ತೆಲುಗಿನ ಸ್ಟಾರ್ ನಟ ಜ್ಯೂ.ಎನ್‌ಟಿಆರ್ (Jr.Ntr) ಸದ್ಯ ಬಾಲಿವುಡ್‌ಗೆ (Bollywood) ಪಾದಾರ್ಪಣೆ ಮಾಡಿದ್ದಾರೆ. ‘ವಾರ್ 2’ (War 2) ಸಿನಿಮಾದ ಶೂಟಿಂಗ್‌ನಲ್ಲಿ ಅವರು ಬ್ಯುಸಿಯಾಗಿದ್ದಾರೆ. ಇದರ ನಡುವೆ ತಾರಕ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ.
‘ವಾರ್ 2’ಗಾಗಿ ಹೃತಿಕ್ ರೋಷನ್ (Hrithik Roshan) ಜೊತೆ ಕೈಜೋಡಿಸಿರುವ ಜ್ಯೂ.ಎನ್‌ಟಿಆರ್ ಮೇ 20ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ತಿದ್ದಾರೆ. ಈ ದಿನ ‘ವಾರ್ 2’ ಚಿತ್ರದ ಜ್ಯೂ.ಎನ್‌ಟಿಆರ್ ಪಾತ್ರದ ಲುಕ್ ಕೂಡ ರಿವೀಲ್ ಆಗಲಿದೆ. ಚಿತ್ರದ ಮೊದಲ ಪೋಸ್ಟರ್ ಹೊರಬೀಳಲಿದೆ.
ಹೃತಿಕ್ ರೋಷನ್ ಮುಂದೆ ಜ್ಯೂ.ಎನ್‌ಟಿಆರ್ ಅಬ್ಬರಿಸಿದ್ದಾರೆ. ಇಬ್ಬರ ಕಾಂಬಿನೇಷನ್ ನೋಡೋಕೆ ಅಭಿಮಾನಿಗಳು ಕಾಯ್ತಿದ್ದಾರೆ. ಚಿತ್ರದಲ್ಲಿ ಜ್ಯೂ.ಎನ್‌ಟಿಆರ್ ವಿಲನ್ ಆಗಿ ನಟಿಸಿದ್ದಾರೆ ಎಂಬ ಸುದ್ದಿಯೂ ಹಬ್ಬಿದೆ. ಸದ್ಯದಲ್ಲೇ ಇದರ ಬಗ್ಗೆ ಮಾಹಿತಿ ಸಿಗಲಿದೆ. ಇದನ್ನೂ ಓದಿ:ಎರಡು ವಾರ ಕಳೆದರೂ ಪತ್ತೆಯಾಗದ ನಟ ಗುರುಚರಣ್ ಸಿಂಗ್
‘ಆರ್‌ಆರ್‌ಆರ್’ (RRR) ಚಿತ್ರದ ಸಕ್ಸಸ್ ನಂತರ ಜ್ಯೂ.ಎನ್‌ಟಿಆರ್‌ಗೆ ಬೇಡಿಕೆ ಹೆಚ್ಚಾಗಿದೆ. ಕೊರಟಲ ಶಿವ ಜೊತೆ ‘ದೇವರ’ (Devara Film) ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರ 2 ಭಾಗಗಳಲ್ಲಿ ಬರಲಿದೆ. ಈ ಚಿತ್ರಕ್ಕೆ ಜಾನ್ವಿ ಕಪೂರ್ ನಾಯಕಿಯಾಗಿದ್ದಾರೆ. ಈ ವರ್ಷ ಅಕ್ಟೋಬರ್ 10ಕ್ಕೆ ಸಿನಿಮಾ ರಿಲೀಸ್ ಆಗಲಿದೆ.