ಮೈಸೂರು: ಆಷಾಢ (Ashada Maasa) ಶುಕ್ರವಾರದ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ (Chamundi Hills) ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ ನೀಡಿದ್ದಾರೆ.
ನಾಡದೇವಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ವಿಜಯಲಕ್ಷ್ಮಿ (Vijayalakshmi Darshan) ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಇದನ್ನೂ ಓದಿ: ಆಷಾಢ ಮಾಸದ ಮೊದಲ ಶುಕ್ರವಾರ – ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ, ನಾಗಲಕ್ಷ್ಮೀಯಾದ ತಾಯಿ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲಿನಲ್ಲಿದ್ದಾರೆ. 2024ರ ಜೂನ್ ತಿಂಗಳಲ್ಲಿ ನಟನ ಬಂಧನವಾಗಿತ್ತು. ಕೆಲ ತಿಂಗಳುಗಳ ಬಳಿಕ ಜಾಮೀನು ಪಡೆದು ಹೊರಬಂದಿದ್ದರು. ಆದರೆ, ದರ್ಶನ್ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. 2025ರ ಆಗಸ್ಟ್‌ನಲ್ಲಿ ಮತ್ತೆ ದರ್ಶನ್ ಬಂಧನ ಮಾಡಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.

ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಹಿನ್ನೆಲೆ ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಮನೆಮಾಡಿದೆ. ಇಡೀ ಬೆಟ್ಟವನ್ನು ವಿಶೇಷ ವಿವಿಧ ಹೂಗಳಿಂದ ಅಲಂಕಾರ ಮಾಡಲಾಗಿದ್ದು, ಮುಂಜಾನೆಯಿಂದಲೇ ಚಾಮುಂಡಿ ತಾಯಿಗೆ (Goddess Chamundi) ವಿಶೇಷ ಪೂಜೆ ನಡೆಯುತ್ತಿದೆ. ತಾಯಿ ಚಾಮುಂಡಿ ನಾಗಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದು, ಉತ್ಸವ ಮೂರ್ತಿಗೆ ವಿಶೇಷವಾಗಿ ಅಲಂಕಾರ ಮಾಡಲಾಗಿದೆ. ದೇವಿಯ ದರ್ಶನಕ್ಕೆ ಬೆಳಗಿನ ಜಾವದಿಂದಲೇ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ಇದನ್ನೂ ಓದಿ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಬಾಂಬ್ ಬೆದರಿಕೆ – ಇಂಡಿಗೋ ವಿಮಾನದ ಶೌಚಾಲಯದಲ್ಲಿ ಚೀಟಿ ಪತ್ತೆ
ಈ ಬಾರಿ 2 ಸಾವಿರ ರೂ. ಮೌಲ್ಯದ ಟಿಕೆಟ್ ಪಡೆದವರಿಗೆ ನೇರ ದರ್ಶನದ ವ್ಯವಸ್ಥೆ ಮಾಡಲಾಗಿದೆ. ಅಭಿಷೇಕ, ಕುಂಕುಮಾರ್ಚನೆ, ಮಹಾಮಂಗಳಾರತಿ ಬಳಿಕ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಮುಂಜಾನೆ 5:30ರಿಂದ ಬೆಳಗ್ಗೆ 10 ಗಂಟೆಯವರೆಗೆ ವಿವಿಐಪಿಗಳಿಗೆ ದರ್ಶನಕ್ಕೆ ಅವಕಾಶವಿದೆ.
