ನವರಸನಾಯಕ ಜಗ್ಗೇಶ್ (Jaggesh) ಅವರಿಗೆ ಇಂದು (ಮಾ.17) ಹುಟ್ಟುಹಬ್ಬದ ಸಂಭ್ರಮ. ಅಪ್ಪು ಅಗಲಿಕೆಯ ನಂತರ ಜಗ್ಗೇಶ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರಲಿಲ್ಲ. ಆದರೆ ಈ ಬಾರಿ ಮಂತ್ರಾಲಯದಲ್ಲಿ ರಾಯರ ಸನ್ನಿಧಿಗೆ ಭೇಟಿ ನೀಡಿದ್ದಾರೆ. ಫೇಸ್‌ಬುಕ್ ಲೈವ್‌ಗೆ ಬಂದು ಅಭಿಮಾನಿಗಳು ಜೊತೆ ಜಗ್ಗೇಶ್ ಮಾತನಾಡಿದ್ದಾರೆ. ಈ ವೇಳೆ, ವರ್ತೂರು ಸಂತೋಷ್ ಹೆಸರು ಬಳಸದೇ ಅವರಿಗೆ ಜಗ್ಗೇಶ್ ಕ್ಷಮೆ ಕೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿಯೇ ಚೊಚ್ಚಲ ಮಗುವಿಗೆ ಜನ್ಮ ನೀಡಲಿದ್ದಾರೆ ದೀಪಿಕಾ ಪಡುಕೋಣೆ
Advertisement
ಲೈವ್‌ನಲ್ಲಿ ಜಗ್ಗೇಶ್, ನನ್ನ ಬೆಳವಣಿಗೆಗೆ ಮುಖ್ಯ ಕಾರಣ ನನ್ನ ಗುರುಗಳು ರಾಘವೇಂದ್ರ ಸ್ವಾಮಿಗಳು ಎಂದು ಹೇಳಿದರು. ಮುಖ್ಯ ವಿಚಾರಕ್ಕೆ ಬರುತ್ತೇನೆ ಎಂದ ಜಗ್ಗೇಶ್, ನಾನು ನೇರವಾಗಿ ಮಾತಾಡುವ ಮನುಷ್ಯ, ಹಳ್ಳಿಯ ಸೊಗಡಿನವನು, ನನ್ನ ಮಾತುಗಳಲ್ಲಿ ಹಳ್ಳಿ ಪದಗಳು ಬಂದು ಬಿಡುತ್ತವೆ ಎಂದಿದ್ದಾರೆ.
Advertisement
Advertisement
ನಾನು ಎಂದಿಗೂ ಯಾರಿಗೂ ಕೆಟ್ಟದ್ದನ್ನು ಬಯಸುವುದಿಲ್ಲ ಎಂದು ಮಾತನಾಡಿದ್ದಾರೆ. ಬಳಿಕ ಜಗ್ಗೇಶ್, ಮೈಕ್ ಹಿಡಿದ ಮಾತಾಡುವಾಗ ನನ್ನ ಮಾತಿನಿಂದ ಯಾರಿಗಾದ್ರೂ ಬೇಜಾರಾಗಿದ್ದರೆ ಕ್ಷಮಿಸಿಬಿಡಿ. ನಿಮ್ಮ ತಂದೆಯ ವಯಸ್ಸಿನವನು ಅಂದುಕೊಂಡು ಕ್ಷಮಿಸಿ ಎಂದು ಮಾತನಾಡಿದ್ದಾರೆ.
Advertisement
ಸಿನಿಮಾವೊಂದರ ಪ್ರಚಾರದ ವೇಳೆ, ಹುಲಿ ಉಗುರು ಪ್ರಕರಣದ ಬಗ್ಗೆ ಮಾತನಾಡುತ್ತಾ, ಬಿಗ್ ಬಾಸ್ ಸ್ಪರ್ಧಿ (Bigg Boss Kannada 10) ವರ್ತೂರು ಸಂತೋಷ್ ಅವರನ್ನು ‘ಕಿತ್ತೋದ್ ನನ್ ಮಗ’ ಎಂಬ ಪದ ಬಳಸಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಆದರೆ ಈಗ ಜಗ್ಗೇಶ್, ವರ್ತೂರು ಸಂತೋಷ್ (Varthur Santhosh) ಹೆಸರು ಹೇಳದೇ ಕ್ಷಮೆ ಕೇಳಿದ್ದಾರೆ.