ಸ್ಯಾಂಡಲ್ ವುಡ್ ನಲ್ಲಿ ಜೆಕೆ ಅಲಿಯಾಸ್ ಕಾರ್ತಿಕ್ ಜಯರಾಮ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸದ್ಯದಲ್ಲೇ ಅವರು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಕಿರುತೆರೆಯ ಅತ್ಯಂತ ಜನಪ್ರಿಯ ಧಾರಾವಾಹಿ ‘ಅಶ್ವಿನಿ ನಕ್ಷತ್ರ’ದಲ್ಲಿ ‘ಹೆಂಡ್ತಿ..’ ಡೈಲಾಗ್ ಮೂಲಕವೇ ಇವರು ಫೇಮಸ್ ಆಗಿದ್ದರು. ಈಗ ಹೆಂಡತಿಯನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಸಪ್ತಪದಿ ತುಳಿಯುತ್ತಿದ್ದಾರೆ. ಇದನ್ನೂ ಓದಿ : ಪ್ರಭುದೇವ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾಗೆ ಸಂದೇಶ್ ನಾಗರಾಜ್ ನಿರ್ಮಾಪಕ
Advertisement
ಜೆಕೆ ಅಭಿಮಾನಿಗಳು ಅವರನ್ನು ಕೇಳುತ್ತಿದ್ದ ಪ್ರಶ್ನೆ ಎಂದರೆ, ‘ಯಾವಾಗ ಮದುವೆ ಆಗುತ್ತೀರಿ?’ ಎಂದು. ಈ ಪ್ರಶ್ನೆಗೆ ಜೆಕೆ ಫ್ಯಾಷನ್ ಡಿಸೈನರ್ ಚೆಲುವೆಯನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಉತ್ತರಿಸಿದ್ದಾರೆ. ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಿಕೊಳ್ಳುವ ಮೂಲಕ ಭಾವಿ ಪತ್ನಿಯನ್ನು ಅಭಿಮಾನಿಗಳಿಗೆ ಪರಿಚಯಿಸಿದ್ದಾರೆ. ಇದನ್ನೂ ಓದಿ : ಅಕ್ಟೋಬರ್ 3ಕ್ಕೆ ಅಭಿಷೇಕ್ ಅಂಬರೀಶ್ ಹೊಸ ಸಿನಿಮಾಗೆ ಮುಹೂರ್ತ
Advertisement
Advertisement
ಅಂದಹಾಗೆ ಜೆಕೆ ಮದುವೆ ಆಗುತ್ತಿರುವ ಹುಡುಗಿಯ ಹೆಸರು ಅರ್ಪಣ. ವೃತ್ತಿಯಲ್ಲಿ ನುರಿತ ಫ್ಯಾಷನ್ ಡಿಸೈನರ್. ಫ್ಯಾಷನ್ ಲೋಕಕ್ಕೆ ಈಗಾಗಲೇ ಚಿರಪರಿಚಿತ ಆಗಿರುವ ಅಪರ್ಣ, ಸಾಕಷ್ಟು ಮಾಡೆಲ್ ಗಳಿಗೆ ಹೊಸ ರೀತಿಯ ಫ್ಯಾಷನ್ ಡಿಸೈನ್ ಮಾಡಿದ್ದಾರೆ. ಅಲ್ಲದೇ, ಸಿಲೆಬ್ರಿಟಿಗಳ ನೆಚ್ಚಿನ ಡಿಸೈನರ್ ಕೂಡ ಇವರಾಗಿದ್ದಾರೆ. ಇದನ್ನೂ ಓದಿ : ‘ಮಾ ಇಷ್ಟಂ’ ಸಿನಿಮಾಗೆ ತಡೆಯಾಜ್ಞೆ ತಂದವರ ವಿರುದ್ಧವೇ ನಕಲಿ ಸಹಿ ದೂರು ನೀಡಿದ ವರ್ಮಾ
Advertisement
ತಾವು ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವ ವಿಷಯವನ್ನು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಅಪರ್ಣ ಸಮಂತ್, ತಮ್ಮಿಬ್ಬರ ಫೋಟೋ ಜೊತೆಗೆ ಲೈಫ್ ಲೈನ್ ಎಂದು ಬರೆದುಕೊಂಡು, ಮದುವೆ ಆಗುತ್ತಿರುವ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ.