ಕನ್ನಡದ ಹೆಸರಾಂತ ನಟ ಧ್ರುವ ಸರ್ಜಾ (Dhruva Sarja) ಪತ್ನಿ ಪ್ರೇರಣಾ (Prerna) ಹಾಗೂ ತಾಯಿ ಜೊತೆ ಆಗಮಿಸಿ ಮತದಾನ (Voting) ಮಾಡಿದ್ದಾರೆ. ಬೆಂಗಳೂರಿನ ಕೆಆರ್ ರಸ್ತೆಯ ಶ್ರೀ ಶಾರದಾ ದೇವಿ ಹೊಲಿಗೆ ತರಬೇತಿ ಕೇಂದ್ರದಲ್ಲಿ ಕುಟುಂಬ ಸಮೇತ ಬಂದು ಮತಹಾಕಿದ್ದಾರೆ. ಜೊತೆಗೆ ಮತದಾನದ ಅರಿವನ್ನೂ ಅವರು ಮೂಡಿಸಿದ್ದಾರೆ.
Advertisement
ಡೆವಿಲ್ ಸಿನಿಮಾದ ಚಿತ್ರೀಕರಣ ವೇಳೆ ಕೈಗೆ ಏಟು ಮಾಡಿಕೊಂಡು ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ದರ್ಶನ್, ಇದೀಗ ಪತ್ನಿ ವಿಜಯಲಕ್ಷ್ಮಿ ಸಮೇತ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮತಗಟ್ಟೆಗೆ ಬಂದು ಮತದಾನ ಮಾಡಿದ್ದಾರೆ. ಸರತಿಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ ದರ್ಶನ್ ಮತ್ತು ವಿಜಯಲಕ್ಷ್ಮಿ.
Advertisement
Advertisement
ಕನ್ನಡದ ಹೆಸರಾಂತ ನಟಿ ರಚಿತಾ ರಾಮ್ ಕತ್ರಿಗುಪ್ಪೆಯಲ್ಲಿ ಮತದಾನ ಮಾಡಿದರು. ಸಾಮಾನ್ಯರಂತೆ ಅರ್ಧ ಗಂಟೆಗೂ ಹೆಚ್ಚು ಕಾಲ ಸರದಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಅಭಿಮಾನಿಗಳು ರಚಿತಾ ಅವರ ಜೊತೆ ಸೆಲ್ಫಿ ತೆಗೆಸಿಕೊಂಡು ಸಂಭ್ರಮಸಿದರು.
Advertisement
ಮತದಾನದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ರಚಿತಾ, ‘ಮನೆಯಲ್ಲಿ ಕೂತು ಕಾಮೆಂಟ್ ಮಾಡೋದಕ್ಕಿಂದ ಬಂದು ವೋಟ್ ಮಾಡಿ. ವೋಟ್ ಮಾಡದೇ ಬ್ಲೇಮ್ ಮಾಡಬೇಡಿ, ನಮ್ಮ ನಾಯಕರ ಆಯ್ಕೆ ಮಾಡಲೇಬೇಕು. ಬಿಸಿಲು ಅಂತ ಮನೆಯಲ್ಲಿ ಕೂರಬೇಡಿ, ಸಂಜೆವರೆಗೂ ಟೈಂ ಇದೆ ಬಂದು ವೋಟ್ ಮಾಡಿ. ಹಿರಿಯನಾಗರೀಕರೆ ಉತ್ಸಾಹದಿಂದ ವೋಟ್ ಮಾಡುವಾಗ ಯುವಕರು ಯಾಕೆ ಮನೆಯಲ್ಲಿ ಕೂರಬೇಕು’ ಎಂದು ಅವರು ಪ್ರಶ್ನೆ ಮಾಡಿದರು.