ತೆಲುಗಿನ ಖ್ಯಾತ ನಟ ಹಾಗೂ ರಾಜಕಾರಣಿ ನಂದಮೂರಿ ತಾರಕರತ್ನ (Nandamuri Tarakaratna) ಆರೋಗ್ಯದಲ್ಲಿ (Health) ಯಾವುದೇ ಬದಲಾವಣೆ ಆಗದೇ ಇರುವ ಹಿನ್ನೆಲೆಯಲ್ಲಿ ಅವರ ಕುಟುಂಬದ ಸದಸ್ಯರು ಒಬ್ಬೊಬ್ಬರೇ ಬೆಂಗಳೂರಿಗೆ ಆಗಮಿಸಿ, ಅವರ ಆರೋಗ್ಯ ಸ್ಥಿತಿಯನ್ನು ವಿಚಾರಿಸುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಇನ್ನೂ ಗಂಭೀರವಾಗಿರುವ ಕಾರಣ, ಎರಡು ದಿನಗಳ ಕಾಲ ಏನೂ ಹೇಳಲು ಆಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ (Jr. NTR) ಕೂಡ ಆರೋಗ್ಯ ವಿಚಾರಿಸಲು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಜೊತೆಗೆ ಆರೋಗ್ಯ ಸಚಿವ ಕೆ.ಸುಧಾಕರ್ ಕೂಡ ನಟನಿಗೆ ಜೊತೆಯಾಗಿದ್ದಾರೆ.
Advertisement
ನಿನ್ನೆಯಷ್ಟೇ ಆಂಧ್ರದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬೆಂಗಳೂರಿಗೆ ಬಂದು ನಾರಾಯಣ ಹೃದಯಾಲಯಕ್ಕೆ ತೆರಳಿ ನಂದಮೂರಿ ಅವರ ಆರೋಗ್ಯ ವಿಚಾರಿಸಿದ್ದರು. ತಾರಕರತ್ನ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಅವರು ಆಗಮಿಸಿದ್ದರು. ನಿನ್ನೆ ಸಂಜೆ ನಂದಮೂರಿ ಅವರ ಆರೋಗ್ಯದ ಕುರಿತು ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಆರೋಗ್ಯ ತೀರಾ ಹದಗೆಟ್ಟಿದೆ ಹಾಗೂ ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆಸಿರುವುದಾಗಿ ಆಸ್ಪತ್ರೆ ತಿಳಿಸಿದೆ. ಹೃದಯದ ರಕ್ತನಾಳುಗಳು ಬ್ಲಾಕ್ ಆಗಿರುವುದರಿಂದ ಅವುಗಳನ್ನು ಸರಿಪಡಿಸಲು ವೈದ್ಯರು ಸತತ ಪ್ರಯತ್ನ ನಡೆಸಿದ್ದಾರೆ.
Advertisement
Advertisement
ಇಂಟ್ರಾ ಅಯೋರ್ಟಿಕ್ ಪಂಪ್, ವ್ಯಾಸೋಆಕ್ಟಿವ್ ನೆರವಿನಿಂದಲೂ ಚಿಕಿತ್ಸೆ ನೀಡಲಾಗಿದ್ದು, ಆಂಜಿಯೋಪ್ಲಾಸ್ಟಿ ಮೂಲಕ ಹಾನಿಯಾದ ರಕ್ತನಾಳಗಳಿಗೆ ಸ್ಟಂಟ್ ಹಾಕಲಾಗಿದೆ ಎಂದು ಹೆಲ್ತ್ ಬುಲೆಟಿನ್ ನಲ್ಲಿ ಉಲ್ಲೇಖಿಸಲಾಗಿದೆ. ಸ್ಟಂಟ್ ಅಳವಡಿಕೆಯ ನಂತರವೂ ರಕ್ತಸ್ರಾವ ನಿಲ್ಲದೇ ಇರುವುದು ಆತಂಕಕ್ಕೆ ಕಾರಣವಾಗಿದೆ. ಆದರೂ, ನುರಿತ ವೈದ್ಯರ ತಂಡ ಚಿಕಿತ್ಸೆಯನ್ನು ಮುಂದುವರೆಸಿದೆ ಎಂದು ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಲಾಗಿತ್ತು.
Advertisement
ನಂದಮೂರಿ ತಾರಕರತ್ನ ಅವರಿಗೆ ಶುಕ್ರವಾರ ತೀವ್ರ ಹೃದಯಾಘಾತ (Heart Attack) ವಾಗಿತ್ತು, ಕೂಡಲೇ ಅವರನ್ನು ಆಂಧ್ರದ ಕುಪ್ಪಂನ ಪಿಇಎಸ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಹೊಸೂರು ರಸ್ತೆಯ ನಾರಾಯಣ ಹೃದಯಾಲಯಕ್ಕೆ ಸ್ಥಳಾಂತರ ಮಾಡಲಾಗಿತ್ತು. ಮೊನ್ನೆ ತಡರಾತ್ರಿ 12 ಗಂಟೆ ಸಂದರ್ಭದಲ್ಲಿ ಆಂಧ್ರದ ಕುಪ್ಪಂನಿಂದ ಅಂಬುಲೆನ್ಸ್ ಮೂಲಕ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಬಳಿಕ ಯಶಸ್ವಿಯಾಗಿ ಆಂಜಿಯೋಗ್ರಾಮ್ (Angiogram) ಮಾಡಿ ಸ್ಟಂಟ್ ಅಳವಡಿಕೆ ಮಾಡಲಾಗಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿರುವುದಾಗಿ ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k