ನಾಗಚೈತನ್ಯ (Nagachaitanya) ಮತ್ತು ಶೋಭಿತಾ (Sobhita Dulipala) ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನಲಾದ ಸುದ್ದಿಯೊಂದು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ. ಇದನ್ನೂ ಓದಿ:ಅವಮಾನ ಸಹಿಸುವಷ್ಟು ಚಿಕ್ಕವನಲ್ಲ – ಸ್ಯಾಂಡಲ್ವುಡ್ನಿಂದ ಅಸಹಕಾರದ ಬೆನ್ನಲ್ಲೇ ಸೋನು ನಿಗಮ್ ರಿಯಾಕ್ಷನ್
ಇತ್ತೀಚೆಗೆ ಸಮಾರಂಭವೊಂದರಲ್ಲಿ ಕಾಣಿಸಿಕೊಂಡಿದ್ದಾಗ ಶೋಭಿತಾ ಸೀರೆಯ ಅಂಚನ್ನು ಕೈಯಲ್ಲಿ ಹಿಡಿದುಕೊಂಡು ಹೊಟ್ಟೆಯನ್ನು ಮುಚ್ಚಿಟ್ಟುಕೊಳ್ಳುವ ಪ್ರಯತ್ನ ಮಾಡುತ್ತಿದ್ದರು. ಈ ಕುರಿತ ಫೋಟೋ ಹಾಗೂ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ:ನಟ ಉಪೇಂದ್ರ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು
ಇತ್ತೀಚೆಗೆ ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ನಾಗಾರ್ಜುನ, ನಾಗಚೈತನ್ಯ ಜೊತೆ ಶೋಭಿತಾ ಕೂಡ ಆಗಮಿಸಿದ್ದರು. ಈ ವೇಳೆ, ಶೋಭಿತಾ ಹೊಟ್ಟೆಯನ್ನು ಮುಚ್ಚಿಟ್ಟುಕೊಳ್ಳುವ ಪ್ರಯತ್ನ ಮಾಡುತ್ತಿದ್ದರು. ಹೀಗಾಗಿ ಶೋಭಿತಾ ಮದುವೆಯಾಗಿ ತಿಂಗಳಿಗೆ ಗುಡ್ ನ್ಯೂಸ್ ಕೊಟ್ರಾ ಎಂಬ ಮಾತುಗಳು ಕೇಳಿಬರ್ತಿವೆ.
View this post on Instagram
ಸಮಂತಾ (Samantha) ಜೊತೆಗಿನ ಡಿವೋರ್ಸ್ ಬಳಿಕ ಶೋಭಿತಾರನ್ನ ಪ್ರೀತಿಸಿ ಮದುವೆಯಾದರು. ಡಿ.4ರಂದು ನಾಗಚೈತನ್ಯ ಮತ್ತು ಶೋಭಿತಾ ಮದುವೆ ನಡೆದಿತ್ತು.