ಹೈದರಾಬಾದ್: ಟಾಲಿವುಡ್‍ನಲ್ಲಿ ತನ್ನದೇ ಆದ ಶೈಲಿಯ ಚಿತ್ರಗಳಿಗೆ ಹೆಸರುವಾಸಿಯಾಗಿರೋ ನಟ ನಾನಿ ಕಾರ್ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.
ಜೂಬಿಲಿ ಹಿಲ್ಸ್ ರೋಡ್ ನಂ. 45 ರಲ್ಲಿ ಈ ಅಪಘಾತ ಸಂಭವಿಸಿದೆ. ಸಿನಿಮಾವೊಂದರ ಚಿತ್ರೀಕರಣ ಮುಗಿಸಿಕೊಂಡು ಶುಕ್ರವಾರ ನಾನಿ ತನ್ನ ಇನ್ನೋವಾ ಕಾರಿನಲ್ಲಿ ಡ್ರೈವರ್ ಶ್ರೀನಿವಾಸ್ ಜೊತೆ ಮನೆಗೆ ಹಿಂದಿರುಗುತ್ತಿದ್ದರು. ಅಂತೆಯೇ ತನ್ನ ಟೊಯೊಟಾ ಇನ್ನೊವಾ ಕಾರಿನಲ್ಲಿ ಜುಬಿಲೀ ಹಿಲ್ಸ್ ನಿಂದ ಗ್ಯಾಚಿಬೋವ್ಲಿಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಸುಮಾರು ಸಂಜೆ 4.30 ಕ್ಕೆ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದಿದೆ. ಘಟನೆಯ ಸಂದರ್ಭದಲ್ಲಿ ನಟ ನಾನಿ ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತ್ತಿದ್ದರು. ಹೀಗಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
Advertisement
Advertisement
ಅದೃಷ್ಟವಶಾತ್ ಕಾರಿನಲ್ಲಿ ಏರ್ ಬ್ಯಾಗ್‍ಗಳನ್ನು ಅಳವಡಿಸಿದ್ದರಿಂದ ಇಬ್ಬರ ಪ್ರಾಣಕ್ಕೆ ಯಾವುದೇ ಅಪಾಯ ಸಂಭವಿಸಿಲ್ಲ. ಸಣ್ಣ ಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜುಬಿಲಿ ಹಿಲ್ಸ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ನರೇಶ್ ಹೇಳಿದ್ದಾರೆ.
Advertisement
ಈ ಸಂಬಂಧ ಚಾಲಕನ ವಿರುದ್ಧ ಸೆಕ್ಷನ್ 3 ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಪಘಾತದ ಬಳಿಕ ಪ್ರತಿಕ್ರಿಯಿಸಿದ ನಾನಿ, ನಾನು ಚೆನ್ನಾಗಿದ್ದೇನೆ. ಸಣ್ಣ ಪುಟ್ಟ ಗಾಯಗಳಾಗಿವೆ. ಯುದ್ಧಂಗೆ ಚಿತ್ರೀಕರಣಕ್ಕೆ ಸಣ್ಣ ಬ್ರೇಕ್ ಅಷ್ಟೆ. ನಾನು ಒಂದು ವಾರದಲ್ಲಿ ಚೇತರಿಸಿಕೊಂಡು ಮತ್ತೆ ಬರುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
Advertisement
ಪ್ರಸ್ತುತ ನಾನಿ ಮೆರ್ಲಾಪಾಕಾ ಗಾಂಧಿ ನಿರ್ದೇಶನದ `ಕೃಷ್ಣಾರ್ಜುನ ಯುದ್ಧಂ’ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ನಾನಿ ಡಬಲ್ ರೋಲ್‍ನಲ್ಲಿ ಕಾಣಿಸಿಕೊಳ್ಳುತ್ತಿದ್ದು, ಕೃಷ್ಣ ಮತ್ತು ಅರ್ಜುನ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಅನುಪಮ ಪರಮೇಶ್ವರನ್ ಮತ್ತು ರುಕ್ಷಾರ್ ಮೀರ್ ನಾಯಕಿ ಪಾತ್ರದಲ್ಲಿ ಮಿಂಚಲಿದ್ದಾರೆ.
2012 ಜುಲೈ 6 ರಲ್ಲಿ ಬಿಡುಗಡೆಯಾಗಿದ್ದ ಎಸ್ ಎಸ್ ರಾಜಮೌಳಿ ನಿರ್ದೇಶನದ `ಈಗ’ ಸಿನಿಮಾದಲ್ಲಿ ನಾನಿ ಅಭಿನಯಿಸಿದ್ದರು. ಈ ಸಿನಿಮಾದಲ್ಲಿ ನಾನಿ ಒಂದು ನೊಣವಾಗಿ ಅಭಿನಯಿಸಿ ಪ್ರೇಕ್ಷಕರ ಮನಗೆದ್ದು ಯಶಸ್ವಿಯಾಗಿದ್ದರು. ಈ ಸಿನಿಮಾದಲ್ಲಿ ಸ್ಯಾಂಡಲ್‍ವುಡ್ ನ ಸುದೀಪ್ ವಿಲನ್ ಆಗಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದರು.