ತೆಲುಗಿನ ಖ್ಯಾತ ನಟ ಪ್ರಭಾಸ್ (Prabhas) ಮದುವೆ ವಿಚಾರ ಸದಾ ಸುದ್ದಿಯಲ್ಲಿರುತ್ತದೆ. ಅವರು ಮಾಧ್ಯಮಗಳಿಗೆ ಎದುರಾದಾಗೊಮ್ಮೆ ಮದುವೆ (Marriage) ವಿಚಾರ ಪ್ರಸ್ತಾಪವಾಗುತ್ತದೆ. ಜೊತೆಗೆ ಅಭಿಮಾನಿಗಳು ಕೂಡ ಅನೇಕ ಸಲ ಮದುವೆ ಬಗ್ಗೆ ಪ್ರಶ್ನೆಗಳನ್ನು ಕೇಳಿದ್ದಾರೆ. ಈ ಕುರಿತು ನಿನ್ನೆ ತಿರುಪತಿಯಲ್ಲಿ (Tirupati) ನಡೆದ ಆದಿ ಪುರುಷ ಸಿನಿಮಾದ ಪ್ರಿ ರಿಲೀಸ್ ಇವೆಂಟ್ ನಲ್ಲೂ ಇಂಥದ್ದೇ ಪ್ರಶ್ನೆ ಪ್ರಭಾಸ್ ಅವರಿಗೆ ಎದುರಾಯಿತು. ಇದೇ ಮೊದಲ ಬಾರಿಗೆ ಪ್ರಭಾಸ್ ಮದುವೆ ಬಗ್ಗೆ ಮಾತನಾಡಿದ್ದಾರೆ.
Advertisement
ಮದುವೆ ಪ್ರಶ್ನೆ ಕೇಳಿದಾಗೆಲ್ಲ ಏನಾದರೂ ಒಂದು ಸಬೂಬು ನೀಡಿ ಜಾರಿಕೊಳ್ಳುತ್ತಿದ್ದ ಪ್ರಭಾಸ್, ಇದೇ ಮೊದಲ ಬಾರಿಗೆ ಮದುವೆ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಮದುವೆಗೆ ಕಾಲ ಕೂಡಿ ಬರಲಿ. ಇದೇ ತಿರುಪತಿಯಲ್ಲೇ ನಾನು ಮದುವೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಆದರೆ, ಮದುವೆ ಯಾವಾಗ ಎನ್ನುವುದನ್ನು ಮಾತ್ರ ಅವರು ಹೇಳಿಕೊಂಡಿಲ್ಲ.
Advertisement
Advertisement
ಒಂದು ಕಡೆ ಆದಿ ಪುರುಷ (Adipurusha)ಸಿನಿಮಾ ಕಾರ್ಯಕ್ರಮ ಅದ್ದೂರಿಯಾಗಿ ನಡೆದರೆ ಮತ್ತೊಂದು ಕಡೆ ಸಿನಿಮಾ ಟೀಮ್ ಎಡವಟ್ಟು ಮಾಡಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ನಿರ್ದೇಶಕ ಓಂ ರಾವತ್, ನಾಯಕಿ ಕೃತಿ ಸನೂನ್ ಸೇರಿದಂತೆ ಹಲವರು ತಿರುಪತಿಗೆ ಆಗಮಿಸಿದ್ದರು. ಈ ವೇಳೆ ತಿರುಪತಿ ತಿಮ್ಮಪ್ಪನ ದರ್ಶನಕ್ಕೂ ಸಿನಿಮಾ ಟೀಮ್ ಬಂದಿತ್ತು. ಈ ಸಂದರ್ಭದಲ್ಲಿ ನಟಿ ಕೃತಿ ಸನೂನ್ ಮತ್ತು ನಿರ್ದೇಶಕ ಓಂ ರಾವತ್ ನಡೆದುಕೊಂಡ ರೀತಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇದನ್ನೂ ಓದಿ:ಪ್ರಣಿತಾ ಹಾಟ್ನೆಸ್ಗೆ ಸಂತೂರ್ ಮಮ್ಮಿ ಎಂದ ನೆಟ್ಟಿಗರು
Advertisement
ತಿಮ್ಮಪ್ಪನ (Thimmappa) ದರ್ಶನದ ನಂತರ ಕೃತಿ ಸನೂನ್ ಕಾರಿನತ್ತ ಬರುತ್ತಾರೆ. ಆಮೇಲೆ ಬೀಳ್ಕೊಡುವುದಕ್ಕಾಗಿ ಕಾರಿನಿಂದ ಸ್ವಲ್ಪವೇ ದೂರದಲ್ಲಿದ್ದ ನಿರ್ದೇಶಕ ಓಂ ರಾವತ್ ಹತ್ತಿರಕ್ಕೆ ಬರುತ್ತಾರೆ. ಆಗ ಕೃತಿ ಸನೂನ್ ನನ್ನು ತಬ್ಬಿಕೊಳ್ಳುವ ನಿರ್ದೇಶಕ ಓಂ, ನಟಿಗೆ ಮುತ್ತಿಟ್ಟು ಬೀಳ್ಕೊಡುತ್ತಾರೆ. ದೇವಸ್ಥಾನದ ಆವರಣದಲ್ಲಿ ಈ ಘಟನೆ ನಡೆದದ್ದು, ವಿಡಿಯೋ ವೈರಲ್ ಆಗಿದೆ. ಇದನ್ನು ಕಂಡ ತಿಮ್ಮಪ್ಪನ ಭಕ್ತರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ದೇವಸ್ಥಾನದ ಆವರಣದಲ್ಲಿ ಹೇಗೆ ನಡೆದುಕೊಳ್ಳಬೇಕು, ಹೇಗೆ ನಡೆದುಕೊಳ್ಳಬಾರದು ಎನ್ನುವ ಅರಿವು ಇರಬೇಕು. ಅಂಥವರು ಮಾತ್ರ ದೇವಸ್ಥಾನಕ್ಕೆ ಬರಬೇಕು ಎಂದು ಭಕ್ತರು ಕಾಮೆಂಟ್ ಮಾಡಿದ್ದಾರೆ. ಬಹಿರಂಗವಾಗಿ, ಅದರಲ್ಲೂ ದೇವಸ್ಥಾನದ ಆವರಣದಲ್ಲೇ ನಟಿಗೆ ಮುತ್ತಿಟ್ಟು ಬೀಳ್ಕೊಡುವುದು ಸರಿಯಾದ ಕ್ರಮವಲ್ಲ. ಇದಕ್ಕೆ ಇಬ್ಬರೂ ಕ್ಷಮೆ ಕೇಳಬೇಕು ಎಂದು ಭಕ್ತರು ಆಗ್ರಹಿಸಿದ್ದಾರೆ.
ಇದೊಂದು ಸ್ನೇಹಪೂರ್ವಕವಾದ ಕಿಸ್ ಆಗಿದ್ದರೂ, ಅದು ಸಹಜವಾಗಿದ್ದರೂ ಭಕ್ತರು ಅದನ್ನು ಹಾಗೆ ನೋಡಿಲ್ಲ. ಹಾಗಾಗಿ ವಿವಾದಕ್ಕೆ ಆ ವಿಡಿಯೋ ನಾಂದಿ ಹಾಡಿದೆ. ಅಂದಹಾಗೆ ನಿನ್ನೆ ಆದಿ ಪುರುಷ ಸಿನಿಮಾದ ಪ್ರಿ ರಿಲೀಸ್ ಇವೆಂಟ್ ಅದ್ಧೂರಿಗಾಗಿ ತಿರುಪತಿಯಲ್ಲಿ ನಡೆದಿದೆ. ಲಕ್ಷಾಂತರ ಅಭಿಮಾನಿಗಳು ಈ ಕಾರ್ಯಕ್ರವನ್ನು ಕಣ್ತುಂಬಿಕೊಂಡಿದ್ದಾರೆ. ಈಗಾಗಲೇ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಭಾರೀ ನಿರೀಕ್ಷೆಯನ್ನು ಹುಟ್ಟುಹಾಕಿದೆ.