ಕನ್ನಡದ ನಟ ಕಿಶೋರ್ (Kishore) ಬಹುಭಾಷಾ ನಟನಾಗಿ ಗುರುತಿಸಿಕೊಂಡಿದ್ದಾರೆ. ಇದೀಗ ಬಾಲಿವುಡ್ನಲ್ಲಿಯೂ(Bollywood) ಮಿಂಚಲು ಸಜ್ಜಾಗಿದ್ದಾರೆ. ವಿಭಿನ್ನ ಪಾತ್ರದ ಮೂಲಕ ಹಿಂದಿ ಚಿತ್ರರಂಗದಲ್ಲಿ ಕಿಶೋರ್ ಕಾಣಿಸಿಕೊಳ್ಳಲಿದ್ದಾರೆ.
ಕನ್ನಡ ಸೇರಿದಂತೆ ತಮಿಳು ಮತ್ತು ತೆಲುಗು ಚಿತ್ರರಂಗದಲ್ಲೂ ಗುರುತಿಸಿಕೊಂಡಿರುವ ಪ್ರತಿಭಾನ್ವಿತ ಕನ್ನಡದ ನಟ ಕಿಶೋರ್, ಇದೀಗ ಬಾಲಿವುಡ್ನತ್ತ (Bollywood) ಮುಖ ಮಾಡಿದ್ದಾರೆ. ಈಗಾಗಲೇ ನಾಯಕ, ಖಳನಾಯಕ, ಪೋಷಕ ಪಾತ್ರಗಳ ಮೂಲಕ ರಂಜಿಸಿರುವ ಕಿಶೋರ್, ಹಿಂದಿ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣ ನಾಯಕನಾಗಿ ಎಂಟ್ರಿ ಕೊಡಲಿದ್ದಾರೆ. ಇದನ್ನೂ ಓದಿ:ಸ್ಯಾಂಡಲ್ ವುಡ್ ನಟಿ ಇತಿ ಆಚಾರ್ಯಗೆ ನ್ಯೂಯಾರ್ಕ್ ನಲ್ಲಿ ವಿಶೇಷ ಗೌರವ
ವಿಭಿನ್ನ ಟೈಟಲ್ `ರೆಡ್ ಕಾಲರ್’ ಚಿತ್ರದ ಮೂಲಕ ಬಾಲಿವುಡ್ಗೆ ಕಿಶೋರ್ ಪಾದಾರ್ಪಣೆ ಮಾಡ್ತಿದ್ದಾರೆ. ಕನ್ನಡದ `ರಥಾವರ’ ಚಿತ್ರದ ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ಹಿಂದಿ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ.
ಪವರ್ಫುಲ್ ಪಾತ್ರದ ಮೂಲಕ ರಂಜಿಸಲು ಕಿಶೋರ್ ರೆಡಿಯಾಗಿದ್ದಾರೆ. ಈ ಚಿತ್ರದಲ್ಲಿ ಬಹುಪಾಲು ಕನ್ನಡದ ಕಲಾವಿದರೇ ಪೋಷಕ ಪಾತ್ರಗಳಲ್ಲಿ ನಟಿಸಲಿದ್ದಾರೆ.