ಚುನಾವಣೆ ಘೋಷಣೆ ಆಗುತ್ತಿದ್ದಂತೆಯೇ ಕಾಲಿಗೆ ಚಕ್ರಕಟ್ಟಿಕೊಂಡು ರಾಜ್ಯ ಸುತ್ತುತ್ತಿದ್ದಾರೆ ನಟ ಪವನ್ ಕಲ್ಯಾಣ್ (Pawan Kalyan). ಲೋಕಸಭೆ ಮತ್ತು ಮುಂದಿನ ಆಂಧ್ರದ ವಿಧಾನಸಭೆ ಚುನಾವಣೆಗಾಗಿ ಅವರು ಭರ್ಜರಿ ಸಿದ್ದತೆ ನಡೆಸಿದ್ದಾರೆ. ಹಗಲು ರಾತ್ರಿ ಪ್ರಚಾರದಲ್ಲಿ ತೊಡಗಿದ್ದರಿಂದ ಪವನ್ ಕಲ್ಯಾಣ್ ಆಯಾಸಗೊಂಡಿದ್ದಾರಂತೆ.
ಪಿಠಾಪುರಂ ಕ್ಷೇತ್ರದಿಂದ ಪವನ್ ಕಲ್ಯಾಣ್ ಚುನಾವಣೆಗೆ ಸ್ಪರ್ಧಿಸುವುದರಿಂದ ಅಲ್ಲಿ ಹೆಚ್ಚೆಚ್ಚು ಸಭೆಗಳನ್ನು ನಡೆಸಿದ್ದಾರೆ. ನಿನ್ನೆ ನಡೆದ ಸಭೆಯ ನಂತರ ಪವನ್ ಅಸ್ವಸ್ಥರಾದರು ಎನ್ನಲಾಗುತ್ತಿದೆ. ಜೊತೆಗೆ ಅವರಿಗೆ ಜ್ವರ ಕೂಡ ಬಾಧಿಸುತ್ತಿದೆ ಎಂದು ಅವರ ಆಪ್ತರು ತಿಳಿಸಿದ್ದಾರೆ.
ಜ್ವರ ಮತ್ತು ಕೆಮ್ಮಿನಿಂದ ವಿಪರೀತ ಬಳಲುತ್ತಿರುವ ಪವನ್ ಕಲ್ಯಾಣ್, ಈಗಾಗಲೇ ಚಿಕಿತ್ಸೆ ಪಡೆದುಕೊಂಡು ವಿಶ್ರಾಂತಿ ಪಡೆಯುತ್ತಿದ್ದಾರಂತೆ. ಮತ್ತೆ ಅವರು ತಮ್ಮ ರಾಜಕೀಯ ಚಟುವಟಿಕೆಯಲ್ಲಿ ಭಾಗಿಯಾಗಲಿದ್ದಾರೆ.