ಸಾವಿನಲ್ಲೂ ಸಾರ್ಥಕತೆ ಮೆರೆದ ದ್ವಾರಕೀಶ್

Public TV
1 Min Read
dwarakish 1

ಸ್ಯಾಂಡಲ್‌ವುಡ್ ನಟ ಕಮ್ ನಿರ್ದೇಶಕ ದ್ವಾರಕೀಶ್ (Dwarakish) ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ದ್ವಾರಕೀಶ್ ನೇತ್ರದಾನ (Eye Donate) ಮಾಡುವ ಮೂಲಕ ಯುವಜನತೆಗೆ ಮಾದರಿಯಾಗಿದ್ದಾರೆ. ಡಾ.ರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್ ನೇತ್ರದಾನ ಮಾಡಿದ್ದರು. ಈಗ ದ್ವಾರಕೀಶ್ ಕೂಡ ತಮ್ಮ ಸಾವಿನ ನಂತರ ಇತರರ ಬಾಳಿಗೆ ಬೆಳಕಾಗಿದ್ದಾರೆ.

dwarakish 3

ದ್ವಾರಕೀಶ್ ಕಣ್ಣನ್ನು ನಾರಾಯಣ ನೇತ್ರಾಲಯಕ್ಕೆ ದಾನ ಮಾಡಿದ್ದಾರೆ. ಕುಟುಂಬದ ಸಮ್ಮತಿಯ ಮೇರೆಗೆ ಡಾ.ಶೈಲಜಾ ನೇತೃತ್ವದಲ್ಲಿ ನೇತ್ರ ಕಸಿ ಕಾರ್ಯ ನಡೆದಿದೆ. ಈ ಬಗ್ಗೆ ವೈದ್ಯೆ ಶೈಲಜಾ ಮಾತನಾಡಿದ್ದಾರೆ. ಇದನ್ನೂ ಓದಿ:ವಿಜಯ್ ದೇವರಕೊಂಡ ಬಳಿಕ ನಿತಿನ್ ಸಿನಿಮಾದಿಂದಲೂ ಶ್ರೀಲೀಲಾ ಔಟ್

dwarakish 10

ದ್ವಾರಕೀಶ್ ಅವರ ಕಣ್ಣನ್ನು ನಾಳೆ ಪರೀಕ್ಷೆ ಮಾಡಲಾಗುತ್ತದೆ. ಆ ನಂತರ ನಾಳೆಯೇ ಇನ್ನೊಬ್ಬರಿಗೆ ಕಣ್ಣು ಹಾಕಲಾಗುತ್ತದೆ ಎಂದು ಡಾ.ಶೈಲಜಾ ತಿಳಿಸಿದ್ದಾರೆ. ಕಣ್ಣು ದಾನದಿಂದ ಸಮಾಜಕ್ಕೆ ಕೊಟ್ಟಿರುವ ಕೊಡುಗೆಯಾಗಿದೆ. ಇದರಿಂದ ಇಬ್ಬರಿಗೆ ಕಣ್ಣು ಬರುತ್ತದೆ ಎಂದು ಮಾಹಿತಿ ನೀಡಿದ್ದಾರೆ.

Dwarakish 9

ದ್ವಾರಕೀಶ್ ಅವರ ಮರಣದ ನಂತರ ಕುಟುಂಬಸ್ಥರಿಗೆ ಕರೆ ಮಾಡಿದಾಗ 10 ನಿಮಿಷದಲ್ಲಿ ನೇತ್ರದಾನ ಮಾಡಲು ಅನುಮತಿ ನೀಡಿದರು. ಮೃತಪಟ್ಟ 14 ಘಂಟೆಯೊಳಗೆ ಕಣ್ಣು ದಾನ ಮಾಡಬಹುದು. ಸಂಪೂರ್ಣ ಕಣ್ಣುನ್ನು ನಾವು ತೆಗೆದುಕೊಂಡಿದ್ದೇವೆ. ಇದರಿಂದ 10 ಜನಕ್ಕೆ ಈ ಕಣ್ಣುಗಳಿಂದ ಅನುಕೂಲವಾಗುತ್ತದೆ. ಪಟಾಕಿಯಲ್ಲಿ ಕಣ್ಣಿಗೆ ಹಾನಿಯಾದವರಿಗೆ ಹಾಗೂ ಕಂಪ್ಲೀಟ್ ಅಂಧತ್ವ ಇರುವವರಿಗೆ ಅನುಕೂಲವಾಗುತ್ತದೆ ಎಂದು ಡಾ.ಶೈಲಜಾ ಮಾಹಿತಿ ನೀಡಿದ್ದಾರೆ.

ಹಿರಿಯ ನಟ ದ್ವಾರಕೀಶ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ನಾಳೆ (ಏ.17) ಬೆಳಗ್ಗೆ 7 ಗಂಟೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಏಳು ಗಂಟೆಯಿಂದ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ ಚಾಮರಾಜಪೇಟೆಯ ಟಿಆರ್ ಮಿಲ್ ನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತಿದೆ.

Share This Article