ಕಾಲಿವುಡ್ ಸೂಪರ್ ಸ್ಟಾರ್ ರಜನಿಕಾಂತ್ (Rajanikanth) ನಟನೆಯ 171ನೇ ಸಿನಿಮಾ ‘ಕೂಲಿ’ (Coolie) ಟೀಸರ್ ಬಿಡುಗಡೆಯಾಗಿದೆ. ತಲೈವಾ ಎಂಟ್ರಿ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ಫ್ಯಾನ್ಸ್ ಮಾತ್ರವಲ್ಲದೇ, ತಮಿಳು ನಟ-ನಟಿಯರು ಕೂಡ ಕೂಲಿ ಟೀಸರ್ ಅನ್ನು ಹಾಡಿ ಹೊಗಳುತ್ತಿದ್ದಾರೆ. ಈಗ ಧನುಷ್ ಟೀಸರ್‌ನಲ್ಲಿ ರಜನಿಕಾಂತ್ ಎಂಟ್ರಿ ನೋಡಿ ’ಮಾಸ್’ ಎಂದು ಕೊಂಡಾಡಿದ್ದಾರೆ.

MASS !! #superstar #thalaivar pic.twitter.com/5B0akcyrL4
— Dhanush (@dhanushkraja) April 22, 2024
ಅಂದಹಾಗೆ, ರಜನಿಕಾಂತ್ ‘ಕೂಲಿ’ ಚಿತ್ರದ ಟೀಸರ್‌ನಲ್ಲಿ ಕೂಲಿಂಗ್ ಗ್ಲ್ಯಾಸ್ ಧರಿಸಿ ತಲೈವಾ ರಗಡ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಈ ಚಿತ್ರಕ್ಕೆ ಲೋಕೇಶ್ ಕನಗರಾಜ್ ನಿರ್ದೇಶನ ಮಾಡಿದ್ದಾರೆ.

ಗೋಲ್ಡ್ ಬಿಸ್ಕೆಟ್, ಗೋಲ್ಡ್ ವಾಚ್ ಜೊತೆಗೆ ಚಿನ್ನದ ರಾಶಿಯೇ ಇರುವ ಜಾಗಕ್ಕೆ ರಜನಿಕಾಂತ್ ಎಂಟ್ರಿ ನೀಡುತ್ತಾರೆ. ಅಲ್ಲಿರುವ ಖದೀಮರಿಗೆ ಗೋಲ್ಡ್ ವಾಚ್‌ಗಳಿಂದ ಮಾಡಿದ ಚೈನ್‌ನಿಂದಲೇ ಬೆಂಡೆತ್ತಿದ್ದಾರೆ. ಈ ರೀತಿಯ ಆ್ಯಕ್ಷನ್ ದೃಶ್ಯದ ಮೂಲಕ ಅವರ ಪಾತ್ರದ ಪರಿಚಯ ಮಾಡಿಕೊಡಲಾಗಿದೆ. ಟೀಸರ್ ಮೂಲಕ ನಿರ್ದೇಶಕ ಲೋಕೇಶ್ ಕನಗರಾಜ್ ಅವರು ಅಭಿಮಾನಿಗಳ ಕೌತುಕ ಕೆರಳಿಸುವಲ್ಲಿ ಗೆದ್ದಿದ್ದಾರೆ.
‘ಜೈಲರ್’ ಸಿನಿಮಾದ ಸಕ್ಸಸ್‌ನಿಂದ ರಜನಿಕಾಂತ್ ಗೆದ್ದು ಬೀಗಿದ್ದರು. ಆದರೆ ಲಾಲ್ ಸಲಾಮ್‌ನಿಂದ ತಲೈವಾಗೆ ಸೋಲಿನ ಕಹಿ ಸಿಕ್ಕಿತ್ತು. ಈಗ ‘ಕೂಲಿ’ ಸಿನಿಮಾದ ಟೀಸರ್‌ನಿಂದ ಫ್ಯಾನ್ಸ್‌ಗೆ ಚಿತ್ರದ ಮೇಲೆ ಭರವಸೆ ಮೂಡಿದೆ.


