ಅನುಕಂಪ ಗಿಟ್ಟಿಸುವುದು ಯಾವಾಗ್ಲೂ ನಡೆಯಲ್ಲ- ಸುಮಲತಾಗೆ ನಿಖಿಲ್ ಟಾಂಗ್

Public TV
1 Min Read
SUMALATHA NIKHIL

ಮಂಡ್ಯ: ಯಾರೋ ಏನೋ ಅಂದ್ಬಿಟ್ರು, ಯಾರೋ ಏನೋ ಅಂದ್ಬಿಟ್ರು ಅಂತ ಅನುಕಂಪ ಗಿಟ್ಟಿಸುವುದು ಯಾವಾಗಲೂ ನಡೆಯಲ್ಲ ಎಮದು ಹೇಳುವ ಮೂಲಕ ಸಂಸದೆ ಸುಮಲತಾಗೆ ನಟ ನಿಖಿಲ್ ಕುಮಾರಸ್ವಾಮಿ ಟಾಂಗ್ ನೀಡಿದರು.

Sumalatha JDS MLA 5

ಮಂಡ್ಯದ ಮದ್ದೂರಿನಲ್ಲಿ ಮಾತನಾಡಿದ ನಿಖಿಲ್, ಬೇರೆಯವರನ್ನು ದೂರುವ ಬದಲು ಸಂಸದರು ಆತ್ಮಾವಲೋಕನ ಮಾಡಿಕೊಳ್ಳಲಿ. ಸಂಸದರಾಗಿ ಜಿಲ್ಲೆಗೆ ಅವರ ಕೊಡುಗೆ ಏನು ಎಂದು ಪ್ರಶ್ನೆ ಮಾಡಿಕೊಳ್ಳಲಿ. ಮಂಡ್ಯದ ಶಾಸಕರು ಎರಡು ಮೂರು ಬಾರಿ ಆಯ್ಕೆ ಆಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಂಸದರಾಗಿ ಏನು ಮಾಡಬೇಕೆಂಬ ಜವಾಬ್ದಾರಿ ಇಲ್ಲ – ಸಮಲತಾ ವಿರುದ್ಧ ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ

nikhil kumaraswamy 3

ಅಭಿವೃದ್ಧಿ ಆಗಿಲ್ಲ ಅಂದ್ರೆ, ಶಾಸಕರನ್ನ ಜನರು ಪ್ರಶ್ನೆ ಮಾಡ್ತಾರೆ. ಇವರನ್ನ ಪ್ರಶ್ನೆ ಮಾಡೋರು ಯಾರು..?, ಪ್ರತಿ ಬಾರಿ ಕಾಲು ಕೆರೆದುಕೊಂಡು ಜಗಳ ಹುಟ್ಟುಹಾಕಿ. ಯಾರೋ ಏನೋ ಅಂದ್ಬಿಟ್ರು, ಯಾರೋ ಏನೋ ಅಂದ್ಬಿಟ್ರು ಅಂತ ಅನುಕಂಪ ಗಿಟ್ಟಿಸಲು ಆಗಲ್ಲ. 2024ರ ವರೆಗೂ ಅವರ ಅಧಿಕಾರ ಇದೆ. ಜನಗಳ ಜೊತೆ ನಿಂತು ಕೆಲಸ ಮಾಡಲಿ ಎಂದು ಗರಂ ಆದರು.

Share This Article