ನವದೆಹಲಿ: ಕೋವಿಡ್ ಮಾರ್ಗಸೂಚಿಗಳನ್ನು (Covid Guidelines) ಉಲ್ಲೇಖಿಸಿ ಭಾರತ್ ಜೋಡೋ ಯಾತ್ರೆ (Bharat Jodo Yatra) ನಿಲ್ಲಿಸಿ ಎಂಬ ಕೇಂದ್ರ ಸರ್ಕಾರದ ಸೂಚನೆಯ ನಡುವೆಯೂ ಇಂದು ಸಾವಿರಾರು ಮಂದಿ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ತಮಿಳು ಚಿತ್ರರಂಗದ ಸ್ಟಾರ್ ನಟ ಕಮಲ್ ಹಾಸನ್ (Kamal Haasan) ಸಹ ಭಾರತ್ ಜೋಡೊ ಯಾತ್ರೆಯಲ್ಲಿ ರಾಹುಲ್ ಗಾಂಧಿ (Rahul Gandhi) ಅವರೊಂದಿಗೆ ಹೆಜ್ಜೆ ಹಾಕಿದ್ದಾರೆ.
Advertisement
ಇಂದು ಫರಿದಾಬಾದ್ ಮೂಲಕ ರಾಷ್ಟ್ರ ರಾಜಧಾನಿ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆಯನ್ನು ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅನಿಲ್ ಚೌಧರಿ (Anil Chaudhary) ಸ್ವಾಗತಿಸಿದರು. ಮೆರವಣಿಗೆ ದೆಹಲಿ ಪ್ರವೇಶಿಸುತ್ತಿದ್ದಂತೆ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi), ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ (Priyanka Gandhi), ಹಿರಿಯ ನಾಯಕರಾದ ಜೈರಾಮ್ ರಮೇಶ್, ಪವನ್ ಖೇರಾ, ಭೂಪಿಂದರ್ ಸಿಂಗ್ ಹೂಡಾ, ಕುಮಾರಿ ಸೆಲ್ಜಾ, ರಣದೀಪ್ ಸುರ್ಜೆವಾಲಾ ಮೆರವಣಿಗೆಯಲ್ಲಿ ಪಾಲ್ಗೊಂಡರು. ಇದನ್ನೂ ಓದಿ: ನಟ ವಿಷ್ಣುವರ್ಧನ್ ಅಭಿಮಾನಿಗಳ ಆದರ್ಶ ಯಾತ್ರೆ: ಆಸ್ಟ್ರೇಲಿಯಾ ವಾಸಿ ಬಲರಾಮ್ ನೇತೃತ್ವ
Advertisement
Advertisement
ಇದೇ ವೇಳೆ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ದ್ವೇಷದ ಮಾರುಕಟ್ಟೆಯ ನಡುವೆ ಪ್ರೀತಿಯ ಅಂಗಡಿಗಳನ್ನು ತೆರೆಯುವುದು ನಮ್ಮ ಉದ್ದೇಶವಾಗಿದೆ. ದೇಶದ ಜನಸಾಮಾನ್ಯರು ಈಗ ಪ್ರೀತಿಯ ಬಗ್ಗೆ ಮಾತನಾಡುತ್ತಿದ್ದಾರೆ. ಪ್ರತಿ ರಾಜ್ಯದಲ್ಲೂ ಲಕ್ಷಾಂತರ ಜನರು ಯಾತ್ರೆಗೆ ಸೇರಿದ್ದಾರೆ. ನಿಮ್ಮ ದ್ವೇಷದ `ಬಜಾರ್’ನಲ್ಲಿ ಪ್ರೀತಿಯ ಅಂಗಡಿ ತೆರೆಯಲು ನಾವು ಇಲ್ಲಿದ್ದೇವೆ ಎಂದು ನಾನು ಆರ್‌ಎಸ್‌ಎಸ್ (RSS) ಮತ್ತು ಬಿಜೆಪಿಯ (BJP) ಜನರಿಗೆ ಹೇಳಿದ್ದೇನೆ ಎಂದು ನುಡಿದರು. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ ನಿಲ್ಲಿಸಲು ಕೇಂದ್ರಕ್ಕೆ ಕೊರೊನಾ ಒಂದು ನೆಪ: ರಾಹುಲ್ ಗಾಂಧಿ
Advertisement
ಸೆ.7ರಂದು ಕನ್ಯಾಕುಮಾರಿಯಲ್ಲಿ ಆರಂಭವಾದ ಭಾರತ್ ಜೋಡೋ ಯಾತ್ರೆಯು ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸಂಚರಿಸಿ ಈಗ ಹರಿಯಾಣ ಬಳಿಕ ಮತ್ತೆ ದೆಹಲಿ ಪ್ರವೇಶಿಸಿದೆ. ಜ.3 ರಿಂದ ಮತ್ತೆ ಯಾತ್ರೆ ಆರಂಭಿಸಿ ಅಂತಿಮವಾಗಿ ಕಾಶ್ಮೀರದಲ್ಲಿ ಯಾತ್ರೆ ಸಮಾಪ್ತಿಗೊಳಿಸಲಿದೆ.