ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಕೆಡಿ’ ಚಿತ್ರದ (KD Film) ಶೂಟಿಂಗ್‌ಗಾಗಿ ವಿದೇಶಕ್ಕೆ ತೆರಳಿದ್ದಾರೆ. ಈ ನಡುವೆ ಅವರ ಮುಂಬರುವ ಚಿತ್ರದ ಬಗ್ಗೆ ಹೊಸ ಅಪ್‌ಡೇಟ್‌ವೊಂದು ಸಿಕ್ಕಿದೆ. ‘ಭೈರತಿ ರಣಗಲ್’ (Bhairathi Rangal) ನಿರ್ದೇಶಕ ನರ್ತನ್ ಜೊತೆ ಧ್ರುವ ಹೊಸ ಚಿತ್ರಕ್ಕಾಗಿ ಕೈಜೋಡಿಸಿದ್ದಾರೆ ಎನ್ನಲಾದ ಸುದ್ದಿಯೊಂದು ಹರಿದಾಡುತ್ತಿದೆ. ಇದನ್ನೂ ಓದಿ: ಹಣ, ಅಧಿಕಾರದ ಸುತ್ತ ‘ಕುಬೇರ’- ಟೀಸರ್‌ನಲ್ಲಿ ಮಿಂಚಿದ ಧನುಷ್, ರಶ್ಮಿಕಾ


ಸೂಪರ್ ಹಿಟ್ ಚಿತ್ರಗಳನ್ನು ಕೊಟ್ಟಿರುವ ನಿರ್ದೇಶಕ ಮತ್ತು ಧ್ರುವ ಜೊತೆಯಾದ್ರೆ ಸಿನಿಮಾ ಸಖತ್ ಆಗಿರುತ್ತದೆ ಎಂಬುದು ಅಭಿಮಾನಿಗಳ ಲೆಕ್ಕಚಾರ. ಹೀಗಾಗಿ ಇಬ್ಬರೂ ಒಟ್ಟಿಗೆ ಚಿತ್ರ ಮಾಡಲಿ, ಬೇಗ ಚಿತ್ರದ ಬಗ್ಗೆ ಗುಡ್ ನ್ಯೂಸ್ ಕೊಡಲಿ ಎಂದು ಫ್ಯಾನ್ಸ್ ಕಾಯ್ತಿದ್ದಾರೆ.

