ತಾಯಿ ಚಾಮುಂಡಿ ದರ್ಶನ ಪಡೆದ ನಟ ದರ್ಶನ್

Public TV
1 Min Read
DARSHAN 1

ಮೈಸೂರು: ನಟ ದರ್ಶನ್ (Darshan) ಚಾಮುಂಡಿ ಬೆಟ್ಟಕ್ಕೆ (Chamundi Hill) ಭೇಟಿ ನೀಡಿ ದೇವಿಯ ದರ್ಶನ ಪಡೆದಿದರು. ಈ ವೇಳೆ ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಕರ್ ಸಾಥ್‌ ನೀಡಿದ್ದಾರೆ.

ಆಷಾಢ ಮಾಸದ ಎರಡನೇ ಶುಕ್ರವಾರದ ಹಿನ್ನೆಲೆಯಲ್ಲಿ ಇಂದು ಚಾಮುಂಡಿ ಬೆಟ್ಟಕ್ಕೆ ದರ್ಶನ್‌ ಭೆಟಿ ನೀಡಿದ್ದರು. ದೇವಸ್ಥಾನಕ್ಕೆ ತೋತಾಪುರಿ ಮೇಕೆಜೋಳ ಹಾಗೂ ಕಮಲದ ಹೂವಿನ ಅಲಂಕಾರ ಮಾಡಲಾಗಿದೆ. ದೇವಾಲಯಕ್ಕೆ ಅಪಾರ ಸಂಖ್ಯೆಯ ಭಕ್ತರು ಬಂದಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ಜಾಮೀನಿನ ಮೇಲಿರುವ ದರ್ಶನ್‌ಗೆ, ಇತ್ತೀಚೆಗೆ ಸಿನಿಮಾ ಶೂಟಿಂಗ್‌ಗಾಗಿ ವಿದೇಶಕ್ಕೆ ತೆರಳಲು 57ನೇ ಸಿಸಿಹೆಚ್ ಕೋರ್ಟ್ ಅನುಮತಿ ನೀಡಿತ್ತು. ಜೂನ್ 1ರಿಂದ 25ರವರೆಗೆ ಡೆವಿಲ್ ಶೂಟಿಂಗ್‌ಗಾಗಿ ವಿದೇಶಕ್ಕೆ ತೆರಳಲು ಅನುಮತಿ ನೀಡಲಾಗಿತ್ತು.

Share This Article