ಬೆಂಗಳೂರು: ಜಿಮ್ ಟ್ರೈನರ್ ಮಾರುತಿಗೌಡ ಕಿಡ್ನಾಪ್, ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಅವರಿಗೆ ಇಂದು ಸೆಷನ್ಸ್ ಕೋರ್ಟ್ ನಲ್ಲಿ ಜಾಮೀನು ಸಿಗುವ ಸಾಧ್ಯತೆಗಳಿವೆ.
ಪ್ರಕರಣ ಸಂಬಂಧ ಜೈಲಿನಲ್ಲಿರುವ ವಿಜಯ್ ಅವರ ಜಾಮೀನು ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಜಾಮೀನಿಗಾಗಿ ವಿಜಿ ಸೆಷನ್ಸ್ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸೆಷನ್ಸ್ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಲಿದ್ದು, ದುನಿಯಾ ವಿಜಿಗೆ ಜಾಮೀನು ಸಿಗುವ ಸಾಧ್ಯತೆಗಳಿವೆ. ಯಾಕಂದ್ರೆ ಹಲ್ಲೆಗಳೊಳಗಾಗಿದ್ದ ಮಾರುತಿ ಗೌಡ ಶುಕ್ರವಾರ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
Advertisement
Advertisement
ನಟ ದುನಿಯಾ ವಿಜಿ ಹಲ್ಲೆಯಿಂದ ವಿಕ್ರಮ್ ಆಸ್ಪತ್ರೆಯಲ್ಲಿ ಮಾರುತಿಗೌಡ ದಾಖಲಾಗಿದ್ದರು. ಆರು ದಿನಗಳ ಬಳಿಕ ನಿನ್ನೆ ರಾತ್ರಿ ಡಿಸ್ಚಾರ್ಜ್ ಆಗಿದ್ದಾರೆ. ಮಾರುತಿಗೌಡ ತುಟಿಗೆ ಗಾಯವಾಗಿ, ಕಣ್ಣು ಮತ್ತು ಮುಖ ಊತ ಬಂದಿತ್ತು. ಹೀಗಾಗಿ ಆರು ದಿನಗಳ ಕಾಲ ಚಿಕಿತ್ಸೆ ನೀಡಿ ತುಟಿಗೆ ಹದಿನೈದು ಹೊಲಿಗೆ ಹಾಕಲಾಗಿತ್ತು. ಸದ್ಯಕ್ಕೆ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ಇದನ್ನೂ ಓದಿ: ಹಲ್ಲೆ ಮಾಡಿದ್ದನ್ನು ಪೊಲೀಸ್ರಿಗೆ ಹೇಳ್ಬೇಡ: ಮಾರುತಿ ಗೌಡಗೆ ವಿಜಿ ವಾರ್ನಿಂಗ್
Advertisement
Advertisement
ಕಳೆದ ಶನಿವಾರ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಮಿಸ್ಟರ್ ಬೆಂಗಳೂರು ಬಾಡಿ ಬಿಲ್ಡಿಂಗ್ ಸ್ಪರ್ಧೆ ನಡೆಯುತಿತ್ತು. ಈ ಸ್ಪರ್ಧೆ ನೋಡಲು ದುನಿಯಾ ವಿಜಿ ತಮ್ಮ ತಂಡದೊಂದಿಗೆ ಬಂದಿದ್ದರು. ಈ ವೇಳೆ ಪಾನಿಪೂರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಮತ್ತು ದುನಿಯಾ ವಿಜಿ ನಡುವೆ ಮಾತಿನ ಚಕಮಕಿ ನಡೆದಿತ್ತು. ಆದರೆ ಗಲಾಟೆ ವಿಕೋಪಕ್ಕೆ ತಿರುಗಿ ದುನಿಯಾ ವಿಜಯ್ ಗ್ಯಾಂಗ್, ಮಾರುತಿಗೌಡರ ಮೇಲೆ ಹಲ್ಲೆ ನಡೆಸಿ ಕಾರಿನಲ್ಲಿ ಹಾಕಿಕೊಂಡು ಕಿಡ್ನಾಪ್ ಮಾಡಿತ್ತು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv