ನಟ ನಾಗಭೂಷಣ್ ಕಾರು ಅಪಘಾತ: ಪೊಲೀಸರ ಕೈ ಸೇರಿದ ಮತ್ತೊಂದು ವರದಿ

Public TV
2 Min Read
nagabhushan

ಸ್ಯಾಂಡಲ್ ವುಡ್ ನಟ ನಾಗಭೂಷಣ್ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮತ್ತೊಂದು ವರದಿ ಸಿಕ್ಕಿದ್ದು, ಆ ವರದಿ ಇದೀಗ ಬಯಲಾಗಿದೆ. ಅಪಘಾತದ ಬಗ್ಗೆ ತಿಳಿಯುವುದಕ್ಕಾಗಿ ನಾಗಭೂಷಣ್ ಚಾಲನೆ ಮಾಡುತ್ತಿದ್ದ ಕಾರಿನ ಐಎಂವಿ ಟೆಸ್ಟ್ ಮಾಡಲು ಆರ್.ಟಿ.ಐ ಅಧಿಕಾರಿಗಳಿಗೆ (R.T.O. Report) ಪೊಲೀಸರು ಸೂಚಿಸಿದ್ದರು. ಅಧಿಕಾರಿಗಳು ಐಎಂವಿ ಟೆಸ್ಟ್ ಮಾಡಿದ್ದು, ತಮ್ಮ ವರದಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

nagabhushan

ನಾಗಭೂಷಣ್ ಕಾರು ಅಪಘಾತ ಅತಿಯಾದ ವೇಗದಿಂದ ಆಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅಪಘಾತದ ವೇಳೆ ಗಂಟೆಗೆ 50 ರಿಂದ 60 ಕಿಲೋ ಮೀಟರ್ ವೇಗದಲ್ಲಿ ಕಾರು ಚಲಿಸುತ್ತಿತ್ತು ಎಂದು ವರದಿ ಮಾಡಿದ್ದಾರೆ. ಕಾರಿನ ಟಯರ್ ಸ್ಪೀಟ್, ಮೀಟರ್ ಪರಿಶೀಲನೆ ಮಾಡಿ ಇಂಥದ್ದೊಂದು ವರದಿಯನ್ನು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸರಿಗೆ ನೀಡಲಾಗಿದೆ. ಇದನ್ನೂ ಓದಿ: ಮಂತ್ರಿಯೊಂದಿಗೆ ನನ್ನ ಪತ್ನಿಗೆ ಅಫೇರ್ ಇತ್ತು- ಶಾಕಿಂಗ್ ಹೇಳಿಕೆ ಕೊಟ್ಟ ಸಂಜಯ್ ದತ್

nagabhushan 1

ಏನಿದು ಪ್ರಕರಣ?

ಅಕ್ಟೋಬರ್ 30ರಂದು ರಾತ್ರಿ 9 ಗಂಟೆಯ ಹೊತ್ತಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಾರು ಅಪಘಾತದಲ್ಲಿ (Car accident) ಪ್ರೇಮಾ ಎನ್ನುವ ಮಹಿಳೆ ಸಾವನ್ನಪ್ಪಿ, ಅವರ ಪತಿ ಗಂಭೀರವಾಗಿ ಗಾಯಗೊಂಡಿದ್ದರು. ಪತಿ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ನಾಗಭೂಷಣ್ (Nagbhushan) ಈ ಅಪಘಾತಕ್ಕೆ ಕಾರಣವಾಗಿದ್ದು, ನಟನನ್ನು ಕುಮಾರಸ್ವಾಮಿ ಪೋಲಿಸರು ಬಂಧಿಸಿ ನಂತರ ಸ್ಟೇಶನ್ ಬೇಲ್ ಮೇಲೆ ಬಿಡುಗಡೆ ಮಾಡಿದ್ದಾರೆ.  ಈ ಘಟನೆಯ ಕುರಿತು ಸ್ವತ ನಾಗಭೂಷಣ್ ಕೂಡ ಪೊಲೀಸರ ಮುಂದೆ ಹೇಳಿಕೆಯನ್ನು ದಾಖಲಿಸಿದ್ದರು.

nagabhushan 2

ರಾತ್ರಿ ಸ್ನೇಹಿತರನ್ನು ಭೇಟಿ ಮಾಡಲು ಆರ್.ಆರ್ ನಗರಕ್ಕೆ ಹೋಗಿರುವುದಾಗಿ, ಅಲ್ಲಿಂದ ಜೆಪಿ ನಗರದಲ್ಲಿರುವ ತಮ್ಮ ಮನೆಗೆ ವಾಪಸ್ಸಾಗುವಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ನಾಗಭೂಷಣ್ ತಿಳಿಸಿದ್ದರು. ತಾವೇ ಸ್ವತಃ ಕಾರು ಚಾಲನೆ ಮಾಡಿಕೊಂಡು ಹೋಗುತ್ತಿರುವಾಗ ಅಪಾರ್ಟಮೆಂಟ್ ಹತ್ತಿರ ಒಬ್ಬ ಮಹಿಳೆ ಮತ್ತು ಒಬ್ಬರು ವ್ಯಕ್ತಿ ಫುಟ್ ಪಾತ್ ಮೇಲಿಂದ ರಸ್ತೆಗೆ ಕೆಳಗೆ ಇಳಿದು ರಸ್ತೆಗೆ ಬಂದರು. ಅವರು ಬಂದಿದ್ದನ್ನು ನೋಡಿ ನನಗೆ ಗಾಬರಿಯಾಗಿ ರಸ್ತೆಗೆ ಬಂದಿದ್ದವರಿಗೆ ಡಿಕ್ಕಿ ಮಾಡಿ, ನಂತರ ಫುಟ್ ಪಾತ್ ಮೇಲೆ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಮಾಡಿದೆನು ಎಂದು ಅವರು ಹೇಳಿಕೆಯನ್ನು ನೀಡಿದ್ದರು.

 

ಈ ಘಟನೆಯಾದಾಗ ಮಹಿಳೆಗೆ ತಲೆಗೆ ಮತ್ತು ಮುಖಕ್ಕೆ ಜಾಸ್ತಿ ಏಟಾಗಿತ್ತು. ಅವರು ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಗಂಡಸಿಗೆ ಕಾಲುಗಳಿಗೆ ಮತ್ತು ಹೊಟ್ಟೆ ಹಾಗೂ ತಲೆಗೆ ಗಾಯವಾಗಿತ್ತು. ನನ್ನ ಕಾರು ಸ್ಟಾರ್ಟ್ ಆಗದೇ ಇರುವ ಕಾರಣಕ್ಕಾಗಿ ಆಟೋದಲ್ಲಿ ಅವರನ್ನು ಸ್ವತಃ ನಾನೇ ಆಸ್ಪತ್ರೆಗೆ ಕರೆದುಕೊಂಡು ಹೋದೆ. ಆಸ್ಪತ್ರೆಯ ವೈದ್ಯರು ಮಾರ್ಗಮಧ್ಯದಲ್ಲೇ ಮಹಿಳೆಯು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು.  ಘಟನೆಯನ್ನು ತಿಳಿದು ಸಂಚಾರಿ ಪೊಲೀಸರು ಆಸ್ಪತ್ರೆಗೆ ಬಂದರು. ನಾನು ಕೂಡ ಅವರೊಂದಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆಗೆ ತೆರಳಿ ಮಾಹಿತಿ ನೀಡಿದೆ ಎಂದು ತಮ್ಮ ಹೇಳಿಕೆಯನ್ನು ನಾಗಭೂಷಣ್ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೊಂದೇ ತನಿಖೆ ನಡೆಯುತ್ತಿದೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article