ಜಗ್ಗೇಶ್ (Jaggesh) ಸೆಲೆಬ್ರಿಟಿ ಬದುಕು ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ಜೊತೆಗೆ ತಾವು ಕಂಡುಂಡ ಅನುಭವಗಳನ್ನು ಅದರಲ್ಲಿ ಸೇರಿಸಿದ್ದಾರೆ. ಅವರ ಬರಹ ಇಲ್ಲಿದೆ.
Advertisement
ಸೆಲಿಬ್ರಿಟಿ (Celebrity) ಆಗಲು ಎಲ್ಲರೂ ಒಂದಿಲ್ಲಾ ಒಂದು ರೀತಿ ಯತ್ನಿಸುತ್ತಾರೆ ಕೆಲವರು ನಟ ನಟಿ, ಇನ್ನೂ ಕೆಲವರು ರಂಗಕಲಾವಿದರಾಗಿ, ಕೆಲವರು ಟಿವಿ, ಕೆಲವರು ತಮ್ಮ ಮೊಬೈಲ್ ಮೂಲಕ, ಮತ್ತೆ ಕೆಲವರು ಯೂಟ್ಯೂಬ್ ಮೂಲಕ ಒಟ್ಟಾರೆ ಹೇಗಾದರು ಸರಿ ಸೆಲಿಬ್ರಿಟಿ ಆಗಲೆಬೇಕು. ಆಗದಿದ್ದರೆ ಡಿಪ್ರೇಷನ್ ಗೆ ಒಳಗಾಗುತ್ತಾರೆ. ಆದರೆ ನಾನು ಸೆಲಿಬ್ರಿಟಿ ಕನಸು ಕಂಡವನಲ್ಲ. ಕಟ್ಟಿಕೊಂಡ ಮಡದಿ ಹಾಗು ಸಾಧಿಸಿ ಸಾಯಬೇಕು ಎಂಬ ಸಾಮಾನ್ಯ ಮನುಷ್ಯನ ಕನಸು ಮಾತ್ರ ಆಗಿತ್ತು. ಯಾವ ದೇವರ ವರವೋ ಯಾವ ಗುರುವಿನ ಕೃಪೆಯೋ ಅನ್ನದ ಸೂರಿನ ಜೊತೆ ದೊಡ್ಡ ಹೆಸರು ಪ್ರಾಪ್ತವಾಯಿತು. ಜೊತೆಗೆ ನನ್ನ ವೈಯಕ್ತಿಕ ಸಂತೋಷ ಕಮರಿಹೋಯಿತು.
Advertisement
Advertisement
ಎಲ್ಲರಂತೆ ಎಲ್ಲಾ ಕಡೆ ಎಲ್ಲಾ ಸಂತೋಷ ನೋಡುವ ಯೋಗ ಇಲ್ಲವಾಯಿತು. ಪ್ರತಿದಿನ ಯಾರು ಏನು ಹೇಳುತ್ತಾರೋ, ಯಾರು ತಪ್ಪು ಕಂಡು ಹಂಗಿಸುತ್ತಾರೋ, ಯಾರು ನಮ್ಮ ಬಾಯಿಂದ ಬಂದ ಅರಿಯದ ಮಾತು ಬಳಸಿ ಲೈಕ್ಸ್ ಪಡೆದು ಗಹಗಹಿಸಿ ನಗುತ್ತಾರೋ, ನನ್ನ ಖಾಸಗಿ ಸಂತೋಷವನ್ನು ಕಾಣದಂತೆ ಮೊಬೈಲ್ ನಲ್ಲಿ ಚಿತ್ರಿಸಿ ಲೈಕ್ಸ್ ಗಾಗಿ ಸಂಭ್ರಮಿಸೋ ಪುಣ್ಯಾತ್ಮರು ಬರುತ್ತಾರೋ.. ಯಾರು ನನ್ನ ಕೇಡು ಬಯಸುತ್ತಾರೋ ಒಟ್ಟಾರೆ ಸೆಲಿಬ್ರಿಟಿ ಬದುಕು ಜೀವನ ಪರ್ಯಂತ ಜೈಲುವಾಸ ಬದುಕು ಅಥವ ಮಹಡಿ ಮನೆಯ ಒಂಟಿ ಭಿಕ್ಷುಕನ ಜೀವನ ಸೆಲಿಬ್ರಿಟಿಯ ಬದುಕು.
Advertisement
ಇದನ್ನೆಲ್ಲಾ ಬದಿಗೊತ್ತಿ ನಾನು ಎಲ್ಲರಂತೆ ಸ್ವತಂತ್ರ ಜೀವಿಯೋ ಅಥವಾ ಪಂಜರದಿಂದ ಹಾರಿ ಪರಿಸರ ಸವಿಯೋ ಪಕ್ಷಿಯಂತೆ ಒಬ್ಬಂಟಿಯಾಗಿ ಆನಂದ ಪಡೆಯೋ ಯತ್ನ ಮಾಡುತ್ತಿದ್ದೇನೆ. ಇದರಲ್ಲಿ ಪೂರ್ಣಸಂತೋಷ ಸಿಗುತ್ತಿದೆಯೇ ಸತ್ಯವಾಗಿಯೂ ಇಲ್ಲ. ಏನೋ ಒಂದೆ ಕಡೆ ಗೂಬೆಯಂತೆ ಇರಬಾರದು ಎಂಬ ಸಣ್ಣ ಪರಿವರ್ತನೆ ಅಷ್ಟೆ ಈ ಸೆಲಿಬ್ರಿಟಿಯ ಬದುಕು.
ನಾನು ನನ್ನ ಸಹಾಯಕ ರಸ್ತೆಯಲ್ಲಿ ಸಿಕ್ಕ ತಾಟಿಲಿಂಗು ವ್ಯಾಪಾರಿಯ ಜೊತೆ ವ್ಯಾಪಾರ ಮುಗಿಸಿ ಅವನಿಗೆ ಸಂತೋಷ ಆಗುವಂತೆ ಅವನ ಬಂಡವಾಳ ಎರಡು ಹಣ್ಣಿಗೆ ನೀಡಿದಾಗ ಅವನ ಕಂಗಳ ಆನಂದಭಾಷ್ಪ. ಶಿವನ ಜಲಾಭಿಷೇಕದಂತೆ ಭಾಸವಾಯಿತು. ಸೆಲೆಬ್ರಿಟಿಯ ಬದುಕು ಕಂಡು ನೀವು ಸೆಲಿಬ್ರಿಟಿ ಆಗಬೇಕಾ, ಇಲ್ಲಾ ಸೆಲಿಬ್ರಿಟಿಯ ಮೇಲೆ ಪ್ರೀತಿ ಕರುಣೆ ತೋರಬೇಕ. ದೇವರು ವಾಸಮಾಡೋ ನಿಮ್ಮ ಹೃದಯಕ್ಕೆ ಸೇರಿದ್ದು. ಜೀವನ ನಾಟಕರಂಗ, ಸಮಾಜವೆ ರಂಗಮಂದಿರ, ದೇವರೆ ಸೂತ್ರದಾರ, ಅಭಿಮಾನಿಗಳೆ ಬಂಧುಮಿತ್ರರ.