ಪುಟ್ನಂಜ, ಚೆಲುವ, ಗ್ರಾಮದೇವತೆ, ಸಿಂಹಾದ್ರಿಯ ಸಿಂಹ (Simhadriya Simha) ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಖ್ಯಾತ ನಟಿ ಮೀನಾ (Meena) ಬಗ್ಗೆ ಹೊಸ ಸುದ್ದಿಯೊಂದು ಹರಿದಾಡುತ್ತಿದೆ. ಪತಿಯ ಸಾವಿನ ನೋವಿನಿಂದ ಚೇತರಿಸಿಕೊಂಡಿರುವ ನಟಿ ಮೀನಾ ಅವರ 2ನೇ ಮದುವೆ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಕಾಲಿವುಡ್ ನಟ ಧನುಷ್ (Actor Dhanush) ಜೊತೆ ಮೀನಾ ಮದುವೆ ಎಂದು ಸುದ್ದಿಯಾಗಿದೆ. ಇದನ್ನೂ ಓದಿ: ಕರದಂಟು ಉದ್ಯಮಿ ಬೆನ್ನಿಗೆ ನಿಂತ ಅಶ್ವಿನಿ ಪುನೀತ್ ರಾಜ್ ಕುಮಾರ್
ರಜನಿಕಾಂತ್ (Rajanikanth) ಪುತ್ರಿ ಐಶ್ವರ್ಯಾಗೆ ಧನುಷ್ ಡಿವೋರ್ಸ್ ನೀಡಿರೋದು ಎಲ್ಲರಿಗೂ ಗೊತ್ತೆ ಇದೆ. ಇಬ್ಬರೂ ಇದೀಗ ತಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಹೀಗಿರುವಾಗ ಧನುಷ್ ಮತ್ತು ಮೀನಾ ಮದುವೆ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಇಬ್ಬರ ಮದುವೆ ಬಗ್ಗೆ ಸಂದರ್ಶನವೊಂದರಲ್ಲಿ ನಟ ಬೈಲಾನ್ ರಂಗನಾಥನ್ ಮಾಹಿತಿ ಹಂಚಿಕೊಂಡಿದ್ದಾರೆ.
ಧನುಷ್- ಮೀನಾ ಇಬ್ಬರು ಒಂಟಿ ಜೀವನ ನಡೆಸುತ್ತಿದ್ದಾರೆ. ಮುಂಬರುವ ಜುಲೈನಲ್ಲಿ ಇಬ್ಬರೂ ಮದುವೆಯಾಗುತ್ತಾರೆ ಎಂದು ಬೈಲಾನ್ ರಂಗನಾಥನ್ ಹೇಳಿದ್ದಾರೆ. ಈ ಸುದ್ದಿ ಕೇಳ್ತಿದ್ದಂತೆ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಅಷ್ಷಕ್ಕೂ ಈ ಸುದ್ದಿ ನಿಜಾನಾ ಎಂಬುದನ್ನ ಕಾದುನೋಡಬೇಕಿದೆ.