ಕನ್ನಡ ಚಿತ್ರರಂಗ (Sandalwood) ಎದುರಿಸುತ್ತಿರುವ ಹಲವು ಸಮಸ್ಯೆಗಳ ಪರಿಹಾರಕ್ಕಾಗಿ ಇಂದು (ಆ.14) ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ನಡೆಯುತ್ತಿರುವ ಅಶ್ಲೇಷ ಬಲಿ ಪೂಜೆಯಲ್ಲಿ ಸ್ಯಾಂಡಲ್‌ವುಡ್ ಸೆಲೆಬ್ರಿಟಿಗಳು ಭಾಗಿಯಾಗಿದ್ದಾರೆ. ಈ ವೇಳೆ, ನಮ್ಮ ಊಟಕ್ಕೆ ಕುತ್ತು ಬಂದಾಗ ನಾವು ಭಗವಂತನ ಮೊರೆ ಹೋಗುಬೇಕು ಎಂದು ನೆನಪಿರಲಿ ಪ್ರೇಮ್ (Nenapirali Prem) ಮಾತನಾಡಿದ್ದಾರೆ. ಇದನ್ನೂ ಓದಿ:ಪವಿತ್ರಾಗೌಡ ಚಪ್ಪಲಿಯಲ್ಲೂ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆ
ಪೂಜೆ ಕಾರ್ಯದಲ್ಲಿ ಭಾಗಿಯಾದ ನೆನಪಿರಲಿ ಪ್ರೇಮ್ ಮಾತನಾಡಿ, ಜೀವನದಲ್ಲಿ ಏನೇ ಕಷ್ಟ ಬಂದರೂ ಫಸ್ಟ್ ನಾವು ಹೋಗೋದೇ ದೇವರ ಹತ್ತಿರ. ಚಿತ್ರರಂಗಕ್ಕೆ ಒಳ್ಳೆಯದಾಗಲಿ ಎಂಬ ಕಾರಣಕ್ಕೆ ಇದನ್ನು ಮಾಡಲಾಗುತ್ತಿದೆ. ಕನ್ನಡ ಸಿನಿಮಾಗಳು ಸೋಲುತ್ತಿದೆ. ಚಿತ್ರಮಂದಿರಕ್ಕೆ ಪ್ರೇಕ್ಷಕರು ಬರುತ್ತಿಲ್ಲ. ನಮ್ಮ ಊಟಕ್ಕೆ ಕುತ್ತು ಬಂದಾಗ ನಾವು ಭಗವಂತನ ಮೊರೆ ಹೋಗಬೇಕು. ಹಾಗಾಗಿ ಪೂಜೆ ಹವನ ಮಾಡುತ್ತಿದ್ದೇವೆ ಎಂದಿದ್ದಾರೆ. ಇದೇ ವೇಳೆ ದರ್ಶನ್ ಭೇಟಿಯ ಬಗ್ಗೆ ಮಾತನಾಡಿ, ಸದ್ಯದಲ್ಲೇ ಅವರನ್ನು ಭೇಟಿಯಾಗೋದಾಗಿ ತಿಳಿಸಿದರು. ಇದನ್ನೂ ಓದಿ:ದರ್ಶನ್ ಪ್ರಕರಣ: ಬಿಯರ್ ಬಾಟಲಿ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆ
ರಾಕ್‌ಲೈನ್ ವೆಂಕಟೇಶ್ ನೇತೃತ್ವದಲ್ಲಿ ಈ ಪೂಜೆ ನಡೆಯುತ್ತಿದ್ದು, ಹಿರಿಯ ನಟಿ ಗಿರಿಜಾ ಲೋಕೇಶ್, ಶರಣ್, ಲವ್ಲಿ ಸ್ಟಾರ್ ಪ್ರೇಮ್, ನಟಿ ರಾಗಿಣಿ ದ್ವಿವೇದಿ, ಅಭಿಷೇಕ್ ಅಂಬರೀಶ್, ಗುರುಕಿರಣ್, ಪದ್ಮಜಾ ರಾವ್ ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ.