Connect with us

ಕಾರು ಅಪಘಾತದಲ್ಲಿ ನಟ ಮಂಡ್ಯ ರಮೇಶ್ ಕೂದಲೆಳೆ ಅಂತರದಲ್ಲಿ ಪಾರು

ಕಾರು ಅಪಘಾತದಲ್ಲಿ ನಟ ಮಂಡ್ಯ ರಮೇಶ್ ಕೂದಲೆಳೆ ಅಂತರದಲ್ಲಿ ಪಾರು

ಮಂಡ್ಯ: ಚಿತ್ರ ನಟ ಮಂಡ್ಯ ರಮೇಶ್ ಅವರ ಕಾರು ಅಪಘಾತಕ್ಕೀಡಾಗಿದ್ದು, ಕೂದಲೆಳೆಯ ಅಂತರದಲ್ಲಿ ಹಾಸ್ಯ ನಟ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಲೋಕಪಾವನಿ ಸೇತುವೆ ಬಳಿ ನಡೆದಿದೆ.

ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ 7.10ರಲ್ಲಿ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಮಜಾ ಟಾಕೀಸ್ ಶೂಟಿಂಗ್ ಮುಗಿಸಿಕೊಂಡು ಮಂಡ್ಯ ರಮೇಶ್ ತಾವೊಬ್ಬರೇ ಕಾರು ಚಲಾಯಿಸಿಕೊಂಡು ಮೈಸೂರಿಗೆ ಬರುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಲಾರಿ ಅಡ್ಡದಿಡ್ಡಿ ಚಲಿಸಿದೆ. ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ಕಾರು ನಿಯಂತ್ರಣ ತಪ್ಪಿ ಡಿವೈಡರ್‍ಗೆ ಡಿಕ್ಕಿ ಹೊಡೆದು, ಹಾರಿ ಮಧ್ಯ ನಿಂತಿದೆ.

ಘಟನೆಯಿಂದಾಗಿ ಕಾರಿನ ಮುಂಭಾಗ ಜಖಂಗೊಂಡಿದೆ. ಕಾರಿನ ಚಕ್ರಗಳು ಸ್ಫೋಟಗೊಂಡಿವೆ. ಅದೃಷ್ಟವಶಾತ್ ಮಂಡ್ಯ ರಮೇಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಿಂದ ಗಾಬರಿಗೊಂಡಿದ್ದ ಮಂಡ್ಯ ರಮೇಶ್, ತಮ್ಮ ಶಿಷ್ಯನಿಗೆ ಕರೆ ಮಾಡಿ ದ್ವಿಚಕ್ರ ವಾಹನದಲ್ಲಿ ಮೈಸೂರಿಗೆ ತೆರಳಿದ್ದಾರೆ. ನಂತರ ಕಾರನ್ನು ತೆಗೆದುಕೊಂಡು ಹೋಗಿದ್ದು, ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.

https://www.youtube.com/watch?v=wUwELE27XPI

Advertisement
Advertisement