ಕನ್ನಡಕ್ಕೆ ಎರಡೂವರೆ ಸಾವಿರ ವರ್ಷಗಳ ಇತಿಹಾಸವಿದ್ದು, ತಮಿಳಿನಿಂದ ಕನ್ನಡ ಹುಟ್ಟಿದೆ ಎಂದ ಕಮಲ್ ಹಾಸನ್ ಮಾತನ್ನು ಒಪ್ಪಲ್ಲ ಎಂದು ಸೋಷಿಯಲ್ ಮೀಡಿಯಾದಲ್ಲಿ ಜಗ್ಗೇಶ್ (Jaggesh) ಖಂಡಿಸಿದ್ದಾರೆ. ಇದನ್ನೂ ಓದಿ:‘ಬಿಗ್ ಬಾಸ್’ ಖ್ಯಾತಿಯ ದೀಪಿಕಾ ಕಕ್ಕರ್‌ಗೆ ಕ್ಯಾನ್ಸರ್
ಕಲೆಗೆ ಜಾತಿ ಇಲ್ಲ. ಎಲ್ಲಾ ಭಾಷೆಯ ಕಲಾವಿದರು ಶಾರದಾಸುತರು ಒಪ್ಪುತ್ತೇವೆ. ಆ ನಿಟ್ಟಿನಲ್ಲಿ ಕಮಲ್ ಹಾಸನ್ (Kamal Haasan) ಅವರನ್ನು ಮೆಚ್ಚಿದ್ದೇವೆ. ಹಾಗಂತ ಕನ್ನಡ ತಮಿಳಿಂದ ಹುಟ್ಟಿದೆ ಎಂದ ಅವರ ಮಾತು ಒಪ್ಪಲ್ಲ. ಕನ್ನಡಕ್ಕೆ ಎರಡೂವರೆ ಸಾವಿರ ವರ್ಷದ ಇತಿಹಾಸವಿದೆ. ಅಷ್ಟೇಕೆ ಹನುಮದೇವರು ಕನ್ನಡ ಕಲಿಪುಂಗವ ಅವನ ಕಾಲ ರಾಮಾಯಣ ಇಷ್ಟು ಅರ್ಥವಾದರೆ ಸಾಕಲ್ಲವೆ ಸಾರ್ ಎಂದು ಜಗ್ಗೇಶ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕಲೆಗೆ ಜಾತಿ ಇಲ್ಲಾ.ಎಲ್ಲಾಭಾಷೆಯ ಕಲಾವಿದರು ಶಾರದಾಸುತರು ಒಪ್ಪುತ್ತೇವೆ,ಆ ನಿಟ್ಟಿನಲ್ಲಿ ಕಮಲ್ ಹಾಸನ್ ರವರ ಮೆಚ್ಚಿದ್ದೇವೆ.
ಅಂದ ಮಾತ್ರಕ್ಕೆ ಕನ್ನಡ ತಮಿಳಿಂದ ಹುಟ್ಟಿದೆ ಎಂದ ಅವರ ಮಾತು ಒಪ್ಪೋಲ್ಲಾ!
ಕನ್ನಡಕ್ಕೆ 2.5ಸಾವಿರ ವರ್ಷದ ಇತಿಹಾಸವಿದೆ,ಅಷ್ಟೇಕೆ ಹನುಮದೇವರು ಕನ್ನಡ ಕಲಿಪುಂಗವ ಅವನ ಕಾಲ ರಾಮಾಯಣ ಇಷ್ಟು ಅರ್ಥವಾದರೆ ಸಾಕಲ್ಲವೆ ಸಾರ್..! pic.twitter.com/Bj8f59lAiK
— ನವರಸನಾಯಕ ಜಗ್ಗೇಶ್ (@Jaggesh2) May 28, 2025
ಮೇ 27ರಂದು ಬೆಂಗಳೂರಿನಲ್ಲಿ ನಡೆದ ‘ಥಗ್ ಲೈಫ್’ ಪ್ರಚಾರ ಕಾರ್ಯಕ್ಕೆ ನಟ ಶಿವಣ್ಣ ಅತಿಥಿಯಾಗಿ ಭಾಗವಹಿಸಿದ್ದರು. ಈ ವೇಳೆ, ರಾಜ್‌ಕುಮಾರ್ ಜೊತೆಗಿನ ಒಡನಾಡವನ್ನು ಕಮಲ್ ಹಾಸನ್ ಸ್ಮರಿಸಿದರು. ಬಳಿಕ ಶಿವಣ್ಣ ಎದುರೇ ನಿಮ್ಮ ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ನಟ ಹೇಳಿದ್ದಾರೆ. ಕನ್ನಡಿಗರ ಪ್ರೀತಿ, ಗೌರವಕ್ಕೆ ನಮಿಸುತ್ತಲೇ ನಿಮ್ಮ ಕನ್ನಡ ನಮ್ಮಿಂದ ಬಂದಿದ್ದು ಎಂದ ಕಮಲ್ ಹೇಳಿಕೆಗೆ ಕನ್ನಡಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಹೃತಿಕ್ ರೋಷನ್ ಜೊತೆ ಸಿನಿಮಾ- ‘ಹೊಂಬಾಳೆ ಫಿಲಂಸ್’ನಿಂದ ಗುಡ್ ನ್ಯೂಸ್
ಕಮಲ್ ಆಡಿರುವ ಮಾತುಗಳು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಅದಷ್ಟೇ ಅಲ್ಲ, ಕಮಲ್ ಹಾಸನ್ ಕ್ಷಮೆಯಾಚಿಸಬೇಕು ಇಲ್ಲದಿದ್ರೆ ‘ಥಗ್ ಲೈಫ್’ ಸಿನಿಮಾಗೆ ತಡೆ ನೀಡೋದಾಗಿ ಅವರ ಚಿತ್ರಗಳನ್ನು ಬ್ಯಾನ್ ಮಾಡೋದಾಗಿ ಕರವೇ ಮತ್ತು ಕನ್ನಡಪರ ಸಂಘಟನೆ ಎಚ್ಚರಿಕೆ ನೀಡಿದೆ. ನಾಳೆ ಸಂಜೆಯೊಳಗೆ ನಟ ಕ್ಷಮೆ ಕೋರಬೇಕು ಎಂದು ಎಚ್ಚರಿಸಿದೆ.