ಭಾರತೀಯ ಸಿನಿಮಾ ರಂಗದ ಹೆಸರಾಂತ ನಟ ಕಮಲ್ ಹಾಸನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಚೆನ್ನೈನ ಶ್ರೀ ರಾಮಚಂದ್ರ ಮೆಡಿಕಲ್ ಸೆಂಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವು ದಿನಗಳಿಂದ ಅವರು ತೀರ್ವ ಜ್ವರದಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದ್ದು, ಜ್ವರ ಕಡಿಮೆ ಆಗದ ಕಾರಣಕ್ಕಾಗಿ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.
ನೆಚ್ಚಿನ ನಟ ಕಮಲ್ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆಯೇ ಅಭಿಮಾನಿಗಳಲ್ಲಿ ಆತಂಕ ಮನೆಮಾಡಿತ್ತು. ಕಮಲ್ ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ಸದ್ಯ ಕಮಲ್ ಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದ್ದು, ಇನ್ನೆರಡು ದಿನಗಳಲ್ಲಿ ಡಿಸ್ಚಾರ್ಜ್ ಆಗಬಹುದು ಎನ್ನಲಾಗುತ್ತಿದೆ. ಇದೀಗ ಜ್ವರ ಕೂಡ ಕಡಿಮೆ ಆಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂಬ ಓದಿ:51ನೇ ವಯಸ್ಸಿನಲ್ಲಿ ಮೂರನೇ ಮಗುವಿನ ನಿರೀಕ್ಷೆಯಲ್ಲಿರುವ ಮನೋಜ್ ತಿವಾರಿ
ದಣಿವರಿಯದ ಕೆಲಸವೇ ಜ್ವರಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದ ಸಿನಿಮಾ, ರಿಯಾಲಿಟಿ ಶೋ ಸೇರಿದಂತೆ ಸಾಕಷ್ಟು ಕೆಲಸಗಳಲ್ಲಿ ಕಮಲ್ ಬ್ಯುಸಿಯಾಗಿದ್ದಾರೆ. ಇಂಡಿಯನ್ 2 ಸಿನಿಮಾದ ಶೂಟಿಂಗ್ ನಲ್ಲಿ ನಿರಂತರವಾಗಿ ಕಮಲ್ ಭಾಗಿಯಾಗಿದ್ದರು ಎಂದು ಹೇಳಲಾಗುತ್ತಿದೆ. ಈಗ ಕಮಲ್ ಅನಿವಾರ್ಯವಾಗಿ ರೆಸ್ಟ್ ತಗೆದುಕೊಳ್ಳಬೇಕಾಗಿದ್ದು, ಸದ್ಯ ವಿಶ್ರಾಂತಿಯಲ್ಲಿದ್ದಾರೆ ಕಮಲ್.