ಡಾರ್ಲಿಂಗ್ ಪ್ರಭಾಸ್ (Darling Prabhas) ಅವರು ‘ಕಲ್ಕಿ’ ಆಗಿ ಸಕ್ಸಸ್ ಕಂಡ ಮೇಲೆ ರುದ್ರನಾಗಿ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ‘ಕಣ್ಣಪ್ಪ’ (Kannappa) ಸಿನಿಮಾದಲ್ಲಿ ಕೊನೆಗೂ ಪ್ರಭಾಸ್ ಲುಕ್ ರಿವೀಲ್ ಆಗಿದೆ. ಚಿತ್ರದ ನಯಾ ಪೋಸ್ಟರ್ ರಿವೀಲ್ ಆಗಿದೆ. ಇದನ್ನೂ ಓದಿ:ಸ್ಯಾಂಡಲ್‌ವುಡ್‌ಗೆ ‘ಮಹಾನಟಿ’ ವಿನ್ನರ್ ಎಂಟ್ರಿ- ‘ಕಾಟೇರ’ ಡೈರೆಕ್ಟರ್ ತರುಣ್ ಸಿನಿಮಾದಲ್ಲಿ ಪ್ರಿಯಾಂಕಾ
ಮಂಚು ವಿಷ್ಣು ಹೀರೋ ಆಗಿ ನಟಿಸುತ್ತಿರುವ ಚಿತ್ರದಲ್ಲಿ ಪ್ರಭಾಸ್ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. 100 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣ ಆಗುತ್ತಿರುವ ಈ ಚಿತ್ರದಲ್ಲಿ ಪ್ರಭಾಸ್ ರುದ್ರನಾಗಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಹರಡಿದ ತಲೆಗೂದಲು, ಕೈಯಲ್ಲಿ ಅರ್ಧ ಚಂದ್ರಾಕೃತಿಯ ಕೋಲು ಹಿಡಿದು ಪ್ರಭಾಸ್ ಕಾಣಿಸಿಕೊಂಡಿದ್ದಾರೆ. ಕೊರಳಲ್ಲಿ ರುದ್ರಾಕ್ಷಿ ಮಾಲೆ ಇದೆ. ಹೆಗಲಿಗೆ ಕೇಸರಿ ವಸ್ತ್ರವನ್ನು ಹೊದ್ದಿದ್ದಾರೆ. ಹಣೆಯಲ್ಲಿ ವಿಭೂತಿ ಇಟ್ಟುಕೊಂಡು ನಗುತ್ತಾ ಪ್ರಭಾಸ್ ಅವರು ಕಾಣಿಸಿಕೊಂಡಿದ್ದು, ಈ ಲುಕ್ ಎಲ್ಲರ ಗಮನ ಸೆಳೆಯುತ್ತಿದೆ.
View this post on Instagram
ಇನ್ನೂ ‘ಕಣ್ಣಪ್ಪ’ ಸಿನಿಮಾದಲ್ಲಿ ಶಿವನಾಗಿ ಅಕ್ಷಯ್ ಕುಮಾರ್ ನಟಿಸಿದ್ದಾರೆ. ಶಿವನ ಅನುಯಾಯಿ ಪ್ರಭಾಸ್ ಬಣ್ಣ ಹಚ್ಚಿದ್ದಾರೆ. ಸಿನಿಮಾದಲ್ಲಿ ವಿಷ್ಣು ಮಂಚು ಜೊತೆ ಮೋಹನ್ ಲಾಲ್, ಕಾಜಲ್, ಪ್ರೀತಿ ಮುಕುಂದನ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಈ ಚಿತ್ರವನ್ನು ವಿಷ್ಣು ಮಂಚು ತಂದೆ ಮೋಹನ್ ಬಾಬು ನಿರ್ಮಾಣ ಮಾಡುತ್ತಿದ್ದಾರೆ. ಇದೇ ಏ.25ಕ್ಕೆ ಸಿನಿಮಾ ರಿಲೀಸ್ ಆಗಲಿದೆ.