ಬೆಂಗಳೂರು: ಸ್ಯಾಂಡಲ್ವುಡ್ ನಟ ನಿಖಿಲ್ ಕುಮಾರಸ್ವಾಮಿ ಅವರು ಕುಟುಂಬದ ಮುದ್ದಾದ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡು ಸಂಕ್ರಾಂತಿ ಹಬ್ಬದ ಶುಭಕೋರಿದ್ದಾರೆ.
ನಿಮಗೂ, ನಿಮ್ಮ ಕುಟುಂಬಕ್ಕೂ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು ಎಂದು ಕುಟುಂಬ ಸಮೇತರಾಗಿ ಅಭಿಮಾನಿಗಳಿಗೆ ಹಬ್ಬದ ಶುಭಾಶಯ ಕೋರಿದ್ದಾರೆ. ಪತ್ನಿ ರೇವತಿ ಹಾಗೂ ಮುದ್ದು ಮಗು ಜೊತೆಗೆ ನಿಖಿಲ್ ಅವರು ಫೋಟೋದಲ್ಲಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಈ ಫೋಟೋ ನೋಡಿದ ಅಭಿಮಾನಿಗಳು ನೆಚ್ಚಿನ ನಟನಿಗೆ ಹಬ್ಬದ ಶುಭಾಶಯವನ್ನು ಕೋರಿದ್ದಾರೆ. ಒಂದೇ ಫ್ರೇಮ್ನಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಮುದ್ದಾದ ಕುಟುಂಬವನ್ನು ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಸಂಕ್ರಾಂತಿಗೆ ಅಮೂಲ್ಯ ಮನೆಗೆ ಗಂಗೆ, ದ್ರೌಪದಿ ಆಗಮನ
View this post on Instagram
ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ವಿವಾಹದ ಬಳಿಕ ಇಬ್ಬರೂ ಜೊತೆಗೆ ನಿಂತಿದ್ದ ಕೆಲವು ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಕೆಲವೊಮ್ಮೆ ಹಬ್ಬದ ಸಂಭ್ರಮದಲ್ಲಿ, ತೋಟಕ್ಕೆ ಭೇಟಿ ಕೊಟ್ಟ ವೇಳೆ ಕೆಲವು ಫೋಟೊಗಳನ್ನು ಶೇರ್ ಮಾಡಿಕೊಂಡಿದ್ದರು. ಅದು ಬಿಟ್ಟರೆ ಸಂದರ್ಶನದಲ್ಲಾಗಲಿ, ಸಿನಿಮಾ ಪ್ರಚಾರದಲ್ಲಾಗಲಿ ರೇವತಿ ನಿಖಿಲ್ ಕುಮಾರಸ್ವಾಮಿ ಕಾಣಿಸಿಕೊಂಡಿರಲಿಲ್ಲ. ಪತಿಯ ಸಿನಿಮಾದ ಬಗ್ಗೆ ಅಭಿಪ್ರಾಯವನ್ನೂ ಹಂಚಿಕೊಂಡಿಲ್ಲ. ಆದರೆ ಇದೇ ಮೊದಲ ಬಾರಿಗೆ ನಿಖಿಲ್ ಪತ್ನಿ ರೇವತಿರೊಂದಿಗೆ ರೈಡರ್ ಸಿನಿಮಾದ ಡವಾ ಡವಾ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಈ ಹಿಂದೆ ವೈರಲ್ ಆಗಿತ್ತು. ಇದನ್ನೂ ಓದಿ: ಬೇಬಿ ಬಂಪ್ ಫೋಟೋಶೂಟ್ನಲ್ಲಿ ನಟಿ ಅಮೂಲ್ಯ
ಡವಾ ಡವಾ ಹಾಡಿನ 11 ಸೆಕೆಂಡುಗಳ ತುಣುಕಿನ ಕೊನೆಯಲ್ಲಿ ಅತಿಥಿಯಾಗಿ ಎಂಟ್ರಿಕೊಟ್ಟಿದ್ದಾರೆ. ಈ ವೀಡಿಯೋ ನೋಡಿ ನಿಖಿಲ್ ಅಭಿಮಾನಿಗಳು ಸಿಕ್ಕಾ-ಪಟ್ಟೆ ಖುಷಿಯಾಗಿದ್ದಾರೆ. ಈ ವೀಡಿಯೋಗೆ ಮೆಚ್ಚುಗೆ ಸೂಚಿಸಿದ್ದರು.