ಬೆಂಗಳೂರು: ಬಿಗ್ ಬಾಸ್ ಸೀಸನ್ 5ನೇ ಆವೃತ್ತಿಯ ಸ್ಪರ್ಧಿ ಹಾಗೂ ಕಿರುತೆರೆ ನಟ ಜಗನ್ನಾಥ್ ಚಂದ್ರಶೇಖರ್ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.
ಜಗನ್ ಮೂರು ವರ್ಷದಿಂದ ಪ್ರೀತಿ ಮಾಡುತ್ತಿದ್ದ ಆತ್ಮೀಯ ಗೆಳತಿ ರಕ್ಷಿತಾ ಮುನಿಯಪ್ಪ ಅವರ ಜೊತೆ ಇತ್ತೀಚೆಗಷ್ಟೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅವರೇ ತಮ್ಮ ಫೇಸ್ ಬುಕ್ ನಲ್ಲಿ ಹೇಳಿಕೊಂಡಿದ್ದಾರೆ.
ದುಬೈನ ಕಾಲೇಜೊಂದರಲ್ಲಿ ರಕ್ಷಿತಾ ಮುನಿಯಪ್ಪ ವ್ಯಾಸಂಗ ಮುಗಿಸಿದ್ದಾರೆ. ರಕ್ಷಿತಾ ಮತ್ತು ಜಗನ್ ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ತಾವು ಪ್ರೀತಿ ಮಾಡುತ್ತಿದ್ದ ಬಗ್ಗೆ ಮನೆಯಲ್ಲಿ ತಿಳಿಸಿದ್ದಾರೆ. ಈಗ ಇವರಿಬ್ಬರ ಪ್ರೀತಿಗೆ ಕುಟುಂಬದವರ ಒಪ್ಪಿಗೆ ಸಿಕ್ಕಿದೆ. ಹೀಗಾಗಿ ಎರಡು ಕುಟುಂಬದವರು ಒಪ್ಪಿ ಜಗನ್-ರಕ್ಷಿತಾ ನಿಶ್ಚಿತಾರ್ಥ ಮಾಡಿದ್ದಾರೆ.
ಜಗನ್ ಅವರು ತಾವು ಪ್ರೀತಿಸುತ್ತಿದ್ದ ಹುಡುಗಿ ರಕ್ಷಿತಾ ಮುನಿಯಪ್ಪ ಅವರಿಗೆ ಕುಟುಂಬದವರ ಸಮ್ಮುಖದಲ್ಲಿ ಉಂಗುರ ತೊಡಿಸುವ ಮೂಲಕ ಸಂಪ್ರದಾಯಬದ್ಧವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ತಮ್ಮ ಗೆಳತಿಯ ಫೋಟೋ, ರಿಂಗ್ ಮತ್ತು ಹೃದಯದ ಎಮೋಜಿ ಹಾಕಿ ಈ ಬಗ್ಗೆ ತಿಳಿಸಿದ್ದಾರೆ.
ಇದೇ ವರ್ಷದ ಮೇ ತಿಂಗಳಿನಲ್ಲಿ ಜಗನ್-ರಕ್ಷಿತಾ ಮದುವೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಜಗನ್ ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದು, ಖಾಸಗಿ ವಾಹಿನಿಯಲ್ಲಿ ಧಾರಾವಾಹಿಗಳಲ್ಲಿ ಅಭಿನಯಿಸುತ್ತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv