ನಟ, ನಿರ್ದೇಶಕ ಗುರುಪ್ರಸಾದ್ (Guruprasad) ಅವರು ಮಾದನಾಯಕಹಳ್ಳಿ ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಫ್ಯಾನಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಇದನ್ನೂ ಓದಿ:‘ಕಾಂತಾರ’ ಚಿತ್ರಕ್ಕೆ ಹಾಲಿವುಡ್ ಸ್ಟಂಟ್ ಮಾಸ್ಟರ್ ಎಂಟ್ರಿ
Advertisement
ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ನಿರ್ದೇಶಕ ಗುರುಪ್ರಸಾದ್ (52) ಅವರು 3 ದಿನಗಳ ಹಿಂದೆ ನೇಣಿಗೆ ಶರಣಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಅವರ ಮೃತದೇಹ ಅಪಾರ್ಟ್ಮೆಂಟ್ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
Advertisement
Advertisement
ಇನ್ನೂ ನವೆಂಬರ್ 2ರಂದು ಗುರುಪ್ರಸಾದ್ ಹುಟ್ಟುಹಬ್ಬ. ಈ ಬೆನ್ನಲ್ಲೇ ಅವರ ಸಾವಿನ ಸುದ್ದಿ ಚಿತ್ರರಂಗದ ಮಂದಿಗೆ ಶಾಕ್ ಕೊಟ್ಟಿದೆ. ಮೂರು ದಿನಗಳ ಹಿಂದೆ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಇಂದು ಬೆಳಗ್ಗೆಯಿಂದ ಸ್ಥಳೀಯ ನಿವಾಸಿಗಳಿಗೆ ವಾಸನೆ ಬರತೊಡಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಬಾಗಿಲನ್ನು ತೆರೆಯಲಾಗಿದೆ ಎಂಬ ಪ್ರಾಥಮಿಕ ಮಾಹಿತಿ ಈಗ ಲಭ್ಯವಾಗಿದೆ.
Advertisement
1972ರಲ್ಲಿ ಕನಕಪುರದಲ್ಲಿ ಜನಿಸಿದ ಗುರುಪ್ರಸಾದ್ ರಾಮಚಂದ್ರ ಶರ್ಮಾ 2006 ರಲ್ಲಿ ತೆರೆಕಂಡ ‘ಮಠ’ ಚಿತ್ರದ ಮೂಲಕ ನಿರ್ದೇಶಕನಾಗಿ ಕನ್ನಡ ಚಿತ್ರರಂಗದಲ್ಲಿ ಸಿನಿಪಯಣ ಆರಂಭಿಸಿದರು. ಇದು ನವರಸ ನಾಯಕ ಜಗ್ಗೇಶ್ರ 100ನೇ ಚಿತ್ರ.
2009 ರಲ್ಲಿ ಇದೇ ಜೋಡಿ ‘ಎದ್ದೇಳು ಮಂಜುನಾಥ’ ಚಿತ್ರದ ಮೂಲಕ ಮತ್ತೊಂದು ಸಮಾಜಿಕ ಚಿತ್ರ ನೀಡಿತು. ಈ ಚಿತ್ರಕ್ಕೆ ಫಿಲ್ಮಫೇರ್ ಪ್ರಶಸ್ತಿ ದೊರಕಿತು. ನಂತರ ‘ಡೈರೆಕ್ಟರ್ ಸ್ಪೇಷಲ್’,’ಎರಡನೇ ಸಲ’ ಚಿತ್ರಗಳನ್ನು ನಿರ್ದೇಶಿಸಿದರು. ನಿರ್ದೇಶಕ ಮಾತ್ರವಲ್ಲದೇ ನಟನಾಗಿ ‘ಮಠ’, ‘ಎದ್ದೇಳು ಮಂಜುನಾಥ’,’ಮೈಲಾರಿ’, ‘ಹುಡುಗರು’,’ಅನಂತು v/s ನುಸ್ರತ್’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.
ಕಿಚ್ಚ ಸುದೀಪ್ ನಿರೂಪಣೆಯ ಕನ್ನಡ ಬಿಗ್ಬಾಸ್ ಅವತರಣಿಕೆಯಲ್ಲಿ ಭಾಗವಹಿಸಿದ್ದ ಇವರು ಹಲವು ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರರಾಗಿ ಭಾಗವಹಿಸಿದ್ದಾರೆ.