– ಸತ್ಯ ಅರಿತು ನುಡಿಯುವ ಗುಣ ಬೆಳಸಿಕೊಳ್ಳಿ
ಬೆಂಗಳೂರು: ಸುಳ್ಳು ಆಪಾದನೆ ಮಾಡಿರುವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಸ್ಯಾಂಡಲ್‍ವುಡ್ ನಟ ಜಗ್ಗೇಶ್ ಟ್ವೀಟ್ ಮೂಲಕವಾಗಿ ಮಾಹಿತಿ ನೀಡಿದ್ದಾರೆ.
ಟ್ವೀಟ್ ನಲ್ಲಿ ಏನಿದೆ?
ಸಂಬಂಧವಿಲ್ಲದೆ ನನ್ನ ಹೆಸರು ಹಾಗೂ ಆರ್ ಅಶೋಕ್ ಅವರ ಹೆಸರು ತೆಗೆದು ರಘು ಎಂಬವರು ಅಪಮಾನಿಸಿದ್ದಾರೆ. ಇದು ನನಗೆ ಬಹಳ ನೋವುಂಟು ಮಾಡಿದೆ. ಹೀಗಾಗಿ ಸಂಬಂಧವಿಲ್ಲದೆ ನನ್ನ ಬಗ್ಗೆ ಸುಳ್ಳು ಆಪಾದನೆ ಮಾಡಿರುವ ಮಾನ್ಯ ರಘುರವರ ಮೇಲೆ ಮಾನನಷ್ಟ ಆಪಾದನೆ ದಾಖಲಿಸುತ್ತಿರುವೆ. ದಯಮಾಡಿ ಯಾರೆ ಆಗಲಿ ಸತ್ಯ ಅರಿತು ನುಡಿಯುವ ಗುಣ ಬೆಳಸಿಕೊಳ್ಳಿ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ರಾಜಮಾರ್ಗ, ಗಲ್ಲಿಯಲ್ಲಿ ಆನೆ ನಡೆಯುವಾಗ ನಾಯಿ ಬೊಗಳುವುದು ಸಹಜ: ಜಗ್ಗೇಶ್
Advertisement
ಸಂಬಂಧವಿಲ್ಲದೆ ನನ್ನ ಹೆಸರು ಹಾಗು @RAshokaBJP ರವರ ಹೆಸರು ತೆಗೆದು #DSS #Raghu ಎಂಬುವರು ಅಪಮಾನಿಸಿದ್ದಾರೆ!
ಇದು ನನಗೆ ಬಹಳ ನೋವುಂಟು ಮಾಡಿದೆ!ಹಾಗಾಗಿ ಸಂಬಂಧವಿಲ್ಲದೆ ನನ್ನ ಬಗ್ಗೆ ಸುಳ್ಳು ಆಪಾದನೆ ಮಾಡಿರುವ ಮಾನ್ಯ ರಘುರವರ ಮೇಲೆ #ಮಾನನಷ್ಟ#ಅಪಾದನೆ ದಾಖಲಿಸುತ್ತಿರುವೆ!
ದಯಮಾಡಿ ಯಾರೆ ಆಗಲಿ ಸತ್ಯ ಅರಿತು ನುಡಿಯುವ ಗುಣ ಬೆಳಸಿಕೊಳ್ಳಿ!
— ನವರಸನಾಯಕ ಜಗ್ಗೇಶ್ (@Jaggesh2) August 25, 2021
Advertisement
ದಲಿತ ಸಂಘರ್ಷದ ರಾಜ್ಯಾಧ್ಯಕ್ಷ ರಘು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಇಷ್ಟು ದಿನ ಕೇವಲ ಬಿಬಿಎಂಪಿ ಅಧಿಕಾರಿಗಳು ಅಕ್ರಮದಲ್ಲಿ ಶಾಮೀಲಾಗುತ್ತಿದ್ದರು. ಆದರೆ ಈ ಬಾರಿ ಪಾಲಿಕೆಯ ಭ್ರಷ್ಟಚಾರ ಸ್ಯಾಂಡಲ್‍ವುಡ್‍ಗೆ ಅಂಟಿಕೊಂಡಿದೆ. ಪಾಲಿಕೆ ವ್ಯಾಪ್ತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 16,167 ಮಕ್ಕಳಿಗೆ ಸ್ವೆಟರ್ ಪೂರೈಕೆ ಮಾಡುವ ಜವಾಬ್ದಾರಿಯನ್ನು ನಟ ಜಗ್ಗೇಶ್ ತಮ್ಮ ಕೋಮಲ್ ಹೊತ್ತಿದ್ದರು. ಅವರಿಗೆ 1.75 ಕೋಟಿ ರೂ. ಹಣ ಬಿಡುಗಡೆ ಆಗಿದೆ. ಆರ್ ಅಶೋಕ್, ನಟ ಜಗ್ಗೇಶ್ ಅವರು ಒತ್ತಡ ಹಾಕಿಸಿ ಹಣ ಬಿಡುಗಡೆ ಮಾಡಿಸಿದ್ದರು. ಆದರೆ ಕೋವಿಡ್ ಕಾರಣದಿಂದ ಕಳೆದ ವರ್ಷ ತರಗತಿಗಳೇ ನಡೆದಿಲ್ಲ. ಸ್ವೆಟರ್ ಹಂಚಿಕೆ ಮಾಡದೆಯೇ 1.75 ಕೋಟಿ ರೂ. ಹಣ ಪಡೆದಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: 1.72 ಕೋಟಿ ರೂ. ಸ್ವೆಟರ್ ಹಗರಣಕ್ಕೆ ಹೊಸ ಟ್ವಿಸ್ಟ್
Advertisement
Advertisement
2020-21 ಸಾಲಿನಲ್ಲಿ ಪಾಲಿಕೆ ಶಾಲೆಗಳಿಗೆ ಸ್ವೆಟರ್ ಪೂರೈಕೆ ಮಾಡಲು ನಿರ್ಧಾರ ಮಾಡಲಾಗಿತ್ತು. ತರಾತುರಿಯಲ್ಲಿ ಸ್ವೆಟರ್ ಪೂರೈಕೆ ಮಾಡ್ಬೇಕಾಗಿರೋದ್ರಿಂದ ಟೆಂಡರ್ ಕರೆಯದೇ 4ಜಿ ವಿನಾಯಿತಿ ಪಡೆದು ಕರ್ನಾಟಕ ಕೈಮಗ್ಗ ನಿಗಮಕ್ಕೆ ಸ್ವೆಟರ್‍ಗಳನ್ನು ಸರಬರಾಜು ಮಾಡಲು ಆದೇಶವೂ ಆಗಿತ್ತು. ಆದರೆ ಅದನ್ನು ದುರುಪಯೋಗ ಮಾಡಿಕೊಳ್ಳಲಾಗಿದ್ದು, ಬಿಬಿಎಂಪಿಗೆ ನಟ ಕೋಮಲ್ ಸಹ ಸಾಥ್ ನೀಡಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ಆರೋಪ ಮಾಡಿದೆ.