ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ (Vijayalakshmi Darshan) ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಕಿಡಿಗೇಡಿಗಳ ಕಾಟ ಮುಂದುವರಿದಿದೆ. ಕೆಲ ಕಾಮುಕರು ‘ಜಲಗಾರ ಯೂನಿವರ್ಸಿಟಿ’ ಎಂಬ ಹೆಸರಿನಲ್ಲಿ ನಕಲಿ ಖಾತೆಗಳನ್ನು ತೆರೆದು ಅಶ್ಲೀಲ ಪದಗಳು ಹಾಗೂ ಅತ್ಯಂತ ಕೆಟ್ಟದಾಗಿ ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ.
ವಿಜಯಲಕ್ಷ್ಮಿ ಅವರನ್ನು ವೈಯಕ್ತಿಕವಾಗಿ ಟೀಕಿಸಿ, ನಿಂದಿಸುವ ಮೂಲಕ ಕಿರುಕುಳ ನೀಡಲಾಗುತ್ತಿದೆ. ವಿಜಯಲಕ್ಷ್ಮಿ ಸಿನಿಮಾ ನೋಡಲು ಹೋದ ವೀಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಆಕ್ಷೇಪಾರ್ಹವಾಗಿ ನಿಂದಿಸಿದ್ದಾರೆ. ಇದನ್ನೂ ಓದಿ: ವಿಚ್ಛೇದನ ಅರ್ಜಿ ವಿಚಾರಣೆ ಹಂತದಲ್ಲೇ ಕೇಳಿಬಂತು ‘ಶುಭ’ ಸುದ್ದಿ
ಇವರೇ ನೋಡಿ ಕ್ರಿಮಿನಲ್ ದರ್ಶನ್ ಹೆಂಡತಿ ಎಂದು ಬರೆದಿರೋ ಕಿಡಿಗೇಡಿಗಳು, ವಿಜಯಲಕ್ಷ್ಮಿಯ ವೈಯಕ್ತಿಕ ಬದುಕನ್ನು ಗುರಿಯಾಗಿಸಿ ಟ್ರೋಲ್ ಮಾಡಿದ್ದಾರೆ. ಗಂಡ ಜೈಲಿನಲ್ಲಿ ಇದ್ದಾನೆ, ಇತ್ತ ವಿಜಯಲಕ್ಷ್ಮಿ ಕಾರಿನಲ್ಲಿ ಓಡಾಟ ಎಂದೆಲ್ಲಾ ಅಶ್ಲೀಲ ಪದ ಬಳಸಿ ನಿಂದನೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಒಂಟಿ ಮನೆಗಳೇ ಟಾರ್ಗೆಟ್ – ಡೋರ್ ಮುರಿದು 30 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು
ನಕಲಿ ಅಕೌಂಟ್ ತೆರೆದು ಅಶ್ಲೀಲ ಪದಗಳಿಂದ ನಿಂದನೆ ಮಾಡುತ್ತಿರುವವರ ವಿರುದ್ಧ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ. ಸೈಬರ್ ಕಿರುಕುಳಕ್ಕೆ ಬ್ರೇಕ್ ಹಾಕುವಂತೆ ಪೊಲೀಸರ ಬಳಿ ವಿಜಯಲಕ್ಷ್ಮಿ ಮನವಿ ಮಾಡಿದ್ದು, ನಕಲಿ ಖಾತೆಗಳನ್ನು ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ. ಇದನ್ನೂ ಓದಿ: 15 ವರ್ಷಗಳ ನಂತ್ರ ʻಡೆಡ್ಲಿ ಕಿಲ್ಲರ್ʼಗೆ ಥ್ರಿಲ್ಲರ್ ಮಂಜು ಆ್ಯಕ್ಷನ್ ಕಟ್
