‘ಬಾಹುಬಲಿ’ (Bahubali) ಸೂಪರ್ ಸ್ಟಾರ್ ಪ್ರಭಾಸ್ ಅವರು ‘ಆದಿಪುರುಷ್’ (Adipurush) ರಾಮನಾಗಿ ಅಬ್ಬರಿಸಲು ರೆಡಿಯಾಗಿದ್ದಾರೆ. ಕೆಲವೇ ದಿನಗಳಲ್ಲಿ ಶ್ರೀರಾಮನಾಗಿ ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಬೆಳ್ಳಿತೆರೆಗೆ ಎಂಟ್ರಿ ಕೊಡುತ್ತಿದ್ದಾರೆ. ಈ ಬೆನ್ನಲ್ಲೇ ಭದ್ರಾಚಲಂನಲ್ಲಿರುವ ಸೀತಾ ರಾಮಚಂದ್ರಸ್ವಾಮಿ ದೇವಸ್ಥಾನಕ್ಕೆ 10 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಈ ದೇವಸ್ಥಾನದ ಮೇಲ್ವೀಚಾರಕರಿಗೆ 10 ಲಕ್ಷದ ಚೆಕ್ ಅನ್ನು ಹಸ್ತಾಂತರಿಸಿದ್ದಾರೆ.
Advertisement
ಸಾಲು ಸಾಲು ಸಿನಿಮಾಗಳ ಸೋಲಿನ ನಂತರ ‘ಬಾಹುಬಲಿ’ ಪ್ರಭಾಸ್ ರಾಮನ ಅವತಾರ ತಾಳಿದ್ದಾರೆ. ‘ಆದಿಪುರುಷ್’ ಸಿನಿಮಾ ಇದೇ ಜೂನ್ 16ಕ್ಕೆ ತೆರೆಗೆ ಅಬ್ಬರಿಸಲು ರೆಡಿಯಾಗಿದ್ದಾರೆ. ಟೀಸರ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಾಕಷ್ಟು ಟೀಕೆಗಳ ನಡುವೆ ಪ್ರಭಾಸ್ (Prabhas) ಸಿನಿಮಾ ತೆರೆಗೆ ಅಪ್ಪಳಿಸುತ್ತಿದೆ. ಇದನ್ನೂ ಓದಿ:ಮದುವೆಯಾಗಿ 14 ಕಳೆದರೂ ಮಕ್ಕಳಾಗದ್ದಕ್ಕೆ ಮಹತ್ವದ ನಿರ್ಧಾರ ಕೈಗೊಂಡ ‘ಲಾಲಿಹಾಡು’ ನಟಿ
Advertisement
Advertisement
ತೆಲಂಗಾಣ ರಾಜ್ಯದ ಭದ್ರಾಚಲಂನಲ್ಲಿರುವ ಶ್ರೀ ಸೀತಾ ರಾಮಚಂದ್ರ ಸ್ವಾಮಿ ದೇವಸ್ಥಾನವು ಬಹಳ ಪ್ರಸಿದ್ಧವಾಗಿದೆ. ಇಲ್ಲಿ ಪ್ರತಿ ವರ್ಷವೂ ಸೀತಾರಾಮ ಕಲ್ಯಾಣವನ್ನು ಆಚರಣೆ ಮಾಡಲಾಗುತ್ತೆ. ವಿವಿಧ ಕಡೆಗಳಿಂದ ಅನೇಕ ಭಕ್ತರು ಆಗಮಿಸುತ್ತಾರೆ. ಇದೇ ಶ್ರೀ ಸೀತಾರಾಮಚಂದ್ರಸ್ವಾಮಿ ದೇವಸ್ಥಾನಕ್ಕೆ ‘ಆದಿಪುರುಷ್’ ನಟ ಪ್ರಭಾಸ್ ಸುಮಾರು 10 ಲಕ್ಷ ರೂಪಾಯಿ ದೇಣಿಗೆಯಾಗಿ ನೀಡಿದ್ದಾರೆ. ಪ್ರಭಾಸ್ ಅವರ ತಂದೆ ಸೂರ್ಯನಾರಾಯಣ ರಾಜು ಹೆಸರಿಲ್ಲಿ ದೇಣಿಗೆ ನೀಡಿದ್ದಾರೆ. ಈ 10 ಲಕ್ಷ ರೂ. ಚೆಕ್ ಅನ್ನು ದೇವಸ್ಥಾನದ ಮೇಲ್ವೀಚಾರಕರಿಗೆ ಪ್ರಭಾಸ್ ಆಪ್ತ ವಿಕ್ಕಿ ಹಸ್ತಾಂತರ ಮಾಡಿದ್ದಾರೆ. ಪ್ರಭಾಸ್ ನಡೆಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.
Advertisement
ಪ್ರಭಾಸ್ ಶೀಘ್ರದಲ್ಲಿಯೇ ಶ್ರೀರಾಮನ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ‘ಆದಿಪುರುಷ್’ ಸಿನಿಮಾದಲ್ಲಿ ಪ್ಯಾನ್ ಇಂಡಿಯಾ ಸ್ಟಾರ್ ರಾಘವನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಈ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ಇನ್ನಿಲ್ಲದ ಕುತೂಹಲವಿದೆ. ‘ಆದಿಪುರುಷ್’ ಸಿನಿಮಾವನ್ನು ಬಾಲಿವುಡ್ ನಿರ್ದೇಶಕ ಓಂ ರಾವುತ್ ಆಕ್ಷನ್ ಕಟ್ ಹೇಳಿದ್ದಾರೆ. ಪ್ರಭಾಸ್ ಜೊತೆ ಸೀತೆಯಾಗಿ ಕೃತಿ ನಟಿಸಿದ್ದರೆ, ಲಕ್ಷ್ಮಣನಾಗಿ ಸನ್ನಿ ಸಿಂಗ್, ಹನುಮಂತನಾಗಿ ದೇವದತ್ತ ನಾಗೆ, ರಾವಣನ ಪಾತ್ರದಲ್ಲಿ ಸೈಫ್ ಅಲಿಖಾನ್ ನಟಿಸಿದ್ದಾರೆ.