ಸ್ಯಾಂಡಲ್‌ವುಡ್ ನಟ ಸುದೀಪ್ (Sudeep) ತಾಯಿಯ ನಿಧನಕ್ಕೆ ಚಿತ್ರರಂಗದ ಮತ್ತು ರಾಜಕೀಯ ರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ. ಇದೀಗ ನಟ ಧ್ರುವ ಸರ್ಜಾ (Dhruva Sarja) ಮತ್ತು ಗಣೇಶ್ (Golden Star Ganesh) ಅವರು ಜೆಪಿ ನಗರದ ನಟನ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ:ಸುದೀಪ್ ತಾಯಿ ಅಂತಿಮ ದರ್ಶನದಲ್ಲಿ ಭಾಗಿಯಾದ ‘ಬಿಗ್ ಬಾಸ್’ ಸ್ಪರ್ಧಿಗಳು
ಧ್ರುವ ಸರ್ಜಾ, ಗೋಲ್ಡನ್ ಸ್ಟಾರ್ ಗಣೇಶ್ ಅವರು ಸುದೀಪ್ ತಾಯಿ ಸರೋಜಾ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಅವರಷ್ಟೇ ಅಲ್ಲ, ಈ ವೇಳೆ ರಾಕ್‌ಲೈನ್ ವೆಂಕಟೇಶ್, ಉಮಾಪತಿ ಶ್ರೀನಿವಾಸ್, ಶ್ರೀನಗರ ಕಿಟ್ಟಿ, ಜೈ ಜಗದೀಶ್ ದಂಪತಿ, ಸುಂದರ ರಾಜ್, ಇಂದ್ರಜಿತ್ ಲಂಕೇಶ್, ಕೀರ್ತಿ ರಾಜ್, ಹೇಮಾ ಚೌಧರಿ ಸೇರಿದಂತೆ ಅನೇಕರು ಸರೋಜಾ ಅವರ ಅಂತಿಮ ದರ್ಶನ ಪಡೆದರು.
ಅಂದಹಾಗೆ, ನ್ಯುಮೋನಿಯದಿಂದ ಬಳಲುತ್ತಿದ್ದ ಸುದೀಪ್ ತಾಯಿ ಇಂದು (ಅ.20) ಬೆಳಗ್ಗೆ ವಿಧಿವಶರಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇನ್ನೂ ಇಂದು ಸಂಜೆ 7 ಗಂಟೆಗೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಸುದೀಪ್ ತಾಯಿಯ ಅಂತ್ಯಕ್ರಿಯೆ ನಡೆಯಲಿದೆ.