Connect with us

Bengaluru City

ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರ್ ಅಪಘಾತ

Published

on

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೈಸೂರಿನ ಹೊರವಲಯದ ಹಿನಕಲ್ ಬಳಿ ಈ ಅಪಘಾತ ನಡೆದಿದ್ದು, ದರ್ಶನ್ ಅವರಿಗೆ ಬಲಗೈ ಮೂಳೆ ಮುರಿದಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾನುವಾರ ದರ್ಶನ್, ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಅವರು ಮೃಸೂರಿನ ಮೃಗಾಲಯಕ್ಕೆ ಭೇಟಿ ಕೊಟ್ಟಿದ್ದರು. ಅಷ್ಟೇ ಅಲ್ಲದೇ ಪ್ರಾಣಿಗಳನ್ನು ದತ್ತು ಪಡೆದುಕೊಂಡು ಅರಮನೆಯ ಸುತ್ತ ಓಡಾಡಿ, ಮಾವಾಡಿಗಳ ಜೊತೆ ಊಟ ಮಾಡಿ, ಯದುವೀರ್ ಅವರೊಡನೆ ಮಾತನಾಡಿ ಇಂದು ಬೆಳಗಿನ ಜಾವ ಹೊರಟಿದ್ದರು.

ಒಂದೇ ಕಾರಿನಲ್ಲಿ ದರ್ಶನ್, ನಟರಾದ ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಪ್ರಯಾಣಿಸುತ್ತಿದ್ದರು. ಈ ವೇಳೆ ಮೈಸೂರಿನ ಹೊರವಲಯದ ಹಿನಕಲ್ ಬಳಿ ಕಾರು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಪರಿಣಾಮ ಅಪಘಾತದಲ್ಲಿ ದರ್ಶನ್ ಅವರ ಬಲಗೈನ ಮೂಳೆ ಮುರಿದಿದೆ. ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಸ್ತ್ರಚಿಕಿತ್ಸೆ ನಡೆಯುತ್ತಿದೆ. ಈ ಘಟನೆಯಲ್ಲಿ ದೇವರಾಜ್ ಮತ್ತು ಪ್ರಜ್ವಲ್ ದೇವರಾಜು ಅವರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರು  ಕೂಡ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೈಸೂರಿನಲ್ಲಿ ಮುಂಜಾನೆ ಮಳೆಯಾಗುತ್ತಿದ್ದರಿಂದ ರಸ್ತೆ ಸರಿಯಾಗಿ ಕಾಣದ ಪರಿಣಾಮ ಕಾರ್ ಅಪಘಾತವಾಗಿದೆ ಎನ್ನಲಾಗಿದೆ. ಈಗಾಗಲೇ ಆಸ್ಪತ್ರೆಯ ಬಳಿ ಪತ್ನಿ ವಿಜಯಲಕ್ಷ್ಮಿ, ಮಗ ಮತ್ತು ಆಪ್ತರು ಬಂದಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv