ಸ್ಟಾರ್ ನಟ ಕಮಲ್ ಹಾಸನ್ (Kamal Haasan) ಕಳೆದ 7 ವರ್ಷಗಳಿಂದ ಬಿಗ್ ಬಾಸ್ ಕಾರ್ಯಕ್ರಮ ನಿರೂಪಣೆ ಮಾಡುತ್ತಾ ಬಂದಿದ್ದರು. ಅವರ ನಿರೂಪಣೆಯ ಶೈಲಿಯನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದರು. ಇದೀಗ ಬಿಗ್ ಬಾಸ್ ಶೋ ಮಾಡಲ್ಲ ಎಂದು ಅಭಿಮಾನಿಗಳಿಗೆ ಕಮಲ್ ಹಾಸನ್ ಪತ್ರ ಬರೆದಿದ್ದಾರೆ. ಇದನ್ನೂ ಓದಿ:ವಿಕ್ಕಿ ಕೌಶಲ್ ಜೊತೆಗಿನ ‘ಚಾವಾ’ ಚಿತ್ರಕ್ಕಾಗಿ ಮರಾಠಿ ಕಲಿತ ರಶ್ಮಿಕಾ ಮಂದಣ್ಣ
7 ವರ್ಷಗಳ ಹಿಂದೆ ಶುರುವಾದ ನನ್ನ ಬಿಗ್ ಬಾಸ್ ಪಯಣಕ್ಕೆ ಬ್ರೇಕ್ ನೀಡಲು ನಿರ್ಧರಿಸಿದ್ದೇನೆ ಎಂದು ಭಾರವಾದ ಹೃದಯದಿಂದ ನಿಮಗೆ ತಿಳಿಸುತ್ತಿದ್ದೇನೆ. ಈ ಮೊದಲೇ ಒಪ್ಪಿಕೊಂಡ ಸಿನಿಮಾಗಳ ಕೆಲಸದ ಕಾರಣದಿಂದ ನನಗೆ ಈ ಬಾರಿಯ ಬಿಗ್ ಬಾಸ್ ಶೋ ನಿರೂಪಣೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಕಮಲ್ ಹಾಸನ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
View this post on Instagram
‘ಬಿಗ್ ಬಾಸ್’ ಕಾರ್ಯಕ್ರಮದ ಮೂಲಕ ನಿಮ್ಮ ಮನ ಮತ್ತು ಮನೆ ತಲುಪಿದ್ದೇನೆ. ಅಗಾಧ ಪ್ರೀತಿ ಮತ್ತು ಕಾಳಜಿಯನ್ನು ತೋರಿಸಿದ್ದೀರಿ. ನಿಮ್ಮ ಬೆಂಬಲದಿಂದಾಗಿ ಬಿಗ್ ಬಾಸ್ ತಮಿಳು ರಿಯಾಲಿಟಿ ಶೋ ನನ್ನ ಪಾಲಿಗೆ ಬೆಸ್ಟ್ ಆಯಿತು. ಕಲಿಕೆಯ ಅನುಭವ ನೀಡಿದ ಈ ಶೋಗೆ ನಾನು ಋಣಿಯಾಗಿದ್ದೇನೆ. ಸ್ಪರ್ಧಿಗಳಿಂದ ಹಿಡಿದು ಪ್ರತಿಯೊಬ್ಬರಿಗೂ ನನ್ನ ಧನ್ಯವಾದಗಳು ಎಂದು ಕಮಲ್ ಹಾಸನ್ ತಿಳಿಸಿದ್ದಾರೆ.
ಇನ್ನೂ ತಮಿಳಿನ ಬಿಗ್ ಬಾಸ್ ಶೋಗೆ ಮುಂದಿನ ನಿರೂಪಕ ಯಾರು ಎಂಬುದನ್ನು ವಾಹಿನಿ ಅಧಿಕೃತವಾಗಿ ತಿಳಿಸಬೇಕಿದೆ. ಹೀಗಿರುವಾಗ ಮುಂದಿನ ಹೋಸ್ಟ್ ಯಾರಿರಬಹುದು ಎಂಬುದರ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿದೆ.