ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಭೀತಿ ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಡೀ ರಾಜ್ಯ ಮಾತ್ರವಲ್ಲದೇ ದೇಶವೇ ಲಾಕ್ ಡೌನ್ ಆಗಿದೆ. ಈ ಹಿನ್ನೆಲೆಯಲ್ಲಿ ಇಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ದೇಣಿಗೆ ನೀಡಿದ್ದಾರೆ.
ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರು #ಕೋವಿಡ್_19 ಮುಖ್ಯಮಂತ್ರಿಗಳ ಪರಿಹಾರ ನಿಧಿಯನ್ನು ಬಲಪಡಿಸುವ ಕೋರಿಕೆಗೆ ಸ್ಪಂದಿಸಿ, 50 ಲಕ್ಷ ರೂಪಾಯಿಗಳ ದೇಣಿಗೆಯ ಚೆಕ್ ಹಸ್ತಾಂತರಿಸಿದರು.#CMRFKarnataka #Covid_19 pic.twitter.com/mklPvqPpu9
— B.S.Yediyurappa (@BSYBJP) March 31, 2020
Advertisement
ಇಂದು ಬೆಳಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಪುನೀತ್, ಮುಖ್ಯಮಂತ್ರಿಗಳಿಗೆ 50 ಲಕ್ಷ ಚೆಕ್ ಹಸ್ತಾಂತರಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಎಸ್‍ವೈ, ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರು ಕೋವಿಡ್_19 ಮುಖ್ಯಮಂತ್ರಿಗಳ ಪರಿಹಾರ ನಿಧಿಯನ್ನು ಬಲಪಡಿಸುವ ಕೋರಿಕೆಗೆ ಸ್ಪಂದಿಸಿ, 50 ಲಕ್ಷ ರೂಪಾಯಿಗಳ ದೇಣಿಗೆಯ ಚೆಕ್ ಹಸ್ತಾಂತರಿಸಿದರು ಎಂದು ಫೋಟೋ ಸಮೇತ ಬರೆದುಕೊಂಡಿದ್ದಾರೆ.
Advertisement
ಮುಖ್ಯಮಂತ್ರಿ ಪರಿಹಾರ ನಿಧಿಗೆ ಪವರ್ ನೀಡಿದ ಪವರ್ ಸ್ಟಾರ್.#COVID19 ಸಂಕಷ್ಟದ ಸಮಯದಲ್ಲಿ ನಾಡಿನ ಹಿತಕ್ಕಾಗಿ ಸರ್ಕಾರದೊಂದಿಗೆ ಕೈಜೋಡಿಸಿ 50 ಲಕ್ಷ ರೂ. ನೀಡಿದ @PuneethRajkumar ರಿಗೆ ಧನ್ಯವಾದಗಳು.
ಸರ್ಕಾರಿ ನಿಯಮಗಳನ್ನು ಪಾಲಿಸಿ,ನೀವೂ ನಮ್ಮೊಂದಿಗೆ ಸಹಕರಿಸಿ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಹಾಯ ಮಾಡಬಯಸುವವರು ಆನ್ ಲೈನ್ ಪಾವತಿಸಿ. pic.twitter.com/10udlvs8Hs
— Dr. Ashwathnarayan C. N. (@drashwathcn) March 31, 2020
Advertisement
ಈ ಹಿಂದೆ ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್ 50 ಲಕ್ಷ ದೇಣಿಗೆ ನೀಡಿದ್ದರು. ಅವರು ಈ ಬಗ್ಗೆ ಟ್ವೀಟ್ ಮಾಡಿದ್ದ ಸಂಸದೆ, ಕೋವಿಡ್ -19 ಮಹಾಮಾರಿ ದೇಶದಲ್ಲಿ ಹರಡುತ್ತಿದ್ದು, ಅದರ ವಿರುದ್ಧದ ಹೋರಾಟದ ಸಂದರ್ಭದಲ್ಲಿ ನನ್ನ ಕಳಕಳಿಯ ಕೊಡುಗೆಯಾಗಿದೆ. ಮೊದಲಿಗೆ ಮಂಡ್ಯದ ಮಿಮ್ಸ್ ಗೆ ಕೊರೊನ ವಿರುದ್ಧ ಹೊರಾಡುವ ಸಲುವಾಗಿ ವೆಂಟಿಲೇಟರ್ ಮತ್ತು ಅಗತ್ಯ ಸಲಕರಣೆಗಳನ್ನು ಖರೀದಿಸಲು ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ 50 ಲಕ್ಷ ರೂ. ಗಳನ್ನು ನೀಡಿದ್ದೇನೆ ಎಂದು ಲೆಟರ್ ಪೋಸ್ಟ್ ಮಾಡಿದ್ದರು.
Advertisement
#HelpFightCorona #IndiaFightsCorona
ದೇಶಾದ್ಯಂತ #ಕೋವಿಡ್19 ವೈರಸ್ ರೋಗ ಹರಡುತ್ತಿದ್ದು ಅದನ್ನು ಪರಿಣಾಮಕಾರಿಯಾಗಿ ತರುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಪರಿಹಾರ ನಿಧಿಗೆ ನನ್ನ ಮಂಡ್ಯ ಜಿಲ್ಲಾ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.1,00,00,000 (1 ಕೋಟಿ)ಹಣವನ್ನು ವರ್ಗಾಯಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿರುತ್ತೇನೆ. pic.twitter.com/hJKKr7qp5I
— Sumalatha Ambareesh ???????? ಸುಮಲತಾ ಅಂಬರೀಶ್ (@sumalathaA) March 30, 2020
ಇನ್ನೊಂದು ಟ್ವೀಟ್ ಮಾಡಿ, ಪ್ರಧಾನ ಮಂತ್ರಿಗಳ ತುರ್ತು ಪರಿಹಾರ ನಿಧಿಗೆ ನನ್ನ ಎರಡು ತಿಂಗಳ ವೇತನ 2 ಲಕ್ಷ ರೂ. ಗಳನ್ನು ದೇಣಿಗೆಯಾಗಿ ನೀಡಿದ್ದೇನೆ. ಅಲ್ಲದೆ ಎರಡು ತಿಂಗಳ ವೇತನ 2 ಲಕ್ಷ ರೂ. ಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿ ಕೋವಿಡ್-19ಕ್ಕೆ ನೀಡಿದ್ದೇನೆ ಎಂದು ಬರೆದುಕೊಂಡು ನರೇಂದ್ರ ಮೋದಿ, ಬಿಎಸ್ ಯಡಿಯೂರಪ್ಪ, ಶ್ರೀರಾಮುಲುಗೆ ಟ್ಯಾಗ್ ಮಾಡಿದ್ದರು.
ಕೋವಿಡ್ -19 ಮಹಾಮಾರಿ ದೇಶದಲ್ಲಿ ಹರಡುತ್ತಿದ್ದು, ಅದರ ವಿರುದ್ಧದ ಹೋರಾಟದ ಸಂದರ್ಭದಲ್ಲಿ ನನ್ನ ಕಳಕಳಿಯ ಕೊಡುಗೆ.
ಮೊದಲಿಗೆ ಮಂಡ್ಯದ ಮಿಮ್ಸ್ ಗೆ ಕೊರೊನ ವಿರುದ್ಧ ಹೊರಡುವ ಸಲುವಾಗಿ ವೆಂಟಿಲೇಟರ್ ಮತ್ತು ಅಗತ್ಯ ಸಲಕರಣೆಗಳನ್ನು ಖರೀದಿಸಲು ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ 50, 00, 000 ಲಕ್ಷ ರೂ. ಗಳನ್ನು ನೀಡಿದ್ದೇನೆ. pic.twitter.com/13I0SgjZgg
— Sumalatha Ambareesh ???????? ಸುಮಲತಾ ಅಂಬರೀಶ್ (@sumalathaA) March 26, 2020