ಸಿನಿಮಾ ರಿಲೀಸ್ ಆಗಿದ್ದು, ಪ್ರೇಕ್ಷಕರು ಉತ್ತಮ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಈ ಸಿನಿಮಾದಲ್ಲೂ ದರ್ಶನ್ ಒಡೆಯನಾಗಿ ರೈತರಿಗಾಗುವ ಅನ್ಯಾಯದ ವಿರುದ್ಧ ಹೋರಾಟ ಮಾಡಿದ್ದಾರೆ.
#RoberrtFirstLookOnDec25 #Roberrt #RoberrtFirstLook https://t.co/ABMw7KApT9
— Darshan Thoogudeepa (@dasadarshan) December 23, 2019
ಸದ್ಯಕ್ಕೆ ದರ್ಶನ್ ‘ರಾಬರ್ಟ್’ ಸಿನಿಮಾದಲ್ಲಿ ಬ್ಯುಸಿಯಿದ್ದಾರೆ. ಇತ್ತೀಚೆಗಷ್ಟೆ ಚಿತ್ರದ ಶೂಟಿಂಗ್ ಸಂಪೂರ್ಣವಾಗಿದೆ ಎಂದು ಫೋಟೋ ಶೇರ್ ಮಾಡಿಕೊಳ್ಳುವ ಮೂಲಕ ತಿಳಿಸಿದ್ದರು. ಜೊತೆಗೆ ಅಭಿಮಾನಿಗಳಿಗೆ ಒಂದು ಗುಡ್‍ನ್ಯೂಸ್ ಕೂಡ ಕೊಟ್ಟಿದ್ದಾರೆ. ಅದೇನೆಂದರೆ ‘ರಾಬರ್ಟ್’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಡಿಸೆಂಬರ್ 25 ರಂದು ಬಿಡುಗಡೆಯಾಗಲಿದೆ. ಈ ಸಿನಿಮಾವನ್ನು ತರುಣ್ ಸುಧೀರ್ ನಿರ್ದೇಶನ ಮಾಡುತ್ತಿದ್ದು, ನಟಿ ಆಶಾ ಭಟ್ ದರ್ಶನ್‍ಗೆ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.