ಸ್ಯಾಂಡಲ್ವುಡ್ ಸ್ಟಾರ್ ಧ್ರುವ ಸರ್ಜಾ (Dhruva Sarja) ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಹೆಣ್ಣು ಮಗುವಿಗೆ ಧ್ರುವ ಸರ್ಜಾ ತಂದೆಯಾಗಿದ್ದಾರೆ.
ನಟ ಧ್ರುವ ಸರ್ಜಾ ಮನೆಯಲ್ಲಿ ಸಂತಸ ಮನೆ ಮಾಡಿದೆ. ಧ್ರುವ ಪತ್ನಿ ಪ್ರೇರಣಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬನಶಂಕರಿಯ ಅಕ್ಷ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ ವಿನೋದ್ ಗೊಬ್ಬರಗಾಲ ಅವರ ಮೊದಲ ಸಂಭಾವನೆ ಕೇಳಿದ್ರೆ ಶಾಕ್ ಆಗುತ್ತೀರಾ
ಈ ಶುಭ ಸುದ್ದಿಯನ್ನ ಇನ್ಸ್ಟಾಗ್ರಾಂ ಖಾತೆಯ ಮೂಲಕ ಧ್ರುವ ಸರ್ಜಾ ತಿಳಿಸಿದ್ದಾರೆ. ಧ್ರುವ ಸರ್ಜಾ ಅವರ ಆಸೆಯಂತೆ ಪುಟ್ಟ ಮಗಳ ಎಂಟ್ರಿಯಾಗಿದೆ.