ಬೆಂಗಳೂರು: ನಟ ದರ್ಶನ್ (Darshan) ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಹೊತ್ತಿನಲ್ಲೇ ಹೊಸಕೋಟೆ ಪುರಸಭೆಯು(Hoskote Municipality) ದರ್ಶನ್ ಬ್ಯಾನರ್ ತೆರವುಗೊಳಿಸುವ (Banner removed) ಮೂಲಕ ಫ್ಯಾನ್ಸ್‌ಗೆ ಶಾಕ್ ನೀಡಿದೆ.
ಹುಟ್ಟುಹಬ್ಬ ಆಚರಣೆ ಹಿನ್ನೆಲೆ ಅಭಿಮಾನಿಗಳು ದರ್ಶನ್ ಬ್ಯಾನರ್ ಹಾಕಿದ್ದರು. ಈ ಬ್ಯಾನರ್‌ಗಳನ್ನು ಹೊಸಕೋಟೆ ಪುರಸಭೆ ಸಿಬ್ಬಂದಿ ತೆರವುಗೊಳಿಸಿದ್ದು, ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಇದನ್ನೂ ಓದಿ : ದರ್ಶನ್ ಹುಟ್ಟುಹಬ್ಬದಂದು ಫ್ಯಾನ್ಸ್‌ಗೆ ಗುಡ್ ನ್ಯೂಸ್ – ‘ಡೆವಿಲ್’ ಸಿನಿಮಾದ ಟೀಸರ್ ರಿಲೀಸ್
ದರ್ಶನ್ 48ನೇ ವರ್ಷದ ಬರ್ತ್ಡೇ ಆಚರಿಸಿಕೊಳ್ಳುತ್ತಿದ್ದಾರೆ. ಪತ್ನಿ ವಿಜಯಲಕ್ಷ್ಮೀ, ನಟ ಧನ್ವೀರ್, ಚಿಕ್ಕಣ್ಣ ಇನ್‌ಸ್ಟಾಗ್ರಾಂನಲ್ಲಿ ದರ್ಶನ್ ಜೊತೆಗಿನ ಫೋಟೋ ಹಂಚಿಕೊಂಡು ಶುಭಾಶಯ ತಿಳಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ದರ್ಶನ್‌ಗೆ ಬರ್ತ್‌ಡೇ ವಿಶ್‌ಗಳ ಸುರಿಮಳೆಯೇ ಹರಿದುಬರುತ್ತಿದೆ. ಇದನ್ನೂ ಓದಿ :ಶಿವಮೊಗ್ಗ | ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು – ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ಸಾವು
ಪ್ರತಿ ವರ್ಷವು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ಬರ್ತ್‌ಡೇ ಆಚರಿಸಿಕೊಳ್ಳುತ್ತಿದ್ದ ದರ್ಶನ್, ಅನಾರೋಗ್ಯದ ಕಾರಣದಿಂದ ಈ ಬಾರಿ ಇವೆಲ್ಲದರಿಂದಲೂ ದೂರ ಉಳಿದಿದ್ದಾರೆ. ಕೇವಲ ಕುಟುಂಬಸ್ಥರು, ಆಪ್ತರ ಜೊತೆಗೆ ಮಾತ್ರ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.