ಬೆಂಗಳೂರು: ಸ್ಯಾಂಡಲ್‍ವುಡ್ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ಇಂದು ವಿಶ್ವದಾದ್ಯಂತ ಬಿಡುಗಡೆಯಾಗಿದೆ.
Advertisement
ಈಗಾಗಲೇ ಟ್ರೈಲರ್, ಸಾಂಗ್ ಮೂಲಕ ಎಲ್ಲರ ಗಮನ ಸೆಳೆದಿದ್ದ ವಿಕ್ರಾಂತ್ ರೋಣ ಸಿನಿಮಾ ನೋಡಲು ಇಂದು ಪ್ರೇಕ್ಷರು ಮುಂಜಾನೆಯಿಂದಲೇ ಚಿತ್ರಮಂದಿರಗಳಲ್ಲಿ ಜಮಾಯಿಸಿದ್ದರು. ಸಿನಿಮಾದಲ್ಲಿ ಕಿಚ್ಚನ ಸ್ಟೈಲಿಶ್ ಲುಕ್ ನೋಡಿ ಫಿದಾ ಆಗಿರುವ ಅಭಿಮಾನಿಗಳು ಸದ್ಯ ಸಿನಿಮಾ ನೋಡುತ್ತಾ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಇದನ್ನೂ ಓದಿ: ವಿಕ್ರಾಂತ್ ರೋಣ ಶೋ ಸಂಖ್ಯೆ ಹೆಚ್ಚಳ: ವಿಶ್ವದಾದ್ಯಂತ 9500 ಶೋ, 2500 ಸ್ಕ್ರೀನ್ ಗಳಲ್ಲಿ ಪ್ರದರ್ಶನ
Advertisement
Advertisement
325 ಸಿಂಗಲ್ ಸ್ಕ್ರೀನ್‍ಗಳಲ್ಲಿ ವಿಕ್ರಾಂತ್ ರೋಣ ಸಿನಿಮಾ ತೆರೆಕಂಡಿದ್ದು, ಮೊದಲ ದಿನ ರಾಜ್ಯದಲ್ಲಿ ಬರೋಬ್ಬರಿ 2,500 ಶೋಗಳು ನಡೆಯಲಿದೆ. ಸುಮಾರು 900 ಸ್ಕ್ರೀನ್‍ಗಳಲ್ಲಿ 3ಡಿ ಹಾಗೂ 1,600 ಸ್ಕ್ರೀನ್‍ನಲ್ಲಿ 2ಡಿ ವರ್ಷನ್ ಬಿಡುಗಡೆಯಾಗಿದೆ. ಬೆಂಗಳೂರಿನ 40 ಮಲ್ಟಿಪ್ಲೆಕ್ಸ್‌ನಲ್ಲಿ 800 ಶೋ ಒಟ್ಟು 70 ಸಿಂಗಲ್ ಸ್ಕ್ರೀನ್‍ನಲ್ಲಿ 400 ಶೋ ಇದೆ. ಬೆಳಗ್ಗೆ 5.30ಕ್ಕೆ ಶಂಕರ್ ನಾಗ್ ಚಿತ್ರಮಂದಿರದಲ್ಲಿ ಮೊದಲ ಶೋ ಪ್ರಾರಂಭವಾಗಿದೆ.
Advertisement
ಪ್ರಿಯಾ ಸುದೀಪ್ ಅವರು ಮುಂಜಾನೆಯೇ ಬೆಂಗಳೂರಿನ ಊರ್ವಶಿ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದು, ಅವರ ಜೊತೆ ಊರ್ವಶಿ ಥಿಯೇಟರ್‌ನಲ್ಲಿ ನಿರ್ದೇಶಕ ಅನೂಪ್ ಭಂಡಾರಿ ಮತ್ತು ಚಿತ್ರತಂಡ ಸಿನಿಮಾ ವೀಕ್ಷಿಸಿದ್ದಾರೆ. ಇದನ್ನೂ ಓದಿ: ಸಂಸದರಿಗೆ, ಸರಕಾರಿ ಅಧಿಕಾರಿಗಳಿಗಾಗಿ ‘ವಿಕ್ರಾಂತ್ ರೋಣ’ ಸ್ಪೆಷಲ್ ಶೋ
ವೀರೇಶ್ ಥಿಯೇಟರ್‌ನಲ್ಲಿ ಕಿಚ್ಚನ ಅಭಿಮಾನಿಗಳು ದೊಡ್ಡ ಮಟ್ಟದಲ್ಲಿ ಸೆಲೆಬ್ರೇಷನ್ ಮಾಡುತ್ತಿದ್ದಾರೆ. ಕನ್ನಡ, ಇಂಗ್ಲೀಷ್ ಸೇರಿದಂತೆ 6 ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಿದ್ದು, ಆಂಧ್ರ-ತೆಲಂಗಾಣ, ತಮಿಳುನಾಡು, ಕೇರಳ, ಉತ್ತರ ಭಾರತ ಸೇರಿದಂತೆ 50ಕ್ಕೂ ಹೆಚ್ಚು ದೇಶಗಳಲ್ಲಿ ವಿಕ್ರಾಂತ್ ರೋಣ ಅಬ್ಬರಿಸುತ್ತಿದ್ದಾನೆ.
ನಿರ್ದೇಶಕ ಅನೂಪ್ ಭಂಡಾರಿ ಆ್ಯಕ್ಷನ್ ಕಟ್ ಹೇಳಿರುವ ವಿಕ್ರಾಂತ್ ರೋಣ ಚಿತ್ರದಲ್ಲಿ ನಾಯಕ ನಟರಾಗಿ ಕಿಚ್ಚ ಸುದೀಪ್ ಅಭಿನಯಿಸಿದರೆ, ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಿರೂಪ್ ಭಂಡಾರಿ, ನೀತಾ ಅಶೋಕ್, ಜಾಕೆಲ್ವಿನ್ ಫರ್ನಾಂಡಿಸ್, ರವಿಶಂಕರ್ ಗೌಡ ಸೇರೆದಂತೆ ಹಲವಾರು ಕಲಾವಿದರು ಅಭಿನಯಿಸಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದು, ವಿಲಿಯಂ ಡೇವಿಡ್ ಛಾಯಾಗ್ರಹಣ ಚಿತ್ರಕ್ಕಿದೆ.