ಬಹುನಿರೀಕ್ಷಿತ ‘ವಾರ್ 2’ (War 2) ಸಿನಿಮಾ ಸೆಟ್‌ನಲ್ಲಿ ಜ್ಯೂ.ಎನ್‌ಟಿಆರ್‌ಗೆ ಪೆಟ್ಟಾಗಿದೆ. ಕೂಡಲೇ ನಟನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಎರಡು ತಿಂಗಳುಗಳ ಕಾಲ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ. ಇದನ್ನೂ ಓದಿ:ಗೋಲ್ಡನ್ ಆಫರ್ ಕೈಚೆಲ್ಲಿದ ರಶ್ಮಿಕಾ ಮಂದಣ್ಣ
ಹೃತಿಕ್ ಜೊತೆ ಓಪನಿಂಗ್ ಸೀನ್ ಶೂಟಿಂಗ್ ನಡೆಯುತ್ತಿದ ವೇಳೆ ಜ್ಯೂ.ಎನ್‌ಟಿಆರ್ ಕೈಗೆ ಗಂಭೀರವಾಗಿ ಪೆಟ್ಟಾಗಿದೆ. ಆ ಕೂಡಲೇ ನಟನನ್ನು ಆಸ್ಪತ್ರೆಗೆ ಸೇರಿಸಿ ಸೂಕ್ತ ಚಿಕಿತ್ಸೆ ಕೊಡಲಾಗಿದೆ. ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ 2 ತಿಂಗಳುಗಳ ಕಾಲ ವೈದ್ಯರು ವಿಶ್ರಾಂತಿ ಸೂಚಿಸಿರುವ ಹಿನ್ನೆಲೆ ‘ವಾರ್ 2’ ಸಿನಿಮಾ ಚಿತ್ರೀಕರಣ ಕೂಡ ಮುಂದೂಡಲಾಗಿದೆ. ಅಕ್ಟೋಬರ್‌ನಲ್ಲಿ ಜ್ಯೂ.ಎನ್‌ಟಿಆರ್ ಭಾಗದ ಶೂಟಿಂಗ್ ಶುರುವಾಗಲಿದೆ.
ಸದ್ಯ ಹೃತಿಕ್ ರೋಷನ್ ಮತ್ತು ಕಿಯಾರಾ ಭಾಗದ ಚಿತ್ರೀಕರಣ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿದೆ. ವಿದೇಶದಲ್ಲಿ ಚಿತ್ರೀಕರಣ ನಡೆಯಲಿದ್ದು, ಅಕ್ಟೋಬರ್‌ನಲ್ಲಿ ಜ್ಯೂ.ಎನ್‌ಟಿಆರ್ ಚಿತ್ರತಂಡ ಸೇರಿಕೊಳ್ಳಲಿದ್ದಾರೆ.