ಚೆನ್ನೈ: ತಮಿಳುನಾಡಿನಲ್ಲಿ ಬಿಜೆಪಿಯ ಪ್ರಮುಖ ಸದಸ್ಯರಲ್ಲಿ ಒಬ್ಬರಾಗಿರುವ ನಟಿ ಖುಷ್ಬು ಸುಂದರ್ (Khusbhu Sundar) ಅವರು ಲೋಕಸಭಾ ಚುನಾವಣಾ (Loksabha Election 2024) ಪ್ರಚಾರದಿಂದ ಹಿಂದೆ ಸರಿದಿದ್ದಾರೆ.
At times, hard decisions have to be taken and focus needs to be on one's health. I am at such a juncture today. I have dedicated myself to @BJP4India and have been following the path of our beloved PM @narendramodi ji, immersing myself in the election campaign activities. But… pic.twitter.com/tuevsqczok
— KhushbuSundar (Modi ka Parivaar) (@khushsundar) April 7, 2024
Advertisement
ಈ ಸಂಬಂಧ ಖುಷ್ಬು ಭಾನುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (J.P Nadda) ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ. ಪತ್ರದಲ್ಲಿ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ. ಕೆಲವೊಮ್ಮೆ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಆರೋಗ್ಯದ ಮೇಲೆ ಗಮನಹರಿಸಬೇಕು. ಹೀಗಾಗಿ ನಾನು ಇಂದು ಅಂತಹ ಸಂದಿಗ್ಧದಲ್ಲಿದ್ದೇ ನೆ ಎಂದಿದ್ದಾರೆ.
Advertisement
Advertisement
2019 ರಲ್ಲಿ ದೆಹಲಿಯಲ್ಲಿ ಸಂಭವಿಸಿದ ಅಪಘಾತದಿಂದ ಮೂಳೆ ಮುರಿದಿದೆ. ಕಳೆದ 5 ವರ್ಷಗಳಿಂದ ಆರೋಗ್ಯದ ಕುರಿತು ಮುನ್ನೆಚ್ಚರಿಕೆ ವಹಿಸುತ್ತಿದ್ದೇನೆ. ಆದರೂ ಸಮಸ್ಯೆ ನನ್ನನ್ನು ಕಾಡುತ್ತಿದೆ. ಹೀಗಾಗಿ ವೈದ್ಯರು ಚುನಾವಣಾ ಪ್ರಚಾರದಲ್ಲಿ (Election Campaign) ಭಾಗಿಯಾಗದಂತೆ ಸೂಚಿಸಿದ್ದಾರೆ ಎಂದು ಪತ್ರದಲ್ಲಿ ನಟಿ ತಿಳಿಸಿದ್ದಾರೆ.
Advertisement
My heart sinks, and I weep when I see these pics from last eve. How happy I am to be campaigning for my party leaders and speaking at length about the policies and good governance of @BJP4India and our PM @narendramodi ji. Will miss all of this and much more. But I will surely… pic.twitter.com/Jm3TtHWBnn
— KhushbuSundar (Modi ka Parivaar) (@khushsundar) April 7, 2024
ಪ್ರಚಾರದ ಸಂದರ್ಭದಲ್ಲಿ ಹೆಚ್ಚು ಪ್ರಯಾಣ, ಕುಳಿತುಕೊಳ್ಳುವುದು ಅತ್ಯಗತ್ಯ. ಹೀಗಾಗಿ ಮತ್ತೆ ನನಗೆ ಸಮಸ್ಯೆ ಕಾಡುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ಅಲ್ಪ ವಿರಾಮ ಘೋಷಿಸಿದ್ದೇನೆ ಎಂದು ಖುಷ್ಬು ಪತ್ರದಲ್ಲಿ ವಿವರಿಸಿದ್ದಾರೆ. ಇದನ್ನೂ ಓದಿ: ಸಮಾಜವಾದಿ ಪಕ್ಷದ ಅಭ್ಯರ್ಥಿ ಕಾಜಲ್ ನಿಶಾದ್ ಆಸ್ಪತ್ರೆಗೆ ದಾಖಲು