ಬೆಂಗಳೂರು: ಕೊಡಗಿನಲ್ಲಿ ಸುಸಜ್ಜಿತವಾದ ಒಂದು ಆಸ್ಪತ್ರೆ ಇಲ್ಲ ಎಂದು ಅಲ್ಲಿ ಜನತೆ #WeNeedEmergencyHospitalInKodagu ಎಂಬ ಟ್ಟಿಟ್ಟರ್ ಅಭಿಯಾನ ಒಂದನ್ನು ಶುರು ಮಾಡಿದ್ದರು. ಈ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಸ್ಯಾಂಡಲ್‍ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕೊಡ ಬೆಂಬಲ ಸೂಚಿಸಿದ್ದಾರೆ.
ಈ ಅಭಿಯಾನಕ್ಕೆ ಸ್ಯಾಂಡಲ್‍ವುಡ್‍ನಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಹ್ಯಾಟ್ರಿಕ್ ಹೀರೋ ಶಿವಣ್ಣ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ಕೊಡಗಿನ ಬೆಡಗಿಯರಾದ ರಶ್ಮಿಕಾ ಮಂದಣ್ಣ ಮತ್ತು ಹರ್ಷಿಕಾ ಪೂಣಚ್ಚ ಅವರು ಕೊಡ #WeNeedEmergencyHospitalInKodagu ಎಂಬ ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿ ತಮ್ಮ ಬೆಂಬಲ ಸೂಚಿಸಿದ್ದರು. ಇದನ್ನು ಓದಿ:ಸಿಎಂ ಬಳಿ ನಟಿ ರಶ್ಮಿಕಾ, ಹರ್ಷಿಕಾ ಮನವಿ
Advertisement
Advertisement
ಈ ಅಭಿಯಾನಕ್ಕೆ ಬೆಂಬಲ ಸೂಚಿಸಿ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್ ಅವರು, ನನ್ನ ಕೊಡಗು ಅಭಿಮಾನಿಗಳು ಮತ್ತು ಕುಟುಂಬದವರ ಬೆಂಬಲಕ್ಕೆ ನಾನು ಯಾವಗಲೂ ಇರುತ್ತೇನೆ. ನಾನು ಖಂಡಿತವಾಗಿ ಈ ಅಭಿಯಾನಕ್ಕೆ ಸಹಾಯ ಮಾಡುತ್ತೇನೆ. ನಾನು ಯಾವಾಗಲೂ ನನ್ನ ಜನರ ಜೊತೆ ಇರುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
Advertisement
I'm always there for my kodagu fnzz n families.. I shall surely do my best.
My support to my people Wil always be there
Mch mch Luv to all.#WeNeedEmergencyHospitalInKodagu https://t.co/eVxgJ0KLOb
— Kichcha Sudeepa (@KicchaSudeep) June 14, 2019
Advertisement
ಕೊಡಗು ಜಿಲ್ಲೆಯಲ್ಲಿ ಒಂದು ಸರಿಯಾದ ಆಸ್ಪತ್ರೆ ಇಲ್ಲ. ಅನಾರೋಗ್ಯ, ಅಪಘಾತವಾದರೆ ದೂರದ ಮಂಗಳೂರು ಇಲ್ಲ ಮೈಸೂರಿನ ಆಸ್ಪತ್ರೆಗೆ ಹೋಗಬೇಕು. ಹಾಗೇ ದೂರದ ಆಸ್ಪತ್ರೆಗೆ ಹೋಗುವ ದಾರಿಯಲ್ಲಿ ಹಲವಾರು ಜನ ಸಾವನ್ನಪ್ಪಿದ್ದಾರೆ. ಹೀಗಾಗಿ ಕೊಡಗು ಜಿಲ್ಲೆಗೆ ಒಂದು ಸುಸಜ್ಜಿತವಾದ ಆಸ್ಪತ್ರೆಯ ಅಗತ್ಯವಿದೆ ಎಂದು ಅಲ್ಲಿನ ಜನ ಟ್ವಿಟ್ಟರ್ ಅಭಿಯಾನವನ್ನು ಆರಂಭ ಮಾಡಿದ್ದರು.
ಇದೇ ಮೊದಲ ಬಾರಿಗೆ #WeNeedEmergencyHospitalInKodagu ಅಭಿಯಾನವನ್ನು ಕೊಡಗಿನ ಜನತೆ ಆರಂಭಿಸಿದ್ದಾರೆ. ಕೊಡಗಿನಲ್ಲಿ ಐಷಾರಾಮಿ ರೆಸಾರ್ಟ್, ಹೋಮ್ ಸ್ಟೇ ಇದೆ. ಆದರೆ ಸುಸಜ್ಜಿತ ಆಸ್ಪತ್ರೆ ಇಲ್ಲ. ಈ ಹಿನ್ನೆಲೆಯಲ್ಲಿ ಟ್ವಿಟ್ಟರ್ ಮೂಲಕ ಸರ್ಕಾರದ ಗಮನ ಸೆಳೆಯಲು ಕೊಡಗಿನ ಮಂದಿ ನಿರ್ಧರಿಸಿದ್ದಾರೆ.